ದಾವಣಗೆರೆ: ಬಸ್ ಪಲ್ಟಿ, ಓರ್ವ ಮಹಿಳೆ ಸಾವು, ಹಲವರಿಗೆ ಗಾಯ

Posted By:
Subscribe to Oneindia Kannada

ದಾವಣಗೆರೆ, ಏಪ್ರಿಲ್. 09 : ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜಮ್ಮಾಪುರ ಗ್ರಾಮದ ಬಳಿ ನಡೆದಿದೆ.

35 ಪ್ರಯಾಣಿಕರಿದ್ದ ಬಸ್ಸು ಚನ್ನಗಿರಿಯಿಂದ ಬೀರೂರಿಗೆ ಹೋಗುತ್ತಿದ್ದ ವೇಳೆ ಜಮ್ಮಾಪುರ ಗ್ರಾಮದ ಬಳಿ ಪಲ್ಟಿಯಾಗಿದೆ. 35 ಜನರಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Woman dies several injured in pravit bus overturned near jammapur Davangere

ಮಹಿಳೆಯ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸಣ್ಣ ಪ್ರಮಾಣದಲ್ಲಿ ಗಾಯಗೊಂಡವರನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀರೂರು-ಸಮ್ಮಸಗಿ ಮಾರ್ಗ ಮಧ್ಯೆ ರಸ್ತೆ ಕಾಮಾಗಾರಿ ನಡೆಯುತ್ತಿದ್ದು, ರಸ್ತೆ ಇಕ್ಕಟ್ಟಾಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಬಸ್ಸನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Woman dies several injured in pravit bus overturned near Jammapur village, Davangere district on April 09.
Please Wait while comments are loading...