ಮೊಬೈಲ್ ಕಳೆದುಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ
ದಾವಣಗೆರೆ, ಸೆಪ್ಟೆಂಬರ್ 30: ಮೊಬೈಲ್ ಕಳೆದುಹೋದದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ನಿಟ್ಟುವಳ್ಳಿ ನಿವಾಸಿ ಸಿದ್ದೇಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ದಾವಣಗೆರೆಯ ಡಿಸಿಎಂ ಟೌನ್ ಶಿಪ್ ಬಳಿ ಈ ಘಟನೆ ನಡೆದಿದ್ದು, ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟೆಂಬರ್ 29ರಂದು ಭಾನುವಾರ ತಮ್ಮ ಪಕ್ಕದ ಮನೆಯವರ ಮೊಬೈಲನ್ನು ಪಡೆದುಕೊಂಡಿದ್ದ ಸಿದ್ದೇಶ್ ಅಂದೇ ಅದನ್ನು ಕಳೆದುಕೊಂಡಿದ್ದ. ವಿಷಯ ತಿಳಿದು ಆ ಮನೆಯವರೂ ಈತನನ್ನು ಬೈದು, ಸಿದ್ದೇಶ್ ಮನೆಯವರಿಗೆ ವಿಷಯ ತಿಳಿಸುವುದಾಗಿ ಹೇಳಿದ್ದರು.

ಈ ವಿಷಯಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಇಂದು ಬೆಳಗ್ಗಿನ ಜಾವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕೆಟಿಜೆ ನಗರ ಹಾಗೂ ರೈಲ್ವೆ ಪೋಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications