ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕಾಂಗ್ರೆಸ್-ಜೆಡಿಎಸ್ ಅಧಿಕಾರದ ಆಸೆಗೆ ಮೈತ್ರಿಯಾಗಲು ಹೊರಟಿದೆ'

By ದೇವನಹಳ್ಳಿ ಪ್ರತಿನಿಧಿ
|
Google Oneindia Kannada News

ದೇವನಹಳ್ಳಿ, ಮೇ 18 : ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ದೇವನಹಳ್ಳಿ ತಾಲೂಕು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು.

ಬಿಜೆಪಿ ಕಚೇರಿಯಿಂದ ಕಾಲ್ನಡಿಗೆಯ ಮೂಲಕ ಪ್ರಧಾನ ಮಂತ್ರಿ ಮೋದಿಗೆ, ಯಡಿಯೂರಪ್ಪಗೆ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಜೈಕಾರ ಹಾಕುತ್ತಾ ಪಟ್ಟಣದ ಹಳೇ ಬಸ್ ನಿಲ್ದಾಣಕ್ಕೆ ಆಗಮಿಸಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು.

ಚಿತ್ರಗಳು : ಸರ್ಕಾರ ರಚಿಸಿ, ಮುಖ್ಯಮಂತ್ರಿಯಾದ ಯಡಿಯೂರಪ್ಪ

ನಂತರ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ನಮ್ಮ ರಾಜ್ಯದಲ್ಲಿ ಬಿ.ಎಸ್.ವೈ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮೆಲ್ಲರ ಕನಸಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ 104 ಸ್ಥಾನಗಳನ್ನು ಪಡೆದು ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ಯಡಿಯೂರಪ್ಪ ಅವರು ಸಿಎಂ ಆಗುವುದರೊಂದಿಗೆ ನಮ್ಮ ಕನಸು ನನಸಾಗಿದೆ.

Devanahalli Taluk BJP leaders and activists celebrated triumph.

ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ತಿಳಿಸಿದ್ದರು. ಅದರಂತೆ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣ ಒಂದು ಲಕ್ಷದವರೆಗೆ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್‌ಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಮೊದಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮೆಟ್ರೋ, ಕಾವೇರಿ ನೀರು, ಕೈಗಾರಿಕಾ ಪ್ರದೇಶ, ಐಟಿಬಿಟಿ ಕಾರ್ಯಾಗತ ಮಾಡಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. ಅವಶ್ಯಕತೆ ಇರುವ ಶಾಸಕ ಸಂಖ್ಯೆಯನ್ನು ಶೀಘ್ರದಲ್ಲಿ ಬಹುಮತದೊಂದಿಗೆ ಸಾಬೀತುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಲ್ಲಿ ಇನ್ನೆರಡು ಕ್ಷೇತ್ರ ಬಿಜೆಪಿ 'ಕೈ' ವಶವಾಗಬೇಕಿತ್ತು! ಬೆಂಗಳೂರಲ್ಲಿ ಇನ್ನೆರಡು ಕ್ಷೇತ್ರ ಬಿಜೆಪಿ 'ಕೈ' ವಶವಾಗಬೇಕಿತ್ತು!

ದೇವನಹಳ್ಳಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣೆಗೂ ಮುನ್ನ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಂಡು ಇದೀಗ ಅಧಿಕಾರದ ಆಸೆಗೆ ಮೈತ್ರಿ ಆಗಲು ಹೊರಟ್ಟಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಚುನಾವಣೆಯಲ್ಲಿ ಬಹುಮತ ಗಳಿಸದೇ ಇದ್ದಲ್ಲಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಹೇಳುತ್ತಿದ್ದ ಅವರು ಈಗ ಅಧಿಕಾರದ ದಾಹ ತೀರಿಸಿಕೊಳ್ಳಲು ಕಾಂಗ್ರೆಸ್ ಜೊತೆ ಮೈತ್ರಿಗೆ ಸಿದ್ದರಾಗಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರ, ರಾಜ್ಯದಲ್ಲಿ ಯಡಿಯೂರಪ್ಪ ಆಡಳಿತದಿಂದ ರಾಜ್ಯದಲ್ಲಿ ತಲೆದೂರಿರುವ ಮಹದಾಯಿ, ಕಾವೇರಿ ವ್ಯಾಜ್ಯವನ್ನು ಕರ್ನಾಟಕದ ಪರ ಇತ್ಯಾರ್ಥ ಮಾಡುತ್ತಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 10 ಸಾವಿರ ಮತಗಳನ್ನು ನೀಡದ ಮತದಾರರಿಗೆ ಧನ್ಯವಾದಗಳು.

ಕೆಲವು ಕಾರಣಾಂತರಗಳಿಂದ ಸೋಲು ಅನುಭವಿಸುವಂತಾಯಿತು. ರಾಜಕೀಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲಿನಿಂದ ಬಿಜೆಪಿ ಕಾರ್ಯಕರ್ತರು ಯಾರು ಸಹ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ತಿಳಿಸಿದ್ದರು.

English summary
Karnataka Election Results 2018: Devanahalli Taluk BJP leaders and activists celebrated triumph. They praised Prime Minister Modi, karnataka chief minister yeddyurappa and national president Amit Shah praised
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X