ಎಂಎಂ ಕಲಬುರ್ಗಿ ಹತ್ಯೆಗೆ 1 ವರ್ಷ, ಆರೋಪಿ ಎಲ್ಲಿ?

Posted By:
Subscribe to Oneindia Kannada

ಧಾರವಾಡ, ಆಗಸ್ಟ್ 30 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆಯಾಗಿ ಒಂದು ವರ್ಷ ಕಳೆದಿದೆ. ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಆದರೆ, ಇದುವರೆಗೂ ಆರೋಪಿಗಳ ಬಂಧನವಾಗಿಲ್ಲ.

2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಬೆಳಗ್ಗೆ 8.40ರ ಸುಮಾರಿಗೆ ಮನೆಗೆ ಆಗಮಿಸಿದ್ದ ಅಪರಿಚಿತರು ಗುಂಡಿನ ದಾಳಿ ನಡೆಸಿ ಕಲಬುರ್ಗಿ ಅವರನ್ನು ಹತ್ಯೆ ಮಾಡಿದ್ದರು.[ಕಲಬುರ್ಗಿ ಹತ್ಯೆ, ಶೀಘ್ರದಲ್ಲೇ ಆರೋಪಿಗಳ ಬಂಧನ : ಸಿಎಂ]

mm kalburgi

ಮೊದಲು ಸ್ಥಳೀಯ ಪೊಲೀಸರು ಹತ್ಯೆಯ ತನಿಖೆ ಆರಂಭಿಸಿದರು. ನಂತರ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಮಂಗಳವಾರಕ್ಕೆ ಹತ್ಯೆ ನಡೆದು ಒಂದು ವರ್ಷ ಕಳೆದಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಸರ್ಕಾರ ಹೇಳಿಕೆ ನೀಡುತ್ತಿದೆ. ಆದರೆ, ಯಾವುದೇ ಆರೋಪಿಗಳ ಬಂಧನವಾಗಿಲ್ಲ.[ಎಂಎಂ ಕಲಬುರಗಿ ಬೆಂಬಲಿಸಿ ಟ್ವಿಟ್ಟರ್ ಅಭಿಯಾನ]

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆಯಾಗಿ ನಾಳೆಗೆ (ಆ.30)ಕ್ಕೆ ಒಂದು ವರ್ಷ. ಇನ್ನೂ ಆರೋಪಿಗಳ ಪತ್ತೆ ಸಾಧ್ಯವಾಗಿಲ್ಲ, ಸಿಐಡಿ ಹಾಗೂ ಸಿಬಿಐ ಅಧಿಕಾರಗಳು ತನಿಖೆ ನಡೆಸುತ್ತಿದ್ದಾರೆ' ಎಂದು ಹೇಳಿದ್ದಾರೆ. [ಕಲ್ಲುಬಂಡೆಯಂತೆ ಕುಳಿತಿರುವ ಎಂಎಂ ಕಲಬುರ್ಗಿ ಹತ್ಯೆ ತನಿಖೆ]

ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯ ತನಿಖೆ ನಡೆಸುತ್ತಿರುವ ಸಿಬಿಐ ಡಾ.ವಿರೇಂದ್ರ ತಾವಡೆ ಎಂಬುವವರನ್ನು ಬಂಧಿಸಿದೆ. ಕಲಬುರ್ಗಿ, ದಾಬೋಲ್ಕರ್ ಮತ್ತು ಗೋವಿಂದ ಪನ್ಸಾರೆ ಅವರನ್ನು ಒಂದೇ ಸಂಘಟನೆಯವರು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
It's a year for Professor M.M.Kalburgi murder.But, there is no arrest. Kalburgi was shot dead in the morning of 30 August 2015 at his residence Dharwad.
Please Wait while comments are loading...