ಗರ್ಭದೊಳಗಿದ್ದ ಮಗುವಿನ ಅಂಗವಿಕಲತೆ ಬಗ್ಗೆ ಪೋಷಕರಿಗೆ ತಿಳಿಸದ ವೈದ್ಯೆಗೆ ₹11.10 ಲಕ್ಷ ದಂಡ

ಗರ್ಭದೊಳಗಿದ್ದ ಮಗುವಿನ ಅಂಗವಿಕಲತೆ ಬಗ್ಗೆ ಗೊತ್ತಿದ್ದರೂ ಆ ವಿಷಯವನ್ನು ಪೋಷಕರಿಗೆ ತಿಳಿಸದ ಪ್ರಸೂತಿ ತಜ್ಞೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ 11,10,000ರೂ ದಂಡ ವಿಧಿಸಿದೆ.

ಧಾರವಾಡ, ಫೆಬ್ರವರಿ 8: ಗರ್ಭದೊಳಗಿದ್ದ ಮಗುವಿನ ಅಂಗವಿಕಲತೆ ಬಗ್ಗೆ ಗೊತ್ತಿದ್ದರೂ ಆ ವಿಷಯವನ್ನು ಪೋಷಕರಿಗೆ ತಿಳಿಸದೇ ಮೋಸ ಮಾಡಿ ವೈದ್ಯಕೀಯ ನಿರ್ಲಕ್ಷ ತೋರಿದ ಆರೋಪದ ಮೇಲೆ ಪ್ರಸೂತಿ ತಜ್ಞೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ 11,10,000ರೂ ದಂಡ ವಿಧಿಸಿದೆ.

ಜಿಲ್ಲೆಯ ಶ್ರೀನಗರ ಭಾವಿಕಟ್ಟಿ ಪ್ಲಾಟ್ ನಿವಾಸಿ ಪರಶುರಾಮ ಘಾಟಗೆ ಎನ್ನುವವರ ತಮ್ಮ ಪತ್ನಿ ಪ್ರೀತಿ ಅವರು ಗರ್ಭವತಿಯಾದ 3ನೇ ತಿಂಗಳಿಂದ 9ನೇ ತಿಂಗಳಿನವರೆಗೆ ಧಾರವಾಡದ ಮಾಳಮಡ್ಡಿಯಲ್ಲಿರುವ ಪ್ರಶಾಂತ ನರ್ಸಿಂಗ್ ಹೋಮನ್ ಪ್ರಸೂತಿ ತಜ್ಞೆ ಡಾ.ಸೌಭಾಗ್ಯ ಕುಲಕರ್ಣಿರವರ ಹತ್ತಿರ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆದಿದ್ದರು.

ಪ್ರಸೂತಿ ತಜ್ಞರು 12/07/2018 ರಿಂದ 08/01/2019 ರವರೆಗೆ 5 ಬಾರಿ ಪ್ರೀತಿ ಅವರಿಗೆ ಸ್ಕ್ಯಾನ್ ಮಾಡಿದ್ದರು. ಗರ್ಭದಲ್ಲಿನ ಮಗುವಿನ ಬೆಳವಣಿಗೆ ಚೆನ್ನಾಗಿದೆ ಹಾಗೂ ಮಗು ಆರೋಗ್ಯವಾಗಿದೆ ಎಂದು ತಿಳಿಸುತ್ತಿದ್ದರು. ದೂರುದಾರರ ಪತ್ನಿ ತನ್ನ 9ನೇ ತಿಂಗಳಿನಲ್ಲಿ ಅದೇ ವೈದ್ಯರ ಹತ್ತಿರ ತಪಾಸಣೆಗೆ ಹೋದಾಗ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲು ಅವರು ಸಲಹೆ ನೀಡಿದ್ದರು. ಆದರೆ ಹಣಕಾಸಿನ ತೊಂದರೆಯಿಂದಾಗಿ ದೂರುದಾರ ತನ್ನ ಪತ್ನಿಯ ಹೆರಿಗೆಯನ್ನು ಧಾರವಾಡ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ 31/01/2019 ರಂದು ಮಾಡಿಸಿದ್ದರು. ಆಗ ಹೆಣ್ಣು ಮಗು ಜನಿಸಿದ್ದು ಅದರ ಎರಡು ಕಾಲುಗಳು ಅಂಗವಿಕಲತೆಯಿಂದ ಕೂಡಿದ್ದವು.

₹11.10 Lakh Fine For Doctor At Dharwad

ಆದರೆ, ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳ ಪ್ರಕಾರ ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನ ನಿಯಮಾವಳಿ ಪ್ರಕಾರ ಗರ್ಭಧಾರಣೆಯ 18-20 ವಾರಗಳ ಸ್ಕ್ಯಾನಿಂಗ್‌ನಲ್ಲಿ ಮಗುವಿನ ಆರೋಗ್ಯ, ಅದರ ಅಂಗಾಂಗಗಳು ಸರಿಯಾಗಿ ಇವೆಯೋ ಅಥವಾ ಇಲ್ಲವೋ ಎನ್ನುವ ಬಗ್ಗೆ ತಪಾಸಣೆ ಮಾಡಿದ ವೈದ್ಯರಿಗೆ ಗೊತ್ತಾಗುತ್ತದೆ. ಆದರೆ, 12/07/2018 ರಿಂದ 08/01/2019 ರವರೆಗೆ 20 ವಾರಗಳಿಂದ 36 ವಾರಗಳ ಪ್ರೀತಿಯ ಸ್ಕ್ಯಾನಿಂಗನ್ನು ಎದುರುದಾರ ಪ್ರಸೂತಿ ತಜ್ಞರು ತೆಗೆದು ನೋಡಿದಾಗ ಅವರಿಗೆ ಮಗುವಿನ ಅಂಗವಿಕಲತೆ ಬಗ್ಗೆ ಗೊತ್ತಿದ್ದರೂ ಆ ವಿಷಯವನ್ನು ದೂರುದಾರರಿಗೆ ತಿಳಿಸದೇ ಮೋಸ ಮಾಡಿ ವೈದ್ಯಕೀಯ ನಿರ್ಲಕ್ಷ ತೋರಿ ತಮಗೆ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ ಆ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಪ್ರಸೂತಿ ತಜ್ಞರು ಕಾಲಕಾಲಕ್ಕೆ ದೂರುದಾರರ ಪತ್ನಿಯ ಸ್ಕ್ಯಾನಿಂಗ್ ತೆಗೆದು ತಪಾಸಣೆ ಮಾಡಿದಾಗ ಅವರಿಗೆ ಗರ್ಭದಲ್ಲಿರುವ ಶಿಶುವಿನ ಅಂಗವಿಕಲತೆ ಗೊತ್ತಾಗುತ್ತದೆ.

ಎಮ್.ಟಿ.ಪಿ.ಕಾಯ್ದೆ ಪ್ರಕಾರ 20 ವಾರಗಳ ಗರ್ಭದ ಸಮಯದಲ್ಲಿ ಶಿಶುವಿನ ಅಂಗವಿಕಲತೆಯ ಬಗ್ಗೆ ವೈದ್ಯರಿಗೆ ತಿಳಿದಿದ್ದು ಆ ಸಂಗತಿಯನ್ನು ಅವರು ದೂರುದಾರರ ಗಮನಕ್ಕೆ ತಂದಿದ್ದರೆ ಅವರು ಕಾನೂನಿನ ಪ್ರಕಾರ ಅಂಗವಿಕಲ ಮಗುವನ್ನು ಗರ್ಭದಲ್ಲಿ ಉಳಿಸಿಕೊಳ್ಳಬೇಕೋ ಅಥವಾ ಬೇಡವೋ ಅನ್ನುವ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಿದ್ದರು. ಆದರೆ ಶಿಶುವಿನ ಅಂಗವಿಕಲತೆಯ ಮಹತ್ವದ ಸಂಗತಿಯನ್ನು ತಜ್ಞ ವೈದ್ಯಯಾದ ಎದುರುದಾರರು ದೂರುದಾರರಿಗೆ ತಿಳಿಸದೇ ಅವರು ತಮ್ಮ ವೈದ್ಯಕೀಯ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷತೆ ವಹಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಅಂತಾ ಆಯೋಗ ತನ್ನ ತೀರ್ಪಿನಲ್ಲಿ ಅಭಿಪ್ರಯಾಪಟ್ಟಿದೆ. ವೈದ್ಯರ ಅಂತಹ ನಡುವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಸರ್ವೋಚ್ಚ ನ್ಯಾಯಾಲಯ ಮತ್ತು ರಾಷ್ಟ್ರೀಯ ಗ್ರಾಹಕರ ಆಯೋಗದ ತೀರ್ಪುಗಳನ್ನು ಆಧರಿಸಿ ಜಿಲ್ಲಾ ಗ್ರಾಹಕರ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

₹11.10 Lakh Fine For Doctor At Dharwad

ಎದುರುದಾರರ ನಿರ್ಲಕ್ಷತನದಿಂದ ಜನಿಸಿರುವ ಅಂಗವಿಕಲ ಹೆಣ್ಣು ಮಗುವಿನ ಈವರೆಗಿನ ಚಿಕಿತ್ಸೆ ಹಾಗೂ ಭವಿಷ್ಯದ ಚಿಕಿತ್ಸೆ ಮತ್ತು ಅದರ ಭವಿಷ್ಯದ ಜೀವನ ನಿರ್ವಹಣೆಯ ಬಗ್ಗೆ ಆಯೋಗ ತನ್ನ ತೀರ್ಪಿನಲ್ಲಿ ಚಿಂತಿಸಿ ಜನಿಸಿದ ಹೆಣ್ಣು ಮಗುವಿನ ಈವರೆಗಿನ ವೈದ್ಯಕೀಯ ಖರ್ಚಿಗೆ 50,000 ರೂ, ದೂರುದಾರರ ಓಡಾಟ ಮತ್ತು ಖರ್ಚು ವೆಚ್ಚಕ್ಕೆ 50,000ರೂ, ಅಂಗವಿಕಲ ಮಗುವಿನ ಜನನದಿಂದ ಪಾಲಕರಿಗೆ ಆಗಿರುವ ಮಾನಸಿಕ ನೋವು ಮತ್ತು ಹಿಂಸೆಗಾಗಿ 2,00,000 ರೂ ಹಾಗೂ ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯದ ವೈದ್ಯಕೀಯ ಖರ್ಚು ವೆಚ್ಚಕ್ಕಾಗಿ 3,00,000, ಹಾಗೂ ಸದರಿ ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯದ ಜೀವನ ನಿರ್ವಹಣೆಗಾಗಿ 5,00,000ರೂ ಮತ್ತು ಈ ಪ್ರಕರಣದ ಖರ್ಚು ವೆಚ್ಚ ಅಂತಾ 10,000 ರೂ ಸೇರಿ ಒಟ್ಟು 11,10,000ರೂ ಪರಿಹಾರ ನೀಡಬೇಕೆಂದು ಆಯೋಗ ತಿಳಿಸಿದೆ. ಒಂದು ತಿಂಗಳ ಒಳಗಾಗಿ ದೂರುದಾರರಿಗೆ ನೀಡುವಂತೆ ಆಯೋಗ ತಿಳಿಸಿದ್ದು, ತಪ್ಪಿದ್ದಲ್ಲಿ ಆ ಮೊತ್ತದ ಮೇಲೆ ಶೇ.8 ರಂತೆ ಬಡ್ಡಿ ಕೊಡುವಂತೆ ಎದುರುದಾರ ತಜ್ಞ ವೈದ್ಯರಿಗೆ ಆಯೋಗ ಆದೇಶಿಸಿದೆ.

ಈ 11,10,000 ರೂ ಪರಿಹಾರದಲ್ಲಿ 8,00,000 ರೂ ಹಣವನ್ನು ಅಂಗವಿಕಲ ಹೆಣ್ಣು ಮಗುವಿನ ಹೆಸರಿನಲ್ಲಿ ಅವಳು ವಯಸ್ಕಳಾಗುವವರೆಗೆ ದೂರುದಾರರು ಇಚ್ಚಿಸುವ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕಾಯಂ ಠೇವಣಿ ಇಡಲು ಮತ್ತು ಪರಿಹಾರದ ಪೂರ್ತಿ ಹಣವನ್ನು ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಖರ್ಚು ಮಾಡಲು ಆಯೋಗ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+