ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವಶೇಷಗಳಡಿ 12ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ, ಕೂಗು ಕೇಳಿತ್ತು: ಪ್ರತ್ಯಕ್ಷ ದರ್ಶಿ

|
Google Oneindia Kannada News

ಧಾರವಾಡ, ಮಾರ್ಚ್ 21: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಇನ್ನೂ 20 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಧಾರವಾಡ: ಕಟ್ಟಡದ ಅಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ ಧಾರವಾಡ: ಕಟ್ಟಡದ ಅಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ

ಅದರಲ್ಲಿ ಉತ್ತರ ಕರ್ನಾಟಕ ಭಾಗದ 12ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿನಿಯರು ಕೂಡ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ಕೂಗು ಕೇಳಿರುವುದಾಗಿ ತಿಳಿಸಿದ್ದಾರೆ. ಅಲ್ಲಿಯೇ ಹೆಣ್ಣುಮಕ್ಕಳ ಪಿಜಿಯೂ ಕೂಡ ಇತ್ತು ಎನ್ನಲಾಗುತ್ತಿದೆ.

ಧಾರವಾಡ ಕಟ್ಟಡ ದುರಂತ : ಅವಶೇಷದಡಿ 12 ಜನರ ಸಾವು-ಬದುಕಿನ ಹೋರಾಟ ಧಾರವಾಡ ಕಟ್ಟಡ ದುರಂತ : ಅವಶೇಷದಡಿ 12 ಜನರ ಸಾವು-ಬದುಕಿನ ಹೋರಾಟ

ಕುಸಿದ ಕಟ್ಟಡದಲ್ಲಿ ಒಂದು ಕಂಪ್ಯೂಟರ್ ಸೆಂಟರ್ ಇತ್ತು. ಇಲ್ಲಿ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಅವಷೇಶದಡಿ ಸಿಲುಕಿದವರಿಗೆ ನಿರಂತರವಾಗಿ ಪೈಪ್ ಮುಖಾಂತರ ನೀರು ಮತ್ತು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.

12 girls feared trapped under debris in Dharwad

ಆಗಿದ್ದೇನು?
ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ 3.40ರ ವೇಳೆಗೆ ಜನ ನೋಡುತ್ತಿದ್ದಂತೆ ಕುಸಿದು ಬಿದ್ದಿತ್ತು. ಈ ಕಟ್ಟಡ ಕಾಮಗಾರಿಯಲ್ಲಿ 100ಕ್ಕೂ ಹೆಚ್ಚು ಮಂದಿ ಇದ್ದರು ಅಂತ ಹೇಳಲಾಗಿತ್ತು. ಈ ಪೈಕಿ 40ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 27 ಮಂದಿಯನ್ನು ಜಿಲ್ಲಾಸ್ಪತ್ರೆ, 13 ಮಂದಿಗೆ ಕಿಮ್ಸ್, 6 ಮಂದಿಗೆ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
English summary
Even as the death toll in the Dharwad building collapse rose to seven, there was concern over the fate of 12 college girls who are feared trapped under the debris.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X