ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ ಜೈಲಿನಲ್ಲಿ 120 ಕೈದಿಗಳಿಗೆ ಅಕ್ಷರಾಭ್ಯಾಸ

|
Google Oneindia Kannada News

ಧಾರವಾಡ, ಅಕ್ಟೋಬರ್ 30; ಕರ್ನಾಟಕದ ವಿವಿಧ ಜೈಲುಗಳಲ್ಲಿರುವ ಅನಕ್ಷರಸ್ಥ ಕೈದಿಗಳಿಗೆ ಅಕ್ಷರ ಕಲಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ದಿನ ಅಕ್ಷರಾಭ್ಯಾಸವನ್ನು ಆರಂಭಿಸಲಾಗುತ್ತದೆ.

ಧಾರವಾಡ ಕೇಂದ್ರ ಕಾರಾಗೃಹದಲ್ಲಿನ 120 ಅನಕ್ಷರಸ್ಥ ಕೈದಿಗಳಿಗೆ ಅಕ್ಷರಾಭ್ಯಾಸ ಮಾಡಿಸಲು ನವೆಂಬರ್ 1ರಂದು ಚಾಲನೆ ನೀಡಲಾಗುತ್ತದೆ. ಕೈದಿಗಳನ್ನು ಸಾಕ್ಷರರನ್ನಾಗಿ ಮಾಡುವ ಸದುದ್ದೇಶದಿಂದ 'ಶಿಕ್ಷೆಯಿಂದ ಬದಲಾವಣೆ' ಎಂಬ ಶೀರ್ಷಿಕೆ ಅಡಿಯಲ್ಲಿ ಅಕ್ಷರ ಕಲಿಸಲಾಗುತ್ತಿದೆ.

 ಮಳಿಗೆಯಲ್ಲಿ ಕನ್ನಡ ಹಾಡು ಹಾಕದ ವಿಚಾರ: ಕೆಎಫ್‌ಸಿ ಸ್ಪಷ್ಟನೆ ಮಳಿಗೆಯಲ್ಲಿ ಕನ್ನಡ ಹಾಡು ಹಾಕದ ವಿಚಾರ: ಕೆಎಫ್‌ಸಿ ಸ್ಪಷ್ಟನೆ

ಸಾಕ್ಷರತಾ ಕಾರ್ಯಕ್ರಮವನ್ನು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನವೆಂಬರ್ 1ರಂದು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ರಾಜ್ಯೋತ್ಸವ 2021: ಇತಿಹಾಸ, ಮಹತ್ವ, ಸಂದೇಶಗಳುಕನ್ನಡ ರಾಜ್ಯೋತ್ಸವ 2021: ಇತಿಹಾಸ, ಮಹತ್ವ, ಸಂದೇಶಗಳು

dharwad jail

ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ ಅಡಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅನಕ್ಷರಸ್ಥ ಕೈದಿಗಳಿಗೆ 120 ಕಲಿಕಾ ಲೇಖನ ಸಾಮಗ್ರಿ ಕಿಟ್‍ಗಳನ್ನು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯವರು ವಿತರಣೆ ಮಾಡಲಿದ್ದಾರೆ.

ಕ್ರೈಂ ರೌಂಡಪ್: ಕೊಲೆ ಮಾಡಿ ಜೈಲು ಸೇರಿದ್ದ ರೌಡಿ ಹತ್ಯೆ! ಕ್ರೈಂ ರೌಂಡಪ್: ಕೊಲೆ ಮಾಡಿ ಜೈಲು ಸೇರಿದ್ದ ರೌಡಿ ಹತ್ಯೆ!

ನವೆಂಬರ್ 1 ರಂದು ಅಕ್ಷರಾಭ್ಯಾಸ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಲಿದೆ. ಬಳಿಕ ನಿರಂತರವಾಗಿ ಶಿಕ್ಷಣ ಕಲಿಕೆಯನ್ನು ಮುಂದುವರೆಸಲಾಗುವುದು ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ. ಎ. ಮರಿಗೌಡ ಹೇಳಿದ್ದಾರೆ.

ಸರ್ಕಾರದಿಂದ ಅಕ್ಷರಾಭ್ಯಾಸ; ಕರ್ನಾಟಕ ಸರ್ಕಾರ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕೈದಿಗಳಿಗೆ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮವನ್ನು ಎಲ್ಲಾ ಜೈಲುಗಳಲ್ಲಿ ಆರಂಭಿಸುತ್ತಿದೆ. ಇದಕ್ಕೆ ನವೆಂಬರ್ 1ರಂದು ಚಾಲನೆ ಸಿಗಲಿದೆ. ರಾಜ್ಯದ ವಿವಿಧ ಜೈಲುಗಳಲ್ಲಿ ಒಟ್ಟು 16 ಸಾವಿರ ಕೈದಿಗಳಿದ್ದು, ಆರು ಸಾವಿರಕ್ಕೂ ಅಧಿಕ ಕೈದಿಗಳು ಅನಕ್ಷರಸ್ಥರಾಗಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕುರಿತು ಮಾತನಾಡಿದ್ದು, 'ಹೆಬ್ಬೆಟ್ಟು ಒತ್ತಿ ಜೈಲಿಗೆ ಬಂದ ಕೈದಿಗಳಿಗೆ ಅಕ್ಷರ ಕಲಿಸಿ ಅವರು ಬಿಡುಗಡೆ ಹೊಂದುವ ವೇಳೆ ಸಹಿ ಮಾಡುವ ಮಟ್ಟಿಗೆ ಅಕ್ಷರಗಳನ್ನು ಕಲಿಸಲಾಗುತ್ತದೆ" ಎಂದು ಹೇಳಿದ್ದಾರೆ.

"ನವೆಂಬರ್ 1ರಿಂದ ಕೈದಿಗಳಿಗೆ ಅಕ್ಷರ ಕಲಿಸಲು ಆರಂಭಿಸಲಾಗುತ್ತದೆ. ಜೈಲಿನಲ್ಲಿರುವ ಕೈದಿಗಳನ್ನೇ ಅಕ್ಷರ ಕಲಿಸಲು ಬಳಸಿಕೊಳ್ಳಲಾಗುತ್ತದೆ. ಅವರಿಗೆ ಗೌರವಧನ ನೀಡಲಾಗುತ್ತದೆ. ಅಕ್ಷರ ಕಲಿಕೆಯಿಂದ ಕೈದಿಗಳಿಗೆ ಅನುಕೂಲವಾಗಲಿದೆ" ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಕನ್ನಡ ಪುಸ್ತಕಗಳಿಗೆ ರಿಯಾಯಿತಿ; ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಕನ್ನಡ ಪುಸ್ತಕಗಳ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಜನರಿಗೆ ಸಿಗಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಆನ್‍ಲೈನ್‍ನಲ್ಲಿ ಕೂಡ ಶೇ 50ರ ರಿಯಾಯಿತಿಯಲ್ಲಿ ಖರೀದಿ ಮಾಡಬಹುದಾಗಿದೆ. ಇದಕ್ಕಾಗಿ ಜನರು ಪ್ರಾಧಿಕಾರದ ವೆಬ್‌ಸೈಟ್‌ www.kannadapustakapradhikara.com ನಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

English summary
On November 1 Dharwad jail will start literacy scheme for 120 prisoners. Karnataka government will launch literacy scheme for prisoners across the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X