ಧಾರವಾಡಲ್ಲಿ 16,88,067 ಮತದಾರರು, ಏ.23ರಂದು ಮತದಾನ

ಧಾರವಾಡ, ಮಾರ್ಚ್ 11 : ಚುನಾವಣಾ ಆಯೋಗ ಲೋಕಸಭಾ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಧಾರವಾಡ ಜಿಲ್ಲೆಯಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಒಟ್ಟು 16,88,067 ಮತದಾರರು ಕ್ಷೇತ್ರದಲ್ಲಿದ್ದಾರೆ.

ಧಾರವಾಡ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಈ ಕುರಿತು ಮಾಹಿತಿ ನೀಡಿದರು. 'ಚುನಾವಣಾ ನೀತಿ ಸಂಹಿತೆ ಭಾನುವಾರದಿಂದಲೇ ಜಾರಿಗೆ ಬಂದಿದೆ. ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ' ಎಂದು ಹೇಳಿದರು.

ಧಾರವಾಡ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯ 7 ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರಗಳು ಸೇರಿ ಒಟ್ಟು 8 ಕ್ಷೇತ್ರಗಳಿವೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕವಾಗಿದ್ದಾರೆ.

16 lakhs voters in Dharwad Lok sabha seat, poll on April 23

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ 70 ಲಕ್ಷ ರೂ.ಗಳ ವೆಚ್ಚವನ್ನು ಆಯೋಗ ನಿಗದಿಮಾಡಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ. 25, 000, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ರೂ. 12,500 ರೂ. ಭದ್ರತಾ ಠೇವಣಿ ನಿಗದಿಪಡಿಸಲಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1,879 ಮತಗಟ್ಟೆಗಳಿವೆ. 37 ಮತಗಟ್ಟೆಗಳನ್ನು ಹೊಸದಾಗಿ ಸ್ಥಾಪಿಸಲಾಗಿದೆ. ಮಾದರಿ ನೀತಿ ಸಂಹಿತೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ 42 ಸಂಚಾರಿ ವಿಚಕ್ಷಣಾ ತಂಡಗಳನ್ನು ರಚನೆ ಮಾಡಲಾಗಿದೆ.

ಚುನಾವಣಾ ವೇಳಾಪಟ್ಟಿ

* ಮಾರ್ಚ್ 28ರಂದು ಅಧಿಸೂಚನೆ ಪ್ರಕಟ
* ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆ ದಿನ
* ಏಪ್ರಿಲ್ 5 ನಾಮಪತ್ರಗಳ ಪರಿಶೀಲನೆ
* ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಏಪ್ರಿಲ್ 23ರಂದು ಮತದಾನ
* ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+