Get Updates
Get notified of breaking news, exclusive insights, and must-see stories!

ಹುಬ್ಬಳ್ಳಿ - ಧಾರವಾಡ ಅವಳಿ ನಗರಕ್ಕೆ ಅವಳಿ ಪಾಲಿಕೆ, ಕಾಂಗ್ರೆಸ್‌ ಲೆಕ್ಕಾಚಾರವೇನು ?

ಧಾರವಾಡದ ಜನರ ದಶಕಗಳ ಕಾಲದ ಹೋರಾಟ ಕೊನೆಗೂ ಕೈಗೂಡಿದೆ. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಆದರೆ, ಇದರ ಹಿಂದೆ ರಾಜ್ಯ ಕಾಂಗ್ರೆಸ್‌ನ ಲೆಕ್ಕಾಚಾರಗಳು ಜೋರಾಗಿವೆ. ಮುಖ್ಯವಾಗಿ ಇದು ಧಾರವಾಡ ಭಾಗದ ಜನರ ಬಹುದಿನಗಳ ಕನಸು. ಇದರೊಂದಿಗೆ ಧಾರವಾಡದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವ ಲೆಕ್ಕಾಚಾರಗಳೂ ಸಹ ಇವೆ. ಹಲವು ದಶಕಗಳ ಹೋರಾಟಕ್ಕೆ ಜಯ ಸಿಕ್ಕಿದ್ದು ಹುಬ್ಬಳ್ಳಿ - ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

ಧಾರವಾಡಕ್ಕೂ ಪಾಲಿಕೆ: ಇದೀಗ ಹುಬ್ಬಳ್ಳಿ - ಧಾರವಾಡ ಅವಳಿ ನಗರಕ್ಕೆ ಒಂದೇ ಮಹಾನಗರ ಪಾಲಿಕೆ ಇದೆ. ಇದನ್ನು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಎಂದು ಕರೆಯಲಾಗುತ್ತದೆ. ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ಹಾಗೂ ವಿಸ್ತೀರ್ಣದಲ್ಲೂ ವಿಶಾಲವಾದ ಪಾಲಿಕೆ ಇದಾಗಿದೆ. ಆದರೆ, ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಪಾಲಿಕೆ ಇರುವುದರಿಂದ ಧಾರವಾಡದ ಭಾಗದವರಿಗೆ ಸಮಸ್ಯೆ ಆಗುತ್ತಿದೆ. ಅಲ್ಲದೆ ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವುದು ಸೇರಿದಂತೆ ಹಲವು ಆರೋಪಗಳು ಇದ್ದವು. ಅಲ್ಲದೆ ಹುಬ್ಬಳ್ಳಿ - ಧಾರವಾಡ ಪಾಲಿಕೆಯ ನಡುವೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎನ್ನುವುದು ಸೇರಿದಂತೆ ಹಲವು ಕಾರಣಕ್ಕೆ ಈ ಹೋರಾಟ ನಡೆದಿತ್ತು.

2 Hubli-Dharwad Municipal Corporation Political Calculation of Congress

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಿ ಎರಡು ಪಾಲಿಕೆಗಳನ್ನು ಮಾಡಬೇಕು ಎಂದು ಕಳೆದ 2 ದಶಕಗಳಿಂದ ಹೋರಾಟ ನಡೆದಿದೆ. 2014ರಲ್ಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕು ಎನ್ನುವ ಒತ್ತಾಯ ಹಾಗೂ ಹೋರಾಟ ಜೋರಾಗಿತ್ತು. ಇದೀಗ ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿದೆ. ಇದರ ಬೆನ್ನಲ್ಲೇ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕು ಎಂದು ಧಾರವಾಡದ ಜನರು ಆಗ್ರಹಿಸಿದ್ದರು. ನಿಯಮಾನುಸಾರ ಪಾಲಿಕೆ ರಚನೆ ಮಾಡಬೇಕಾದರೆ 3.5 ಲಕ್ಷಕ್ಕೂ ಹೆಚ್ಚು ಜನ ಆ ಪ್ರದೇಶ ವ್ಯಾಪ್ತಿಯಲ್ಲಿ ಇರಬೇಕು. ಇದೇ ತಾಂತ್ರಿಕ ಕಾರಣವನ್ನು ನೀಡಿ ಬಿಜೆಪಿ ಈ ಹಿಂದೆ ಈ ಬೇಡಿಕೆಯನ್ನು ಮುಂದೂಡಿತ್ತು. ಇದೀಗ ಕಾಂಗ್ರೆಸ್‌ ಈ ಬೇಡಿಕೆಗೆ ಅನುಮೋದನೆ ನೀಡಿದೆ.

ಕಾಂಗ್ರೆಸ್‌ನ ಲೆಕ್ಕಾಚಾರಗಳೇನು ?

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡುವುದರ ಹಿಂದೆ ಕಾಂಗ್ರೆಸ್‌ನ ರಾಜಕೀಯ ಲೆಕ್ಕಾಚಾರವೂ ಇದೆ. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹಿಡಿತ ಸಾಧಿಸಿದೆ. ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಏಕಚಕ್ರಾಧಿಪತ್ಯ ಸಾಧಿಸಿಕೊಂಡು ಬರುತ್ತಿದೆ. ಪ್ರತ್ಯೇಕ ಮಹಾನಗರ ಪಾಲಿಕೆಗಳನ್ನು ಮಾಡುವ ಮೂಲಕ ಅಧಿಕಾರಕ್ಕೆ ಹೇರುವ ಲೆಕ್ಕಾಚಾರವೂ ಇದೆ ಎನ್ನಲಾಗುತ್ತಿದೆ. ಇದೀಗ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ.

ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕು ಎಂದು ಸಚಿವ ಸಂತೋಷ್‌ ಲಾಡ್‌, ಶಾಸಕರಾದ ವಿನಯ ಕುಲಕರ್ಣಿ ಹಾಗೂ ಪ್ರಸಾದ್‌ ಅಬ್ಬಯ್ಯ ಅವರು ದನಿಗೂಡಿಸಿದ್ದರು. ಬಿಜೆಪಿ ಸೇರಿ ಪಕ್ಷಾತೀತ ಬೇಡಿಕೆ ಬಂದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+