• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರವಾಡ : 28 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಆರಂಭ

|

ಧಾರವಾಡ, ಜೂನ್ 10 : ಕರ್ನಾಟಕ ಸರ್ಕಾರ 2019-20ನೇ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದೆ. ಧಾರವಾಡ ಜಿಲ್ಲೆಯಲ್ಲಿ 28 ಶಾಲೆಗಳನ್ನು ತೆರೆಯಲಾಗಿದ್ದು, ಶಾಲೆಗಳಿಗೆ ಪ್ರವೇಶ ಆರಂಭವಾಗಿದೆ.

ಸೋಮವಾರ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಲೂರು ವೆಂಕಟರಾವ್ ವೃತ್ತದ ಮಹಿಳಾ ಶಿಕ್ಷಕಿಯರ ತರಬೇತಿ ಶಾಲೆ ಆವರಣದಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಆರಂಭವಾಗಿರುವ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ಕೊಟ್ಟರು.

HRD ಸಚಿವರಿಗೆ ಕನ್ನಡಿಗರ ಪರವಾಗಿ ಸಿದ್ದರಾಮಯ್ಯರಿಂದ ಪತ್ರ

1ನೇ ತರಗತಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರ ಪಾಠ, ಪಠ್ಯ ಹಾಗೂ ದಿನಚರಿ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಎಸ್.ಎಂ.ಖಾನ ಹಾಗೂ ಸಹ ಶಿಕ್ಷಕಿಯರಾದ ಬಿ.ಎಸ್.ಯರಗಟ್ಟಿ ಮುಂತಾದವರು ಮಾಹಿತಿಯನ್ನು ನೀಡಿದರು.

ಕನ್ನಡಿಗರಿಗೆ ಉದ್ಯೋಗ ಟ್ವಿಟರ್ ಅಭಿಯಾನಕ್ಕೆ ಎಚ್‌ಡಿಕೆ ಬೆಂಬಲ

ಬಳಿಕ ಕಮಾಲಪೂರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂ.4ರಲ್ಲಿ ಆರಂಭವಾಗಿರುವ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಂದ, ಶಿಕ್ಷಕರಿಂದ ಮತ್ತು ಪಾಲಕರಿಂದ ಆಂಗ್ಲ ಮಾಧ್ಯಮ ಶಾಲೆಯ ಕುರಿತು ಮಾಹಿತಿ ಪಡೆದರು.

ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, 'ಜಿಲ್ಲೆಯಲ್ಲಿ 28 ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗಿದೆ. ಪ್ರತಿ ವಿಧಾನಸಭೆಗೆ 4 ಶಾಲೆಗಳಿಗೆ ಮಂಜೂರಾತಿ ನೀಡಲಾಗಿದೆ. ಶಾಲಾ ಮೂಲಸೌಕರ್ಯ ಪರಿಗಣಿಸಿ 1ನೇ ವರ್ಗಕ್ಕೆ ಕನಿಷ್ಠ 15 ರಿಂದ ಗರಿಷ್ಠ 52 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ಇದೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆಗುತ್ತಿವೆ' ಎಂದರು.

ಕನ್ನಡ ಮತ್ತು ಇಂಗ್ಲಿಷ್ ಭಾಷೆ

ಕನ್ನಡ ಮತ್ತು ಇಂಗ್ಲಿಷ್ ಭಾಷೆ

'ಆಂಗ್ಲ ಮಾಧ್ಯಮಕ್ಕೆ 1ನೇ ತರಗತಿಗೆ ಪ್ರವೇಶ ಪಡೆದ ಮಕ್ಕಳಿಗೆ ಪಠ್ಯ ಪುಸ್ತಕ ಬರುವವರೆಗೆ ಬೇರೆ ಪುಸ್ತಕಗಳನ್ನು ಬಳಸಿ ಸಾಮಾನ್ಯ ಮಾಹಿತಿ ನೀಡಿ ಮತ್ತು ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪಡೆಯುವ ಮಕ್ಕಳ ಪಠ್ಯ ಪುಸ್ತಕವು ಕನ್ನಡ ಮತ್ತು ಆಂಗ್ಲ ಭಾಷೆ ಸೇರಿ ದ್ವಿಭಾಷೆಯಲ್ಲಿ ಇರುತ್ತದೆ. ಇದು ಪಾಲಕರು ಸಹ ಮಕ್ಕಳಿಗೆ ಓದಲು, ಬರೆಯಲು ನೆರವಾಗುತ್ತದೆ. ಈ ಕುರಿತು ಪಾಲಕರಿಗೆ ತಿಳುವಳಿಕೆ ನೀಡಬೇಕು' ಎಂದು ಸೂಚಿಸಿದರು.

840 ವಿದ್ಯಾರ್ಥಿಗಳಿಗೆ ಪ್ರವೇಶ

840 ವಿದ್ಯಾರ್ಥಿಗಳಿಗೆ ಪ್ರವೇಶ

ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 840 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ. ಒಟ್ಟು 48 ಜನ ಇಂಗ್ಲಿಷ್ ಸಹಶಿಕ್ಷಕ, ಶಿಕ್ಷಕಿಯರಿಗೆ ತರಬೇತಿ ನೀಡಲಾಗಿದೆ. ಆಂಗ್ಲ ಮಾಧ್ಯಮ ಶಾಲೆಗಳಿಗೆ ಪಾಠ ಮಾಡಲು ಶಿಕ್ಷಕರನ್ನು ಸಿದ್ಧಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಸಮರ್ಥ ಶಿಕ್ಷಕರ ನೇಮಕ

ಸಮರ್ಥ ಶಿಕ್ಷಕರ ನೇಮಕ

1ನೇ ತರಗತಿಗೆಯ ವಿದ್ಯಾರ್ಥಿಗಳ ಕಲಿಕೆಗಾಗಿ ಸರಳ ವಿಷಯವಿರುವ ಕನ್ನಡ ಅಥವಾ ಉರ್ದು (ಉರ್ದು ಶಾಲೆಗಳಲ್ಲಿ ಆರಂಭವಾಗಿರುವ ಇಂಗ್ಲಿಷ ಮಾದ್ಯಮ ವಿದ್ಯಾರ್ಥಿಗಳಿಗಾಗಿ), ಪರಿಸರ ಅಧ್ಯಯನ, ಸರಳ ಗಣಿತ ಮತ್ತು ಇಂಗ್ಲಿಷ ಪಠ್ಯ ಪುಸ್ತಕಗಳನ್ನು ನೀಡಲಾಗುತ್ತಿದೆ. ಒಟ್ಟು 4 ಪಠ್ಯಗಳಿದ್ದು, ಭೋದಿಸಲು ಸಮರ್ಥ ಶಿಕ್ಷಕರನ್ನು ನೇಮಿಸಲಾಗಿದೆ.

ಯಾವ ಶಾಲೆಯನ್ನೂ ಮುಚ್ಚುವುದಿಲ್ಲ

ಯಾವ ಶಾಲೆಯನ್ನೂ ಮುಚ್ಚುವುದಿಲ್ಲ

ಆಂಗ್ಲ ಮಾಧ್ಯಮ ಶಾಲೆಗಳನ್ನು ಈಗಿರುವ ಪ್ರಾಥಮಿಕ ಶಾಲೆಗಳಲ್ಲಿಯೇ ಆರಂಭಿಸಲಾಗಿದೆ. ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. ಆಂಗ್ಲ ಭಾಷೆಯನ್ನು ಕಲಿಯಲು ಆಸಕ್ತಿಯಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದೆ. ಎಲ್ಲ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಬೂಟು, ಸಾಕ್ಸ್ ನೀಡಲಾಗುತ್ತಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka government setup 28 English medium school in Dharwad district. Deputy Commissioner Deepa Cholan visited the school and inspect the facilities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more