ಧಾರವಾಡದಲ್ಲಿ ನ.23ರಿಂದ ಮತದಾರರ ನೋಂದಣಿ ಅಭಿಯಾನ

ಧಾರವಾಡ, ನವೆಂಬರ್ 21 : ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 23, 24 ಮತ್ತು 25ರಂದು ಧಾರವಾಡ ಜಿಲ್ಲೆಯಲ್ಲಿ ಮತದಾರರ ವಿಶೇಷ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅರ್ಹ ಮತದಾರರು ಮತ್ತು ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.

18 ವರ್ಷ ಪೂರ್ಣಗೊಂಡ ಹೊಸ ಮತದಾರರ ಸೇರ್ಪಡೆ ಹಾಗೂ ಮತದಾರರ ಹೆಸರು, ವಿಳಾಸ ಬದಲಾವಣೆ, ಬೇರೆ ಪ್ರದೇಶಗಳಿಗೆ ವರ್ಗಾವಣೆ ಕೋರಿ ಸಲ್ಲಿಸುವ ಅರ್ಜಿಗಳ ಸ್ವೀಕಾರ ಈ ವಿಶೇಷ ನೋಂದಣಿ ಅಭಿಯಾನದ ಉದ್ದೇಶವಾಗಿದೆ.

ನವೆಂಬರ್ 23, 24 ಮತ್ತು 25ರಂದು ಮತಗಟ್ಟೆ ಅಧಿಕಾರಿಗಳು ತಮಗೆ ಸಂಬಂಧಿಸಿದ ಮತಗಟ್ಟೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಾಜರಿದ್ದು, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ.

3 days special drive to enroll name to voters list in Dharwad

ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ವೀಕ್ಷಣೆಗಾಗಿ ಇಡಲಾಗುತ್ತದೆ.
ಸಾರ್ವಜನಿಕರು ತಮಗೆ ಸಂಬಂಧಿಸಿದ ಮತಗಟ್ಟೆಗಳಿಗೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದಾಗಿದೆ.

ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ 6, ತಿದ್ದುಪಡಿಗಾಗಿ ನಮೂನೆ 8, ತೆಗೆದುಹಾಕುವಿಕೆಗಾಗಿ ನಮೂನೆ 7 ಹಾಗೂ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಿಳಾಸ ಬದಲಾವಣೆಗಾಗಿ ನಮೂನೆ-8ಎನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+