84ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

ಧಾರವಾಡ, ಜನವರಿ 06 : ಧಾರವಾಡದಲ್ಲಿ ನಡೆಯುತ್ತಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದ್ದಿದೆ. 4 ನಿರ್ಣಯವನ್ನು ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದೆ. 85ನೇ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದೆ.

ಡಾ.ಚಂದ್ರಶೇಖರ ಕಂಬಾರ ಅವರ ಅಧ್ಯಕ್ಷತೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಅಂತ್ಯಗೊಂಡಿತು. ನಾಲ್ಕು ನಿರ್ಣಯವನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.

ಧಾರವಾಡದಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಣಿ ಸಭೆಯಲ್ಲಿ ಕಲಬುರಗಿಯಲ್ಲಿ 85ನೇ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಲಬುರಗಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

4 resolutions of the 84th Kannada Sahitya Sammelana Dharwad

ಸಮ್ಮೇಳನದ 4 ನಿರ್ಣಯಗಳು

* ನಾಡಗೀತೆ ಹಾಡುವ ನಿಮಿಷವನ್ನು ಗರಿಷ್ಠ 2 ನಿಮಿಷ 30 ಸೆಕೆಂಡ್‌ಗಳಿಗೆ ನಿಗದಿಗೊಳಿಸಲು ಆಗ್ರಹ

* ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವುದಾಗಿ ಘೋಷಣೆ ವಿಚಾರ. ರಾಜ್ಯ ಸರ್ಕಾರದ ನಿರ್ಣಯವನ್ನು ಅನುಷ್ಠಾನ ಮಾಡದಂತೆ ಆಗ್ರಹ

* ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವಕಾಶ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಆಗ್ರಹ

* ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ಒತ್ತಾಯ. ಎಲ್‌ಕೆಜಿ, ಯುಕೆಜಿ ಸಹಿತ 7ನೇ ತರಗತಿವರೆಗೆ ರಾಷ್ಟ್ರೀಕರಣಗೊಳಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+