• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರವಾಡದಲ್ಲಿ ಭೀಕರ ಅಪಘಾತ- ಕ್ರೂಸರ್ ಮರಕ್ಕೆ ಡಿಕ್ಕಿ: ಏಳು ಜನ ಸಾವು

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಧಾರವಾಡ ಮೇ 21: ಧಾರವಾಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಏಳು ಜನ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ‌ ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ನಡೆದಿದೆ.

ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು, ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

   Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada

   ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನಸೂರ ಗ್ರಾಮದಿಂದ ನಿಗದಿ (ಬೆನಕನಕಟ್ಟಿ) ಗೆ ಹೋಗುವಾಗ ಈ ಘಟನೆ ನಡೆದಿದೆ. ಒಟ್ಟು 7 ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಸಂಭವಿಸಿದೆ. ಸಧ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತಿದ್ದಾರೆ. ಇನ್ನು ಅನನ್ಯ 14, ಹರೀಶ 13, ಶಿಲ್ಪಾ 34, ನೀಲವ್ಚ 60, ಮಧುಶ್ರೀ 20 ಮಹೇಶ್ವರಯ್ಯ 11, ಶಂಭುಲಿಂಗಯ್ಯ 35, ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

   English summary
   Seven people were killed when a cruiser crashed into a tree near Bada village in Dharwad Taluk.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X