ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುವೈತ್ ರಾಷ್ಟ್ರದಿಂದ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ

|
Google Oneindia Kannada News

ಧಾರವಾಡ, ಮೇ 18; "ಭಾರತದ ವಿದೇಶಾಂಗ ಮಂತ್ರಾಲಯ ಮತ್ತು ವಾಣಿಜ್ಯ ಮಂತ್ರಾಲಯ ಬೇರೆ-ಬೇರೆ ರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಹೊಂದಿದೆ ಮತ್ತು ಜಾಗತಿಕ ಟೆಂಡರ ಮೂಲಕ ಆಕ್ಸಿಜನ್ ಆಮದು ಮಾಡಿಕೊಳ್ಳುತ್ತಿದೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು.

ಧಾರವಾಡ ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಪ್ರಾಕ್ಸಿಯರ್ ಆಕ್ಸಿಜನ್ ಮರುಪೂರಣ ಘಟಕ್ಕೆ ಭೇಟಿ ನೀಡಿದ ಸಚಿವರು, ಘಟಕದಿಂದ ಟ್ಯಾಂಕರ್‌ಗಳಿಗೆ ಆಕ್ಸಿಜನ್ ತುಂಬುವ ಕಾರ್ಯ ಪರೀಶಿಲನೆ ಮಾಡಿದರು.

ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲೆಗಳಲ್ಲೂ 'ಆಕ್ಸಿಜನ್ ಬಸ್'ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲೆಗಳಲ್ಲೂ 'ಆಕ್ಸಿಜನ್ ಬಸ್'

ಬಳಿಕ ಮಾತನಾಡಿದ ಅವರು, "ಕುವೈತ್ ರಾಷ್ಟ್ರದಿಂದ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಒಪ್ಪಂದವಾಗಿತ್ತು. ಅದನ್ನು ಧಾರವಾಡದಲ್ಲಿ ಸಂಗ್ರಹಿಸಿ, ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ವ್ಯವಸ್ಥಿತವಾಗಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ" ಎಂದರು.

ಭಾರತದಲ್ಲಿ ಪ್ರಮುಖ ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ಎಲ್ಲಿ ಸಿಗುತ್ತೆ, ಬೆಲೆ ಎಷ್ಟು? ಭಾರತದಲ್ಲಿ ಪ್ರಮುಖ ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ಎಲ್ಲಿ ಸಿಗುತ್ತೆ, ಬೆಲೆ ಎಷ್ಟು?

75 Metric Ton Of Oxygen Supply From Kuwait

"ಈಗಾಲೇ 50 ಮೆಟ್ರಿಕ್ ಟನ್ ಆಕ್ಸಿಜನ್ ಬಂದಿದೆ. ಈ ಆಕ್ಸಿಜನ್ ಅನ್ನು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟ, ವಿಜಯಪುರ ಜಿಲ್ಲೆಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿದೆ. ಉಳಿದ 25 ಮೆಟ್ರಿಕ್ ಟನ್ ಆಕ್ಸಿಜನ್ ಎರಡು ದಿನಗಳಲ್ಲಿ ಪೂರೈಕೆಯಾಗಲಿದೆ" ಎಂದು ವಿವರಿಸಿದರು.

 ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ, ಮೂವರ ಬಂಧನ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ, ಮೂವರ ಬಂಧನ

Recommended Video

ಸುಶೀಲ್ ಕುಮಾರ್ ಹುಡುಕಿಕೊಟ್ಟವರಿಗೆ ಭರ್ಜರಿ ಆಫರ್ ಕೊಟ್ಟ ಡೆಲ್ಲಿ ಪೊಲೀಸ್ | Oneindia Kannada

ಮಾರ್ಗಸೂಚಿ ಪಾಲನೆ ಮಾಡಿ; "ಕೋವಿಡ್ ಬಗ್ಗೆ ಜನರು ಜಾಗೃತೆಯಿಂದ ಇರಬೇಕು ರೋಗ ಲಕ್ಷಣ ಕಂಡು ಬಂದರೆ ತಕ್ಷಣ ಸಮೀಪದ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಸೂಕ್ತ ಸಲಹೆ, ಚಿಕಿತ್ಸೆ ಪಡೆಯಬೇಕು. ಕೋವಿಡ್ -19ರ ಬಗ್ಗೆ ಭಯ ಪಡದೆ ಎಚ್ಚರವಹಿಸಿ" ಎಂದು ಸಚಿವರು ಕರೆ ನೀಡಿದರು.

English summary
75 metric ton of oxygen supply come to India from Kuwait said Pralhad Joshi minister for coal, mines and parliamentary affairs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X