ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯಕ್ಕೆ ಹಾಜರಾದ ಧಾರವಾಡ ಜಿಲ್ಲಾಸ್ಪತ್ರೆಯ ಸಿಬ್ಬಂದಿ
7ನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಇಂದು ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಧಾರವಾಡ, ಮಾರ್ಚ್, 01: ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಇಂದು ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮೆರೆದಿದ್ದಾರೆ.
ಮುಷ್ಕರಕ್ಕೂ ಬೆಂಬಲ ಸೂಚಿಸಲು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ರೋಗಿಗಳಿಗೆ ತೊಂದರೆಯಾಗದಂತೆ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆಸ್ಪತ್ರೆಯ ಓಪಿಡಿ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ತುರ್ತು ಚಿಕಿತ್ಸಾ ವಿಭಾಗ, ಐಸಿಯು, ಡಯಾಲಿಸಿಸ್, ತುರ್ತು ಚಿಕಿತ್ಸಾ ಘಟಕ, ಹೆರಿಗೆ ವಾರ್ಡ್ ಸೇರಿದಂತೆ ಅನೇಕ ವಾರ್ಡ್‌ಗಳಲ್ಲಿ ಸರ್ಕಾರಿ ನೌಕರರು ಕೈಗೆ ಕಪ್ಪು ಪಟ್ಟಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸರ್ಕಾರಿ ಕಚೇರಿಗಳು ಬಂದ್
ಈ ಆಸ್ಪತ್ರೆ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ಕಚೇರಿಗಳ ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಮುಷ್ಕರ ನಡೆಸಿದ್ದಾರೆ.
ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಇಂದು ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಾಜರಾಗದೇ ಮುಷ್ಕರ ನಡೆಸಿದ್ದಾರೆ. ಧಾರವಾಡದ ಎಲ್ಲ ಸರ್ಕಾರಿ ಕಚೇರಿಗಳು ಕೂಡ ಬಂದ್ ಆಗಿವೆ. ದಿನನಿತ್ಯ ಜನಜಂಗುಳಿಯಿಂದ ಕೂಡಿರುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಕೂಡ ನೌಕರರಿಲ್ಲದೇ ಬಿಕೋ ಎನ್ನುತ್ತಿದೆ.
ಜಿಲ್ಲಾಧಿಕಾರಿ ಕಚೇರಿಯ ಎಲ್ಲ ವಿಭಾಗಗಳ ನೌಕರರು ತಮ್ಮ ಕಚೇರಿಗೆ ಬೀಗ ಹಾಕಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಗೇಟ್ ತೆರೆದಿದ್ದನ್ನು ಹೊರತುಪಡಿಸಿದರೆ ಉಳಿದೆಲ್ಲ ವಿಭಾಗಗಳು ಸಂಪೂರ್ಣ ಬಂದ್ ಆಗಿವೆ.

ಬಸವರಾಜ ಬೊಮ್ಮಾಯಿ ಹೇಳಿದ್ದೇನು?
7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ ಎಂದು ಹೇಳಿದ್ದರು.
ಈ ಕುರಿತು ಹುಬ್ಭಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿ












Click it and Unblock the Notifications