ಕುಂದಗೋಳ ಉಪ ಚುನಾವಣೆ : ಶೇ.82.42 ರಷ್ಟು ಮತದಾನ
ಧಾರವಾಡ, ಮೇ 20 : ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಶೇ 82.42ರಷ್ಟು ಮತದಾನವಾಗಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಭಾನುವಾರ ಮತದಾನ ನಡೆಯಿತು. 81,938 ಪುರುಷರು, 74,188 ಮಹಿಳೆಯರು, 2 ಇತರ ಮತದಾರರು ಸೇರಿ ಒಟ್ಟು 1,56,128 ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಮೇ 19ರಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು. 9 ಗಂಟೆವರೆಗೆ ಶೇ.9.59 ರಷ್ಟು, 11 ಗಂಟೆ ವೇಳೆಗೆ ಶೇ.24.20 ರಷ್ಟು, ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 44.50, ಮಧ್ಯಾಹ್ನ 3 ಗಂಟೆಗೆ ಶೇ. 59.50ರಷ್ಟು ಮತದಾನ ನಡೆದಿತ್ತು. ಅಂತಿಮವಾಗಿ 82.42ರಷ್ಟು ಮತದಾನವಾಗಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಶೇ. 78.67 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ. 3.75 ರಷ್ಟು ಮತದಾನ ಹೆಚ್ಚಳವಾಗಿದೆ. ಕಣದಲ್ಲಿದ್ದ ಎಲ್ಲಾ 8 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ 23ರಂದು ಮತ ಎಣಿಕೆ ನಡೆಯಲಿದೆ....

8 ಅಭ್ಯರ್ಥಿಗಳ ಭವಿಷ್ಯ ಭದ್ರ
ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 19ರ ಭಾನುವಾರ ನಡೆಯಿತು. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಿತು. ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಯಿತು. 8 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ-ಮೈತ್ರಿಕೂಟ ನೇರ ಹಣಾಹಣಿ
ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡರ್ ಮತ್ತು ಕಾಂಗ್ರೆಸ್-ಜೆಡಿಎಸ್‌ನಿಂದ ಕುಸುಮಾ ಶಿವಳ್ಳಿ ಅವರು ಅಭ್ಯರ್ಥಿಗಳು.

ಈ ಬಾರಿ ಗೆಲುವು ಖಚಿತ
ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡ ಅವರು ಮಾಧ್ಯಮಗಳ ಜೊತೆ ಮಾತನಾಡಿ, 'ಕುಂದಗೋಳದಲ್ಲಿ ಈ ಬಾರಿ ಬಿಜೆಪಿ ಪರವಾದ ಅಲೆ ಇದೆ. ಕಳೆದ ಬಾರಿ ನಾನು 634 ಮತಗಳಿಂದ ಸೋತಿದ್ದೆ. ಈ ಬಾರಿ 21 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ' ಎಂದು ಹೇಳಿದರು.

ಉಪ ಚುನಾವಣೆ ಮೇಲೆ ಕಣ್ಣು
ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಮೈತ್ರಿ ಸರ್ಕಾರದ ಮೇಲಿನ ಜನರ ನಂಬಿಕೆ ಈ ಚುನಾವಣೆ ಮೇಲೆ ಅವಲಂಬಿತವಾಗಿವೆ. ಸರ್ಕಾರ ಅಳಿವು-ಉಳಿವಿನ ಲೆಕ್ಕಾಚಾರವೂ ಫಲಿತಾಂಶದ ಮೇಲೆ ನಿಂತಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications