ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

84ನೇ ಕನ್ನಡ ಸಾಹಿತ್ಯ ಸಮ್ಮೇಳನ, ಸಿದ್ಧತೆ ಪರಿಶೀಲಿಸಿದ ಸಚಿವರು

|
Google Oneindia Kannada News

ಧಾರವಾಡ, ಡಿಸೆಂಬರ್ 04 : 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಯಾರಿ ನಡೆಯುತ್ತಿದೆ. ಜನವರಿ 4 ರಿಂದ ಮೂರು ದಿನಗಳ ಕಾಲ ಧಾರವಾಡದಲ್ಲಿ ಅಕ್ಷರ ಜಾತ್ರೆ ನಡೆಯಲಿದೆ.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸಾಹಿತ್ಯ ಸಮ್ಮೇಳನ ನಡೆಯುವ ಧಾರವಾಡ ಕೃಷಿ ವಿವಿ ಆವರಣದಲ್ಲಿ ಪರಿಶೀಲನೆ ನಡೆಸಿದರು. ಮುಖ್ಯ ವೇದಿಕೆ ನಿರ್ಮಾಣ ಸ್ಥಳ, ಮಾಧ್ಯಮ ಕೇಂದ್ರ, ಭೋಜನಾಂಗಣ, ಪುಸ್ತಕ ಮತ್ತು ವಸ್ತು ಪ್ರದರ್ಶನ ಮಳಿಗೆ, ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣದ ಸ್ಥಳಗಳನ್ನು ವೀಕ್ಷಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿಗಳುಕನ್ನಡ ಸಾಹಿತ್ಯ ಸಮ್ಮೇಳನ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

'ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕಸಾಪ ಪದಾಧಿಕಾರಿಗಳು ಸಮನ್ವಯದಿಂದ ಸೂಕ್ಷ್ಮ ವಿಚಾರಗಳನ್ನೂ ಸಹ ಮುನ್ನೋಟದಿಂದ ಆಲೋಚಿಸಿ, ಸಿದ್ಧತೆ ಮಾಡಿಕೊಳ್ಳಬೇಕು' ಎಂದು ಸಚಿವ ದೇಶಪಾಂಡೆ ಸೂಚನೆ ನೀಡಿದರು.

84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

84th Kannada Sahitya Sammelan RV Deshpande inspects spot

'ಶುಚಿತ್ವ, ಶೌಚಾಲಯ ನಿರ್ಮಾಣ, ನೀರು ಪೂರೈಕೆ, ವಿದ್ಯುತ್ ಅಲಂಕಾರ ಸಮರ್ಪಕವಾಗಿ ಇರಬೇಕು. ಗೃಹ ಕೈಗಾರಿಕೆಗಳು ಮತ್ತು ಸ್ವಸಹಾಯ ಸಂಘಗಳ ಉತ್ಪನ್ನಗಳ ಮಾರುಕಟ್ಟೆಗೆ ಮಳಿಗೆ ನೀಡಬೇಕು. ಸಮ್ಮೇಳನದ ಹಿನ್ನಲೆಯಲ್ಲಿ ಡಿ.25 ರಿಂದ ಸ್ವಚ್ಚತಾ ಆಂದೋಲನ ಆರಂಭಿಸಬೇಕು' ಎಂದು ನಿರ್ದೇಶನ ನೀಡಿದರು.

ಧಾರವಾಡ : 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಥಳ ಅಂತಿಮಧಾರವಾಡ : 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಥಳ ಅಂತಿಮ

84th Kannada Sahitya Sammelan RV Deshpande inspects spot

ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಪಂಚಾಯಿತಿ ಸಿಇಓ ಡಾ.ಸತೀಶ ಬಿ.ಸಿ., ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಮುಂತಾದ ಅಧಿಕಾರಿಗಳು ಸಿದ್ಧತೆಗಳ ಕುರಿತು ವಿವರಣೆ ನೀಡಿದರು.

English summary
Preparations are in full swing for the 84th All-India Kannada Sahitya Sammelan in Dharwad, Karnataka. District in-charge minister R.V. Deshpande inspected the spot. Sahitya Sammelan is scheduled to be held here in January 4, 5 and 6, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X