ಸಾಹಿತ್ಯ ಸಮ್ಮೇಳನ : ಧಾರವಾಡದಲ್ಲಿ 2 ದಿನ ಶಾಲಾ-ಕಾಲೇಜಿಗೆ ರಜೆ
ಧಾರವಾಡ, ಜನವರಿ 02 : ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಧಾರವಾಡದಲ್ಲಿ ಶಾಲಾ-ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಜನವರಿ 4ರಂದು ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ.
ಜನವರಿ 4, 5 ಹಾಗೂ 6 ರಂದು ನಡೆಯಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಳ್ಳಲು ಅನುಕೂಲವಾಗುಂತೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
ಜನವರಿ 4ರ ಶುಕ್ರವಾರ ಮತ್ತು ಜನವರಿ 5ರ ಶನಿವಾರದಂದು ಎರಡು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

ಸಹಾಯವಾಣಿ ಆರಂಭ : ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಜನರಿಗೆ ಸಹಾಯಕವಾಗಲು ಜಿಲ್ಲಾಡಳಿತ ಸಹಾಯವಾಣಿಯನ್ನು ಆರಂಭಿಸಿದೆ. ಸಮ್ಮೇಳನಕ್ಕೆ ಆಗಮಿಸುವ ವಿಶೇಷ ಆಹ್ವಾನಿತರಿಗೆ ಅನುಕೂಲವಾಗುವಂತೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ದೂರವಾಣಿ ಸಂಖ್ಯೆಗಳು : ಸಮ್ಮೇಳನದ ಸಂಪೂರ್ಣ ಮಾಹಿತಿಗಾಗಿ 1800- 4250741 (ಉಚಿತ), 94498 47641, ವಸತಿ ಸಮಿತಿ ಸಹಾಯ ಕೇಂದ್ರ 0836 - 2447544, 9449847640.
ಸಾರಿಗೆ ಸಮಿತಿ ಸಹಾಯ ಕೇಂದ್ರ 0836 - 2445566 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications