ಧಾರವಾಡದಲ್ಲಿ ಮತ ಏಣಿಕೆಗೆ ಸಕಲ ಸಿದ್ಧತೆ: ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಮಾಹಿತಿ ತಿಳಿಯಿರಿ
ಧಾರವಾಡ, ಜೂನ್. 03: ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ 14 ಟೇಬಲಗಳಂತೆ ಒಟ್ಟು 112 ಟೇಬಲ್ ಗಳನ್ನು ಮತ ಏಣಿಕೆಗೆ ಸಿದ್ದಗೊಳಿಸಲಾಗಿದ್ದು, ಅಂದಾಜು 20 ಸುತ್ತುಗಳಲ್ಲಿ ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಇದೆ ವೇಳೆ ಮತ ಏಣಿಕಾ ಕೇಂದ್ರದ ಸುತ್ತೂಲು 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್.ಪಿ.ಸಿ. 1973 ಕಲಂ 144 ರಡಿ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಏಣಿಕೆ ಕೇಂದ್ರದಲ್ಲಿ ಮತ್ತು ಸುತ್ತಲು ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಪೊಲೀಸರು, ಭದ್ರತಾ ದಳ, ಅಭ್ಯರ್ಥಿಗಳು, ಏಜೆಂಟರ್‌ಗಳು ಮತ್ತು ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಮತ ಎಣಿಕೆ ಕೇಂದ್ರದ ಸುತ್ತಲಿನ ಪಾರ್ಕಿಂಗ್ ವ್ಯವಸ್ಥೆ
ಸಿಆರ್‌ಪಿಎಫ್, ಕೆ.ಎಸ್.ಆರ್.ಪಿ, ಸಿಎಆರ್, ಹೋಮ್ ಗಾರ್ಡ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಲೂ ಭದ್ರತೆಗಾಗಿ 650 ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ತಿಳಿಸಿದರು.
ಪೆಪ್ಪಿ ಕಂಪನಿ ಕ್ರಾಸ್‌ನಿಂದ ಡೈರಿ, ಕೃಷಿ ವಿಶ್ವವಿದ್ಯಾಲಯ, ಕೆಇಬಿ ಗ್ರೀಡ್ ಗೇಟ್ ಮೂಲಕ ಕಾರಂಜಿ ಹತ್ತಿರ ಖಾಲಿ ಜಾಗದಲ್ಲಿ ಚುನಾವಣಾ ಅಭ್ಯರ್ಥಿಗಳು ಮತ್ತು ಎಜೆಂಟರ್‌ಗಳಿಗೆ ವಾಹನಗಳ ಪಾರ್ಕಿಂಗ್ ಮಾಡಲು ತಿಳಿಸಲಾಗಿದೆ.
ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ
ಹುಬ್ಬಳ್ಳಿ, ಸವದತ್ತಿ, ನವಲಗುಂದ, ಕಲಘಟಗಿ, ಕಡೆಯಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಪೆಪ್ಪಿ ಕಂಪನಿಯಿಂದ ಮಾರ್ಗ ಬದಲಾವಣೆ ಮಾಡಿಕೊಂಡು ಅರ್ಜಂಟ್‌ನಗರ, ಶಿರಡಿನಗರದ ಮಾರ್ಗವಾಗಿ ಬಸವನಗರ ಹತ್ತೀರ ಎಡಭಾಗದಲ್ಲಿ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಬೇಕು.
ಬೆಳಗಾವಿ ಕಡೆಯಿಂದ ಬರುವಂತ ವಾಹನಗಳು ಕೆಇಬಿ ಗ್ರೀಡ್ ಹತ್ತೀರ ಯು-ಟರ್ನ್ ಮಾಡಿಕೊಂಡು ಬಸವನಗರ ಹತ್ತೀರ ಎಡಭಾಗದಲ್ಲಿ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಲು ತಿಳಿಸಲಾಗಿದೆ.
ಚುನಾವಣಾ ಕರ್ತವ್ಯದ ಅಧಿಕಾರಿ ಮತ್ತು ಸಿಬ್ಬಂದಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ
ಪೆಪ್ಪಿ ಕಂಪನಿ ಕ್ರಾಸ್ ಮಾರ್ಗವಾಗಿ ಎತ್ತಿನಗುಡ್ಡ ಗ್ರಾಮದ ಕ್ರಾಸ್ ಮುಖಾಂತರ ಲೇಡಿಸ್ ಹಾಸ್ಟೆಲ್ ಕ್ರಾಸ್, ಮೆಣಸಿನಕಾಯಿ ಸರ್ಕಲ್ ಕಡೆಗೆ ಅಧಿಕಾರಿ ಮತ್ತು ಸಿಬ್ಬಂದಿ ಅವರನ್ನು ಇಳಿಸಿ ಪರತ್ ಅದೇ ಮಾರ್ಗವಾಗಿ ಹೊಸ ಆಡಳಿತ ಭವನದ ಹಿಂದುಗಡೆ ಖಾಲಿ ಜಾಗದಲ್ಲಿ ಮತ್ತು ಲೇಡಿಸ್ ಹಾಸ್ಟಲ್‌ದಿಂದ ಎಡಕ್ಕೆ ತಿರುಗಿ ಎತ್ತಿನಗುಡ್ಡ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ತಿಳಿಸಲಾಗಿದೆ.

ಉಪನಗರ ಪೊಲೀಸ್ ಠಾಣೆ ಎದುರಿಗೆ (ಭಾರಿ ವಾಹನಗಳ ಡೈವರ್ಷನ್): ಹುಬ್ಬಳ್ಳಿ ಮತ್ತು ಸವದತ್ತಿ ಕಡೆಯಿಂದ ಬೆಳಗಾವಿ ಕಡೆಗೆ ಹೋಗುವಂತ ವಾಹನಗಳು ಉಪನಗರ ಪೊಲೀಸ್ ಠಾಣೆಯಿಂದ ಮಾರ್ಗ ಬದಲಾವಣೆ ಮಾಡಿಕೊಂಡು ಜರ್ಮನ್ ಸರ್ಕಲ್ ಮಾರ್ಗವಾಗಿ ಕೆಲಗೇರಿ ಬೈಪಾಸ್ ಮುಖಾಂತರ ಬೆಳಗಾವಿ ಕಡೆಗೆ ಹೋಗಲು ಸೂಚಿಸಲಾಗಿದೆ.
ನರೇಂದ್ರ ಬೈಪಾಸ್ ಏರಟೆಕ್ ಕ್ರಾಸ್ (ಭಾರಿ ವಾಹನಗಳ ಡೈವರ್ಷನ್): ಪೆಪ್ಪಿ ಕಂಪನಿ ಕ್ರಾಸ್ (ಲಘು ವಾಹನಗಳ ಡೈವರ್ಷನ್) ಬೆಳಗಾವಿ ಕಡೆಯಿಂದ ಧಾರವಾಡ ನಗರಕ್ಕೆ ಆಗಮಿಸುವ ಭಾರಿ ವಾಹನಗಳು ನರೇಂದ್ರ ಟೋಲ್ ಪ್ಲಾಜಾ ಮುಖಾಂತರ ಕೆಲಗೇರಿ ಬ್ರಿಡ್ಜ್‌ನಿಂದ ಕೆಳಗೆ ಇಳಿದು ಜರ್ಮನ್ ಸರ್ಕಲ್, ಉಪನಗರ ಪೊಲೀಸ್ ಠಾಣೆ ಮಾರ್ಗವಾಗಿ ಹುಬ್ಬಳ್ಳಿ ಹಾಗೂ ಸವದತ್ತಿ, ನವಲಗುಂದ ಕಡೆಗೆ ಹೋಗಲು ಸೂಚಿಸಲಾಗಿದೆ.
ಹುಬ್ಬಳ್ಳಿ ಮತ್ತು ಸವದತ್ತಿ ಕಡೆಯಿಂದ ಬೆಳಗಾವಿ ಕಡೆಗೆ ಹೋಗುವಂತ ಲಘು ವಾಹನಗಳು ಪೆಪ್ಪಿ ಕಂಪನಿಯಿಂದ ಮಾರ್ಗ ಬದಲಾವಣೆ ಮಾಡಿಕೊಂಡು ಅರ್ಜಂಟ್‌ನಗರ ಶಿರಡಿನಗರ, ಬಸವನಗರ ಮಾರ್ಗವಾಗಿ ನರೇಂದ್ರ ಬೈಪಾಸ್ ಮುಖಾಂತರ ಬೆಳಗಾವಿ ಕಡೆಗೆ ಸಂಚರಿಸಬೇಕು.
ಬಸವನಗರ ಕ್ರಾಸ್ (ಲಘು ವಾಹನಗಳ ಡೈವರ್ಷನ್) ಬೆಳಗಾವಿ ಕಡೆಯಿಂದ ಧಾರವಾಡ ನಗರಕ್ಕೆ ಆಗಮಿಸುವ ಲಘು ವಾಹನಗಳು ಕೆಇಬಿ ಗ್ರಿಡ್ ಹತ್ತಿರ ಯು-ಟರ್ನ್ ಮಾಡಿಕೊಂಡು ಬಸವನಗರ ಶಿರಡಿನಗರ, ಅರ್ಜಂಟ್‌ನಗರ ಪೆಪ್ಪಿ ಕಂಪನಿ ಮಾರ್ಗವಾಗಿ ಹಳೇ ಪಿಬಿ ರಸ್ತೆ ಮುಖಾಂತರ ಧಾರವಾಡ ನಗರದ ಕಡೆಗೆ ಹೋಗಲು ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ತಿಳಿಸಿದ್ದಾರೆ.
ಮತ ಏಣಿಕಾ ಕೇಂದ್ರಕ್ಕೆ ಆಗಮಿಸುವವರನ್ನು ಮೂರು ಹಂತದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತದೆ. ರಾಜಕೀಯ ಪಕ್ಷಗಳ ಏಜಂಟರಿಗೆ, ಅಧಿಕಾರಿಗಳಿಗೆ ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತ್ಯೇಕವಾದ ಸಂಚಾರ ಮಾರ್ಗಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ 144 ಕಲಂ ಜಾರಿಯಲ್ಲಿ ಇರುವದರಿಂದ ವಿಜಯೋತ್ಸವ ಆಚರಣೆ, ಪಟಾಕಿ ಹಚ್ಚುವುದನ್ನು ನಿರ್ಬಂಧಿಸಲಾಗಿದೆ. ಲ್ಲೆಯಲ್ಲಿ ಶಾಂತಿ , ಸುವ್ಯವಸ್ಥೆ ಕಾಪಾಡಲು ಸುಮಾರು 2500 ಪೊಲೀಸ ಅಧಿಕಾರಿ, ಸಿಬ್ಬಂದಿ ಮತ್ತು 6 ಕೆಎಸ್.ಆರ್.ಪಿ ತುಕುಡಿಗಳನ್ನು ಹಾಗೂ 500 ಹೋಮ್ ಗಾರ್ಡ್ ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications