ಕರ್ನಾಟಕ: 6ನೇ ಗ್ಯಾರಂಟಿ ಜಾರಿಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
ಬೆಂಗಳೂರು, ಜನವರಿ 30: ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ತಮ್ಮ ಗೌರವಧನ, ಸಹಾಯಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಕೆಲವರು ಬೆಂಗಳೂರಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದರೆ. ಇನ್ನೂ ಕೆಲವುರ ಕಾಂಗ್ರೆಸ್ ನೀಡಿದ 6ನೇ ಭರವಸೆ ಈಡೇರಿಸುವಂತೆ ಪಟ್ಟು ಹಿಡಿದಿದ್ದಾರೆ. ಯಾವುದು ಈ ಆರನೇ ಭರವಸೆ, ಬೇಡಿಕೆಗಳು ಏನು?
ಧಾರವಾಡ ಅಂಗನವಾಡಿ ಕಾರ್ಯಕರ್ತರೆಯರ ಸಹಾಧನ 15,000 ಹೆಚ್ಚಳಕ್ಕೆ ಏರಿಸಲು ಒತ್ತಾಯಿಸಿ ಪ್ರತಿಭಟನೆ ಮಾಡಿದರು. ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದ 6 ಗ್ಯಾರಂಟಿಯನ್ನು ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸನ ಪ್ರಿಯಾಂಕಾ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಧನ ಏರಿಕೆ ಗ್ಯಾರಂಟಿ ಎಂದು ಘೋಷಿಸಿದ್ದರು. ಆದರೆ ಆ ಗ್ಯಾರೆಂಟಿ ಇದುವರೆಗೂ ಈಡೇರಸಲಾಗಿಲ್ಲ. ಈ ವಿಚಾರದಲ್ಲಿನ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಯಧನ 15 ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಕಾರ್ಯಕರ್ತೆಯರು ಆಗ್ರಹಿಸಿದರು.
ಧಾರವಾಡದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ ಬಳಿಕ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ಅವರು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾಕ್ಕೆ ಮನವಿ ಸಲ್ಲಿಸಿದರು.
ಸರ್ಕಾರ ಬಂದು 2 ವರ್ಷವಾದರೂ ಬೇಡಿಕೆ ಈಡೇರಿಲ್ಲ
ಇದಕ್ಕು ಮೊದಲು ಜಿಲ್ಲಾಧಿಕಾರಿಗಳ ಕಚೇರಿ ಮುಂದೆಯೂ ಕೆಲ ಹೊತ್ತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಕಿಯರ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದರು. ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ನ ನಾಯಕಿ ಪ್ರಿಯಾಂಕ ಗಾಂಧಿಯವರು ಆರನೇಯ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಏರಿಕೆ ಘೋಷಣೆ ಮಾಡಿದ್ದರು, ಅದು ಈಡೇರಿಬೇಕು ಎಂದು ಪಟ್ಟು ಹಿಡಿದರು.
ಆದರೆ ಗ್ಯಾರಂಟಿಗಳ ಘೋಷಣೆ ನಮ್ಮ ಪಾಲಿಗೆ ಘೋಷಣೆಯಾಗಿಯೇ ಉಳಿದಿದೆ. ಅಧಿಕಾರಕ್ಕೆ ಬಂದು ಎರಡು ವರ್ಷ ಸಮೀಪಿಸುತ್ತಿದ್ದರು. ನಮ್ಮ ಪಾಲಿನ ಆರನೇ ಗ್ಯಾರಂಟಿ ಈಡೇರುತ್ತಿಲ್ಲ. ಹಾಗಾಗಿ ಈ ಕೂಡಲೇ ಅಂಗನವಾಡಿ ಕಾರ್ಯಕರ್ತೆಯರ ಸಹಾಧನ 15 ಸಾವಿರಕ್ಕೆ ಏರಿಸುವ ಮೂಲಕ ಸರ್ಕಾರದ ಆರನೇ ಗ್ಯಾರಂಟಿಯನ್ನು ಈಡೇರಿಸಬೇಕು.ಒಂದು ವೇಳೆ ಇದೇ ನಿರ್ಲಕ್ಷ್ಯ ಮುಂದುವರೆದಿದ್ದೆಯಾದಲ್ಲಿ ಉಗ್ರ ಹೋರಾಟಕ್ಕೆ ನಾವೆಲ್ಲರೂ ಮುಂದಾಗಬೇಕಾಗುತ್ತದೆ ಎಂದು ಅಂಗನವಾಡಿ ಕಾರ್ಯಕರ್ತೆ ರತ್ನಾ ಶಿರೂರ್ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಮನವೊಲಿಕೆ ಯತ್ನ ವಿಫಲ
ಬೆಂಗಳೂರು ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟಿಸಿದರು. ಬುಧವಾರ ಸಿಎಂ ಗೃಹ ಕಚೇರಿಗೆ ತೆರಳಿ ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಮನವಿ ಪತ್ರ ಸಲ್ಲಿಸಿದರು. ಪತ್ರಿಭಟನೆ ಕೈ ಬಿಡುವಂತೆ ಮಾಡಿದ ಮನವಿಗೆ ಸ್ಪಂದಿಸದ ಪ್ರತಿಭಟನೆಕಾರರು ಧರಣಿ ಮುಂದುವರಿಸಲು ನಿರ್ಧರಿಸಿದರು.












Click it and Unblock the Notifications