ಧಾರವಾಡ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ಧಾರವಾಡ, ಮಾ.3 : ಧಾರವಾಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 44 ಹುದ್ದೆಗಳಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 10.
ವಿದ್ಯಾರ್ಹತೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವ ಸಿಬಿಎಸ್‌ಸಿ/ಐಸಿಎಸ್‌ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರಬೇಕು. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ವಯೋಮಿತಿ : ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 35 ವರ್ಷ, ಪರಿಶಿಷ್ಟ ಜಾತಿ/ಪಂ/ಪ್ರವರ್ಗ 7ರ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 40 ವರ್ಷಗಳು. ಇತೆರ ಹಿಂದುಳಿದ ವರ್ಗಗಳಿಗೆ ಕನಿಷ್ಠ 18, ಗರಿಷ್ಠ 35 ವರ್ಷಗಳು. [ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ]
ಅರ್ಜಿ ಶುಲ್ಕ : ಪರಿಶಿಷ್ಠ ಜಾತಿ/ಪ.ಪಂಗಡ/ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ರೂ. 100, ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 200 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿಯನ್ನು http://dharwd-va.kar.nic.in ವೆಬ್ ಸೈಟ್‌ನಲ್ಲಿ ಲಭ್ಯವಾಗುವ ಮುದ್ರಿತ ಚಲನ್ ಪ್ರತಿಯನ್ನು ತೆಗೆದುಕೊಂಡು, ಖಾತ ನಂ 64165395618 ಹೆಸರಿಗೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಪಾವತಿ ಮಾಡಿ ಸ್ವೀಕೃತಿ ಪಡೆಯಬೇಕು.
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿರುತ್ತದೆ. ಅಪೂರ್ಣವಾಗಿ ತುಂಬಿದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 10.












Click it and Unblock the Notifications