ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸಭೆ ಚುನಾವಣೆ: ಧಾರವಾಡದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಭಾರಿ ಪೈಪೋಟಿ, ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

By ಧಾರವಾಡ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ನವೆಂಬರ್‌, 24: ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಈಗಿನಿಂದಲೇ ಪೈಪೋಟಿ ಜೋರಾಗಿದೆ. ಮೂರು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ಕಾದಾಟ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್‌ ಟಿಕೆಟ್‌ಗೆ ಧಾರವಾಡ ಜಿಲ್ಲೆಯ ಏಳು ಕ್ಷೇತ್ರಗಳಿಂದ 48 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ನವೆಂಬರ್‌ 5 ರಿಂದ 21ರವರೆಗೆ ಕೆಪಿಸಿಸಿ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. ಹೀಗಾಗಿ ಕಾಂಗ್ರೆಸ್‌ ಆಕಾಂಕ್ಷಿಗಳೆಲ್ಲರೂ ಅರ್ಜಿ ಸಲ್ಲಿಸಿದ್ದಾರೆ.

ಕೆಪಿಸಿಸಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. ಅದರಂತೆಯೇ ಧಾರವಾಡ ಜಿಲ್ಲೆಯ ಏಳು ಕ್ಷೇತ್ರದಿಂದ 48 ಅಭ್ಯರ್ಥಿಗಳು ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಸಿದ್ದು, ಈಗಾಗಲೇ ಅರ್ಜಿ ಕೂಡ ಸಲ್ಲಿಸಿದ್ದಾರೆ. ಇದರಲ್ಲಿ ಕುಂದಗೋಳ ಕ್ಷೇತ್ರಕ್ಕೆ ಅತಿ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ.

ಬೊಮ್ಮಾಯಿ ಜನತಾ ದಳಕ್ಕೆ ಬಂದರೆ ಅದ್ಧೂರಿ ಸ್ವಾಗತ: ಸಿಎಂ ಇಬ್ರಾಹಿಂಬೊಮ್ಮಾಯಿ ಜನತಾ ದಳಕ್ಕೆ ಬಂದರೆ ಅದ್ಧೂರಿ ಸ್ವಾಗತ: ಸಿಎಂ ಇಬ್ರಾಹಿಂ

ಕುಂದಗೋಳದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ, ಮುತ್ತಣ್ಣ ಶಿವಳ್ಳಿ, ಎಂ.ಎಸ್‌. ಅಕ್ಕಿ, ಅರವಿಂದ ಕಟಗಿ ಸೇರಿದಂತೆ ಬರೋಬ್ಬರಿ 14 ಜನ ಟಿಕೆಟ್‌ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಶಾಸಕಿ ಆಗಿದ್ದರೂ ಇಲ್ಲಿ ಹೆಚ್ಚಿನ ಅರ್ಜಿ ಸಲ್ಲಿಕೆ ಆಗಿರುವುದು ಅಚ್ಚರಿಯನ್ನುಂಟು ಮಾಡಿದೆ. ಇನ್ನು ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿ ಅವರ ಮೈದುನ ಮುತ್ತಣ್ಣ ಶಿವಳ್ಳಿ ಕೂಡ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಗಮನ ಸೆಳೆದಿದೆ.

ಕಾಂಗ್ರೆಸ್‌ ಟಿಕೆಟ್‌ಗಾಗಿ ಹೆಚ್ಚಿದ ಫೈಟ್‌

ಕಾಂಗ್ರೆಸ್‌ ಟಿಕೆಟ್‌ಗಾಗಿ ಹೆಚ್ಚಿದ ಫೈಟ್‌

ಇನ್ನು ಎರಡನೇ ಸ್ಥಾನದಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರವಾಗಿದೆ. ಇಲ್ಲಿ ಮುಖಂಡರಾದ ದೀಪಕ ಚಿಂಚೋರೆ, ಪಿ.ಎಚ್‌. ನೀರಲಕೇರಿ, ಕೀರ್ತಿ ಮೋರೆ ಸೇರಿದಂತೆ 10 ಜನರು ಅರ್ಜಿ ಸಲ್ಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲೂ ಅರ್ಜಿ ಸಲ್ಲಿಸಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಸದಾನಂದ ಡಂಗನವರ, ಗಿರೀಶ ಗದಿಗೆಪ್ಪ ಗೌಡರ, ಅನೀಲ್‌ ಕುಮಾರ್‌ ಪಾಟೀಲ, ರಜತ್‌ ಉಳ್ಳಾಗಡ್ಡಿಮಠ ಸೇರಿದಂತೆ 8 ಜನ ಟಿಕೆಟ್‌ ಬಯಸಿದ್ದಾರೆ.

ಕಲಘಟಗಿ ಕ್ಷೇತ್ರದ ಮೇಲೆ ಮಾಜಿ ಸಚಿವ ಸಂತೋಷ ಲಾಡ್‌, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಬಂಗಾರೇಶ ಹಿರೇಮಠ ಕೂಡ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕಾಂಗ್ರೆಸ್‌ ಶಾಸಕ ಇರುವ ಪೂರ್ವ ಕ್ಷೇತ್ರದಲ್ಲೂ ಟಿಕೆಟ್‌ಗೆ ಭಾರಿ ಪೈಪೋಟಿ ನಡೆಯುತ್ತಿದೆ. ಪ್ರಸಾದ ಅಬ್ಬಯ್ಯಗೆ ಟಿಕೆಟ್‌ ಬೇಡ ನಮಗೆ ಕೊಡಿ ಎಂದು ಪಾಲಿಕೆ ಮಾಜಿ ಸದಸ್ಯರಾದ ಮೋಹನ ಹಿರೇಮನಿ, ಹನುಮಂತ ಬಂಕಾಪುರ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಪ್ರಸಾದ ಅಬ್ಬಯ್ಯ ಸೇರಿದಂತೆ ಮೂವರ ನಡುವೆ ಟಿಕೆಟ್‌ಗೆ ಫೈಟ್‌ ನಡೆಯುತ್ತಿದೆ.

ನವಲಗುಂದದಲ್ಲೂ ಟಿಕೆಟ್‌ಗೆ ಭಾರಿ ಫೈಟ್‌ ನಡೆಯುತ್ತಿದ್ದು, ಇತ್ತೀಚಿಗೆ ಕಾಂಗ್ರೆಸ್‌ಗೆ ಬಂದ ಎನ್‌.ಎಚ್‌. ಕೋನರಡ್ಡಿ, ವಿನೋದ ಅಸೂಟಿ, ಮಾಜಿ ಸಚಿವ ಕೆ.ಎನ್‌. ಗಡ್ಡಿ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ 8 ಜನರು ಅರ್ಜಿ ಸಲ್ಲಿಸಿದ್ದಾರೆ.

ಈವರೆಗೂ 15 ಆಕಾಂಕ್ಷಿಗಳಿಂದ ಬೇಡಿಕೆ

ಈವರೆಗೂ 15 ಆಕಾಂಕ್ಷಿಗಳಿಂದ ಬೇಡಿಕೆ

ಧಾರವಾಡ ಗ್ರಾಮೀಣ, ಪಶ್ಚಿಮ, ಪೂರ್ವ, ಸೆಂಟ್ರಲ್‌, ಕುಂದಗೋಳ, ನವಲಗುಂದ, ಕಲಘಟಗಿ ಸೇರಿ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳಿವೆ. ಇವುಗಳಲ್ಲಿ ಅತ್ಯಂತ ಬೇಡಿಕೆಯ ಕ್ಷೇತ್ರವೆಂದರೆ ಕುಂದಗೋಳ ಆಗಿದೆ. ಇಲ್ಲಿ ಕಾಂಗ್ರೆಸ್‌ನ ಕುಸುಮಾವತಿ ಶಿವಳ್ಳಿ ಶಾಸಕಿ ಆಗಿದ್ದರೂ, ಇಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ವಿಶೇಷವಾಗಿದೆ. ಈವರೆಗೆ ಬರೋಬ್ಬರಿ 15 ಆಕಾಂಕ್ಷಿಗಳು ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದಾರೆ. ಕುಸುಮಾವತಿ ಶಿವಳ್ಳಿ, ಮುತ್ತಣ್ಣ ಶಿವಳ್ಳಿ, ಗೌಡಪ್ಪ ಗೌಡರ, ಎಂ.ಎಸ್‌. ಅಕ್ಕಿ, ಜಗದೀಶ ಉಪ್ಪಿನ, ಶಿವಾನಂದ ಬೆಂತೂರ, ಅರವಿಂದ ಕಟಗಿ, ಸುರೇಶ್‌ ಸವಣೂರ, ಚಂದ್ರಶೇಖರ ಜುಟ್ಟಲ ಸೇರಿದಂತೆ 15 ಜನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಶಾಸಕಿ ಇದ್ದರೂ ಭಾರಿ ಬೇಡಿಕೆ ಕ್ಷೇತ್ರವೆನಿಸಿದೆ.

6 ಜನ ಅರ್ಜಿ ಸಲ್ಲಿಸಿರುವುದು ವಿಶೇಷವಾಗಿದೆ

6 ಜನ ಅರ್ಜಿ ಸಲ್ಲಿಸಿರುವುದು ವಿಶೇಷವಾಗಿದೆ

ಇನ್ನೂ ನವಲಗುಂದ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಇತ್ತೀಚಿಗಷ್ಟೇ ಕಾಂಗ್ರೆಸ್‌ ಸೇರಿರುವ ಎನ್‌.ಎಚ್‌. ಕೋನರಡ್ಡಿ, ವಿನೋದ ಅಸೂಟಿ, ಮಾಜಿ ಸಚಿವ ಕೆ.ಎನ್‌. ಗಡ್ಡಿ, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ರಾಜಶೇಖರ್‌ ಮೆಣಸಿನಕಾಯಿ ಸೇರಿದಂತೆ ಏಳು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಆರು ಅವಧಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಪ್ರತಿನಿಧಿಸುತ್ತಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರಕ್ಕೆ ಟಿಕೆಟ್‌ ಬಯಸಿ ಮಾಜಿ ಮೇಯರ್‌ ಅನಿಲಕುಮಾರ್‌ ಪಾಟೀಲ, ರಜತ್‌ ಉಳ್ಳಾಗಡ್ಡಿಮಠ, ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಗಿರೀಶ ಗದಿಗೆಪ್ಪಗೌಡರ, ಸತೀಶ್‌ ಮೆಹರವಾಡೆ, ಪಾಲಿಕೆ ಸದಸ್ಯ ನಿರಂಜನ ಹಿರೇಮಠ, ಶಾಕೀರ ಸನದಿ ಸೇರಿದಂತೆ ಈವರೆಗೆ ಆರು ಜನ ಅರ್ಜಿ ಸಲ್ಲಿಸಿರುವುದು ವಿಶೇಷವಾಗಿದೆ.

ಕ್ಷೇತ್ರವಾರು ಆಕಾಂಕ್ಷಿಗಳ ಪಟ್ಟಿ ವಿವರ

ಕ್ಷೇತ್ರವಾರು ಆಕಾಂಕ್ಷಿಗಳ ಪಟ್ಟಿ ವಿವರ

ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಎಸ್‌.ಆರ್‌. ಮೋರೆ ಅವರ ಮಗಳು ಕೀರ್ತಿ ಮೋರೆ, ಪಾಲಿಕೆ ಸದಸ್ಯ ಮಯೂರ ಮೋರೆ, ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ, ನಾಗರಾಜ ಗೌರಿ ಟಿಕೆಟ್‌ ಬಯಸಿದ್ದಾರೆ. ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ತೀವ್ರ ಪೈಪೋಟಿ ಇರುವ ಕಲಘಟಗಿ ಕ್ಷೇತ್ರಕ್ಕೆ ಟಿಕೆಟ್‌ ಬಯಸಿ ವಿಧಾನಪರಿಷತ್‌ ಮಾಜಿ ಸದಸ್ಯ ನಾಗರಾಜ ಛಬ್ಬಿ, ಮಾಜಿ ಸಚಿವ ಸಂತೋಷ ಲಾಡ್‌ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಪೂರ್ವ ಕ್ಷೇತ್ರದಿಂದ ಈವರೆಗೆ ಹಾಲಿ ಶಾಸಕ ಪ್ರಸಾದ ಅಬ್ಬಯ್ಯ ಹೊರತುಪಡಿಸಿ ಬೇರೆ ಯಾರು ಅರ್ಜಿ ಸಲ್ಲಿಸಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ.

ಇನ್ನು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇಸ್ಮಾಯಿಲ್‌ ತಮಟಗಾರ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್‌ ವಿನಯ್‌ ಕುಲಕರ್ಣಿಗೆ ಸದ್ಯ ಧಾರವಾಡ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿದೆ. ಆದರೂ ಕುಲಕರ್ಣಿ ಚುನಾವಣೆ ಒಳಗಾಗಿ ಕೋರ್ಟ್‌ನಿಂದ ಅನುಮತಿ ಪಡೆಯುವ ಕಾತರದಲ್ಲಿದ್ದಾರೆ. ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ನಲ್ಲಿ ಭಾರಿ ತಯಾರಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಇನ್ನು ಅವಧಿ ಇರುವ ಕಾರಣ ಆಕಾಂಕ್ಷಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

English summary
Karnataka Assembly Election 2023: Preparations for assembly election in state, and competition for Congress ticket in Dharwad has increased. know more, ಕರ್ನಾಟಕ ವಿಧಾನಸಭಾ ಚುನಾವಣೆ 2023:
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X