• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮದುವೆಗೆ 50 ಜನ; ಭಾಗವಹಿಸುವವರ ಕೈಗೆ ಬ್ಯಾಂಡ್!

|

ಧಾರವಾಡ, ಏಪ್ರಿಲ್ 25; ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ ಮದುವೆಗಳಲ್ಲಿ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಧಾರವಾಡ ಜಿಲ್ಲಾಡಳಿತವು ಈ ನಿಯಮ ಪಾಲನೆ ಹಾಗೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿಶೇಷ ಕ್ರಮ ಕೈಗೊಂಡಿದೆ.

ಮದುವೆಗಳಲ್ಲಿ ಭಾಗವಹಿಸುವ 50 ಜನರಿಗೆ ತಮ್ಮ ಕೈಗಳಿಗೆ ಧರಿಸಲು ವಿಶೇಷವಾದ ಬ್ಯಾಂಡ್‍ಗಳನ್ನು ನೀಡುತ್ತಿದೆ. ಸರ್ಕಾರದ ಸೂಚನೆ ಅನ್ವಯ ಮೇ 4ರವರೆಗೆ ನಡೆಯುವ ಮದುವೆಗಳಿಗೆ ಅನುಮತಿ ಪಡೆಯುವುದನ್ನು ಜಿಲ್ಲೆಯಲ್ಲಿ ಕಡ್ಡಾಯಗೊಳಿಸಲಾಗಿದೆ.

ಕೋವಿಡ್ ಮಾರ್ಗಸೂಚಿ; ಮದುವೆಗೆ ಬಂದವರು ಅರ್ಧದಲ್ಲೇ ವಾಪಸ್!

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಲಯ ಸಹಾಯಕ ಆಯುಕ್ತರು ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಉಳಿದ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರರು ಮದುವೆಗಳ ಆಯೋಜನೆಗೆ ಅನುಮತಿ ನೀಡಲಿದ್ದಾರೆ.

ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?

ಮದುವೆಗಳಲ್ಲಿ ನಿಯಮ ಮೀರಿ 50ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳದಂತೆ ಜಾಗೃತಿ ವಹಿಸಲು ಹಾಗೂ ಆಯೋಜಕರಿಗೆ ಸಂಖ್ಯಾ ನೀತಿಯನ್ನು ಖಾತರಿಪಡಿಸಿಕೊಳ್ಳಲು ಅನುಕೂಲವಾಗುವಂತೆ ಅನುಮತಿ ಪಡೆಯಲು ಬರುವ ಆಯೋಜಕರಿಗೆ ಅನುಮತಿಯೊಂದಿಗೆ ಅನುಕ್ರಮ ಸಂಖ್ಯೆ ಇರುವ 50 ವಿಶೇಷವಾದ ಬ್ಯಾಂಡ್ ನೀಡಲಾಗುತ್ತದೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ನಿಗದಿ, ಮಾರ್ಗಸೂಚಿ ಪ್ರಕಟ

ಈ ಬ್ಯಾಂಡ್‍ಗಳು ವಾಟರ್ ಪ್ರೂಫ್ ಆಗಿದೆ. ಒಬ್ಬ ವ್ಯಕ್ತಿ ಒಂದುಸಲ ಧರಿಸಿದರೆ ಅದನ್ನು ತೆಗೆದು ಮರುಬಳಕೆ ಮಾಡಲು ಅಥವಾ ಮತ್ತೊಬ್ಬರಿಗೆ ಬ್ಯಾಂಡ್ ವರ್ಗಾಯಿಸಲು ಬರುವುದಿಲ್ಲ. ಒಂದುವೇಳೆ ವರ್ಗಾಯಿಸಲು ಪ್ರಯತ್ನಿಸಿದರೆ ಅದು ತುಂಡಾಗುತ್ತದೆ. ಇದರಿಂದ ಕೇವಲ 50 ಜನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದನ್ನು ನಿಗಾವಹಿಸಲು ಸಾಧ್ಯವಾಗುತ್ತದೆ.

   ಕೋವಿಡ್‌ ರೋಗಿಗಳು ಡಿಸ್ಚಾರ್ಜ್‌ ಆದ್ರೂ ಮಾಹಿತಿ ನೀಡದ ಆಸ್ಪತ್ರೆ! ಅಪೊಲೊ ವಿರುದ್ಧ ಎಫ್‌ಐಆರ್ ದಾಖಲು | Oneindia Kannada

   ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರತಿ ಹಂತದಲ್ಲೂ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಡಳಿತ ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮದುವೆ ಆಯೋಜಕರು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

   English summary
   Karnataka government allowed only 50 people for wedding to maintain social distancing. Dharwad district administration come up with band to ensure only 50 people.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X