ಭಂಡಾರ ಹೊನ್ನಾಟದ ಸಡಗರದಲ್ಲಿ ಮಿಂದೆದ್ದ ಕಟ್ನೂರಿನ ಜನತೆ, ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಹುಬ್ಬಳ್ಳಿ, ಮೇ, 15: ಹುಬ್ಬಳ್ಳಿ ತಾಲೂಕಿನ ಕಟ್ನೂರು ಗ್ರಾಮದಲ್ಲಿ ಗ್ರಾಮದೇವಿಯ ಜಾತ್ರೆಯ ಅಂಗವಾಗಿ ಭಂಡಾರದ ಹೊನ್ನಾಟ ಹಾಗೂ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಲಾಯಿತು.

ಧಾರವಾಡ ಜಿಲ್ಲೆಯ ಕಟ್ನೂರಿನಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮದೇವಿಯ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಐದು ದಿನಗಳ ಕಾಲ ವಿನೂತನ ಹಾಗೂ ವಿಭಿನ್ನ ರೀತಿಯಲ್ಲಿ ಜಾತ್ರೆಯನ್ನು ಆಚರಣೆ ಮಾಡಲಾಗುತ್ತಿದೆ. ಗ್ರಾಮದಲ್ಲಿ ಭಂಡಾರದ ಹೊನ್ನಾಟದಲ್ಲಿ ಯಾವುದೇ ಭೇದಭಾವ ಇಲ್ಲದೇ ಇಲ್ಲದಯೇ ಪರಸ್ಪರ ಭಂಡಾರ ಎರಚುವ ಮೂಲಕ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ.

Bhandara honnata Jatra celebration

ಮಹಿಳೆಯರು, ಮಕ್ಕಳು ಪರಸ್ಪರ ಸಂಪ್ರದಾಯಿಕ ಆಟಗಳನ್ನು ಆಡುವ ಮೂಲಕ ಮೆರವಣಿಗೆಗೆ ಹೊಸ ಮೆರಗನ್ನು ತಂದಿರುವುದು ವಿಶೇಷವಾಗಿದೆ. ಇನ್ನೂ ಯುವಕರ ಬಗ್ಗೆ ಹೇಳಬೇಕಾಗಿಯೇ ಇಲ್ಲ, ಯುವಕರು ಇಂತಹ ಹಬ್ಬಗಳನ್ನು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಸಂಭ್ರಮಿಸಿರುವುದು ನೋಡುಗರ ಕಣ್ಮನ ಸೆಳೆಯುವಂತಿರುತ್ತದೆ.

ಇನ್ನು ಯಾವುದೇ ಜಾತಿ ಮತಗಳ ಭೇದ ಭಾವವಿಲ್ಲದೇ ಭಂಡಾರದ ಹೊನ್ನಾಟದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ಮೂಲಕ ಗ್ರಾಮದೇವಿಯ ಜಾತ್ರೆಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅಲ್ಲದೆ ಐದು ದಿನಗಳ ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ವಿಶೇಷ ಪೂಜೆ, ಪುನಸ್ಕಾರಗಳ ಮೂಲಕ ದೇವಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಒಟ್ಟಿನಲ್ಲಿ ಗ್ರಾಮೀಣ ಭಾಗದ ಜಾತ್ರೆ ಅಂದರೆ ನಿಜಕ್ಕೂ ಒಂದು ವಿನೂತನ ರೀತಿಯ ಮೆರಗು ಇದ್ದೇ ಇರುತ್ತದೆ. ಇದಕ್ಕೆ ಸಾಕ್ಷಿ ಎಂಬುವಂತೆ ಕಟ್ನೂರು ಸಾಂಪ್ರದಾಯಿಕ ಆಚರಣೆಗೆ ಸಾಕ್ಷಿಯಾಗಿದೆ.

ಕುರಿಗೆ ಹುಟ್ಟುಹಬ್ಬ ಆಚರಣೆ

ಸಾಮಾನ್ಯವಾಗಿ ಮನುಷ್ಯರು ಜನ್ಮ ದಿನಾಚರಣೆ ಮಾಡಿಕೊಳ್ಳುತ್ತಾರೆ. ಬರ್ತಡೇ, ಮದುವೆ, ಇನ್ನಿತರ ಸಂತೋಷ ಕ್ಷಣಗಳನ್ನು ಕಳೆಯಲು ಕೇಕ್ ಕತ್ತರಿಸುವುದು ರೂಡಿಯಲ್ಲಿದೆ. ಆಧುನಿಕತೆಯ ಭರಾಟೆಯಲ್ಲಿ ತಂತ್ರಜ್ಞಾನ ಬೆಳೆದಂತೆ ಹೊಸ ಹೊಸ ಆಚರಣೆಗಳು ಹುಟ್ಟಿಕೊಂಡಂತೆ, ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳಿಗೆ ಸೀಮಂತ, ಹುಟ್ಟು ಹಬ್ಬ ಆಚರಣೆಗಳು ನಡೆಯುತ್ತಿದೆ. ಇದೇ ರೀತಿ ಕುರಿಗೆ ಹುಟ್ಟು ಹಬ್ಬ ಆಚರಿಸುರುವ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ಹಿರಿಯೂರು ತಾಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ಕಿಟ್ಟಪ್ಪ ಎಂಬ ಕುರಿ ಮಾಲೀಕ, ಕುರಿಗೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ಎರಡನೇ ವರ್ಷದ ಕುರಿಗೆ ಹುಟ್ಟು ಹಬ್ಬ ಆಚರಿಸಿ ಎಲ್ಲರ ಗಮನ ಸೆಳೆದಿದ್ದರು.

ಕಿಟ್ಟಪ್ಪ ಪ್ರೀತಿಯಿಂದ ಒಂದು ಕುರಿಮರಿ ಸಾಕಿದ್ದರು. ಕುರಿ ದೊಡ್ಡದಾದ ಬಳಿಕ ಒಂದು ಹೆಣ್ಣು ಕುರಿ ಮರಿಗೆ ಜನ್ಮ ನೀಡಿದೆ. ಕಾರಣಾಂತರಗಳಿಂದ ಜನ್ಮ ನೀಡಿದ ಕುರಿ ಸಾವನ್ನಪ್ಪಿದೆ. ಅನಾಥವಾಗಿದ್ದ ಸಣ್ಣ ಕುರಿ ಮರಿಯ ಜೊತೆಗೆ ಇನ್ನೊಂದು ಕುರಿ ಮರಿ ತಂದು ಎರಡು ಮರಿಗಳನ್ನು ಸಾಕಿದ್ದಾರೆ. ಆದರೆ ತಬ್ಬಲಿಯಾಗಿದ್ದ ಕುರಿ ಮರಿ ದೊಡ್ಡದಾಗಿ ಬೆಳೆದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೊದಲನೇ ವರ್ಷದಲ್ಲಿ ಐದು ಕೆಜಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿದ್ದರು.

ಇದೀಗ ಎರಡನೇ ಬಾರಿಗೆ ಮೂರು ಕೆಜಿ ಕೇಕ್ ಹಾಗೂ ಕಾರ ತಂದು ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದರು. ಇಷ್ಟೆ ಅಲ್ಲದೇ ಕುರಿ ಮಾಲೀಕ ಗ್ರಾಮದ ಅಕ್ಕಪಕ್ಕದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಕುರಿ ಮಾಲೀಕನ ಕರೆಗೆ ಓಗೊಟ್ಟು ಸ್ನೇಹಿತರು, ಗ್ರಾಮಸ್ಥರು ಬರ್ತಡೇ ಸಮಾರಂಭದಲ್ಲಿ ಭಾಗವಹಿಸಿ ಶುಭಾಶಯ ಕೋರಿ, ಗಿಫ್ಟ್ ರೂಪದಲ್ಲಿ 100, 200 ರೂಪಾಯಿ ಹಣವನ್ನು ನೀಡಿರುವುದು ವಿಶೇಷವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+