ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯಸಭೆಗೆ ಚೆನ್ನಮ್ಮ: ಹೇಳಿಕೆ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡ ಶೆಟ್ಟರ್

|
Google Oneindia Kannada News

ಧಾರವಾಡ, ಏಪ್ರಿಲ್ 19: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬದಿಂದ ಅವರ ಪತ್ನಿ ಚನ್ನಮ್ಮ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿದ್ದರೆ ಪಿಕ್ಚರ್ ಕಂಪ್ಲೀಟ್ ಆಗುತ್ತಿತ್ತು ಎಂಬ ತಮ್ಮ ಹೇಳಿಕೆಯನ್ನು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಜಗದೀಶ್ ಶೆಟ್ಟರ್ ಅವರ ಹೇಳಿಕೆಯಿಂದ ತಮಗೆ ನೋವಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಆದರೆ, ತಮ್ಮ ಹೇಳಿಕೆಯಲ್ಲಿ ತಪ್ಪೇನಿಲ್ಲ ಎಂದು ಶೆಟ್ಟರ್ ಸಮರ್ಥನೆ ನೀಡಿದರು.

'ಎಚ್‌ಡಿಡಿ ಮನಸ್ಸು ಮಾಡಿದ್ದರೆ ಚೆನ್ನಮ್ಮರನ್ನು ಎಂದೋ ರಾಜ್ಯಸಭೆಗೆ ಕಳುಹಿಸುತ್ತಿದ್ದರು' 'ಎಚ್‌ಡಿಡಿ ಮನಸ್ಸು ಮಾಡಿದ್ದರೆ ಚೆನ್ನಮ್ಮರನ್ನು ಎಂದೋ ರಾಜ್ಯಸಭೆಗೆ ಕಳುಹಿಸುತ್ತಿದ್ದರು'

ಅಣ್ಣಿಗೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬದ ಸದಸ್ಯರು, ಸಂಬಂಧಿಕರೆಲ್ಲರೂ ರಾಜಕೀಯದಲ್ಲಿದ್ದಾರೆ. ಇದು ಸಂತುಷ್ಟು ಕುಟುಂಬ ಆಗಬೇಕೆಂದರೆ ಚನ್ನಮ್ಮ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡಬೇಕು ಎಂದು ಸಲಹೆ ಕೊಟ್ಟಿದ್ದೆ. ಇದರಿಂದ ನೋವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಂತೆ. ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ ಎಂದರು.

BJP leader Jagadish Shettar defends statement on Channamma devegowda rajyasabha election

ನೀವು ಮುಖ್ಯಮಂತ್ರಿ, ನಿಮ್ಮ ಸಹೋದರ ಸಚಿವ ಇರುವಾಗ ಮಕ್ಕಳನ್ನು ಸಂಸದರನ್ನಾಗಿ ಮಾಡಲು ಹೊರಟಿದ್ದೀರಿ. ಹೀಗಿರುವಾಗ ಚನ್ನಮ್ಮಾಜಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡುವುದರಲ್ಲಿ ತಪ್ಪೇನಿದೆ. ಅದನ್ನು ಬೇರೆ ರೀತಿಯಲ್ಲಿ ಅಪಾರ್ಥ ಮಾಡಿಕೊಳ್ಳುವುದು ಬೇಡ ಎಂದು ಸಲಹೆ ನೀಡಿದರು.

ಕುಮಾರಸ್ವಾಮಿ ವಿರುದ್ಧ ದೇಶದ್ರೋಹದ ಕೇಸ್ ಹಾಕಬೇಕು: ಜಗದೀಶ್ ಶೆಟ್ಟರ್ ಕುಮಾರಸ್ವಾಮಿ ವಿರುದ್ಧ ದೇಶದ್ರೋಹದ ಕೇಸ್ ಹಾಕಬೇಕು: ಜಗದೀಶ್ ಶೆಟ್ಟರ್

ಕುಮಾರಸ್ವಾಮಿ ಅವರಿಗೆ ನೋವುಂಟುಮಾಡುವ ರೀತಿಯಲ್ಲಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ಒಳ್ಳೆಯ ರೀತಿಯಲ್ಲಿ ತೆಗೆದುಕೊಳ್ಳಿ. ನಿಮ್ಮನ್ನು ಸಾಕಿ ಸಲುಹಿದ ಅವರೂ ರಾಜ್ಯಸಭೆಯ ಸದಸ್ಯರಾಗಲಿ ಎಂದಿದ್ದೇನೆ ಎಂದರು.

English summary
BJP leader Jagadish Shettar in Dharwad defends his earlier statement on HD Deve Gowda to send his wife to Rajyasabha as a member to fill the family in politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X