ಕುಂದಗೋಳ ಪಟ್ಟಣ ಪಂಚಾಯತಿ; ಪಕ್ಷ ಸಂಘಟನೆ ಕೊರತೆಯೇ ಕಾಂಗ್ರೆಸ್ ಗೆ ಮುಳುವಾಯ್ತು
ಧಾರವಾಡ, ನವೆಂಬರ್ 14: ಈ ಬಾರಿ ಧಾರವಾಡದ ಕುಂದಗೋಳ ಪಟ್ಟಣ ಪಂಚಾಯತಿ ಬಿಜೆಪಿ ತೆಕ್ಕೆಗೆ ಒಲಿದಿದೆ. 19 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೆ ಏರಿದೆ.
ಅತಂತ್ರ ಸ್ಥಿತಿ ತಂದ ಬೀರೂರು ಪುರಸಭೆ ಫಲಿತಾಂಶ
19 ವಾರ್ಡ್ ಗಳ ಪೈಕಿ ಬಿಜೆಪಿ 12, ಕಾಂಗ್ರೆಸ್ 5, ಪಕ್ಷೇತರ ಅಭ್ಯರ್ಥಿಗಳು 2 ವಾರ್ಡ್ ಗಳಲ್ಲಿ ಜಯಗಳಿಸಿದ್ದು, ಜೆಡಿಎಸ್ ಶೂನ್ಯವಾಗಿದೆ. ಆರು ತಿಂಗಳ ಹಿಂದೆಯಷ್ಟೆ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಭರ್ಜರಿ ಗೆಲುವು ಸಾಧಿಸಿದ್ದರು. ಅಲ್ಲದೇ ಡಿ.ಕೆ ಶಿವಕುಮಾರ್ ಕುಂದಗೋಳ ಉಪ ಚುನಾವಣೆ ಉಸ್ತುವಾರಿಯನ್ನು ವಹಿಸಿಕೊಂಡು ಕಾಂಗ್ರೆಸ್ ಗೆ ಭರ್ಜರಿ ಜಯ ತಂದುಕೊಟಿದ್ದರು.
ಆದರೆ ಪಕ್ಷ ಸಂಘಟನೆಯ ಕೊರತೆ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಗೆಲುವು ಸಾಧಿಸಿದ ಅಭ್ಯರ್ಥಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.