ಫೆ.28ರಂದು ಹುಬ್ಬಳ್ಳಿಯಲ್ಲಿ ಮೋಡಿ ಮಾಡಲಿದ್ದಾರೆ ಮೋದಿ

ಧಾರವಾಡ, ಫೆ.21 : ದಾವಣಗೆರೆ ಮತ್ತು ಮಂಗಳೂರಿನ ಭಾರತ ಗೆಲ್ಲಿಸಿ ಸಮಾವೇಶಗಳ ಯಶಸ್ಸಿನ ನಂತರ ಕರ್ನಾಟಕ ಬಿಜೆಪಿ ಫೆ.28ರ ನರೇಂದ್ರ ಮೋದಿ ಸಮಾವೇಶಕ್ಕಾಗಿ ಅಗತ್ಯ ಸಿದ್ಧತೆ ಆರಂಭಿಸಿದೆ. ಫೆ.28ರಂದು ಹುಬ್ಬಳ್ಳಿ ಮತ್ತು ಗುಲ್ಬರ್ಗದಲ್ಲಿ ಭಾರತ ಗೆಲ್ಲಿಸಿ ಸಮಾವೇಶ ನಡೆಯಲಿದೆ.

ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಆಕ್ಸಫರ್ಡ್ ಕಾಲೇಜು ಹಿಂಭಾಗದ ಮೈದಾನದಲ್ಲಿ ಫೆ.28ರ ಶುಕ್ರವಾರ ಭಾರತ ಗೆಲ್ಲಿಸಿ ಸಮಾವೇಶ ನಡೆಯಲಿದೆ. ನರೇಂದ್ರ ಮೋದಿ ಫೆ.28ರಂದು ಮಧ್ಯಾಹ್ನ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಜಿಲ್ಲಾ ಬಿಜೆಪಿ ಸಮಾವೇಶಕ್ಕಾಗಿ ಸಿದ್ಧತೆ ಆರಂಭಿಸಿದೆ.[ಮೋದಿ ಭಾರತ ಗೆಲ್ಲಿಸಿ ಸಮಾವೇಶದ ಚಿತ್ರಗಳು]

ಕುಸುಗಲ್ ರಸ್ತಯಲ್ಲಿರುವ 60 ಎಕರೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸುಮಾರು 3 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ತವರು ಜಿಲ್ಲೆಯಲ್ಲಿ ಸಮಾವೇಶ ನಡೆಯುತ್ತಿದ್ದು, ಅದನ್ನು ಯಶಸ್ವಿಯಾಗಿಸಲು ಸಿದ್ಧತೆ ನಡೆಯುತ್ತಿದೆ. ಚಿತ್ರಗಳಲ್ಲಿ ನೋಡಿ ಸಮಾವೇಶದ ಸಿದ್ಧತೆ [ದೇಶಕ್ಕಾಗಿ ನಮೋ ನಂಬರ್]

ವೇದಿಕೆಗಾಗಿ ಭೂಮಿ ಪೂಜೆ

ವೇದಿಕೆಗಾಗಿ ಭೂಮಿ ಪೂಜೆ

ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶ ನಡೆಯುವ ಕುಸುಗಲ್ ರಸ್ತೆಯ ಮೈದಾನದಲ್ಲಿ ವೇದಿಕೆ ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಭೂಮಿ ಪೂಜೆ ನೆರವೇರಿಸಿ ವೇದಿಕೆ ನಿರ್ಮಾಣದ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಪ್ರಚಾರ ಕಾರ್ಯಕ್ಕೆ ಚಾಲನೆ

ಪ್ರಚಾರ ಕಾರ್ಯಕ್ಕೆ ಚಾಲನೆ

ಭಾರತ ಗೆಲ್ಲಿಸಿ ಸಮಾವೇಶದ ಪ್ರಚಾರ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಸಮಾವೇಶಕ್ಕೆ ಆಹ್ವಾನ ನೀಡುವ ಬೃಹತ್ ಬಲೂನನ್ನು ಕಟ್ಟಲಾಗಿದೆ.

ವಿವಿಧ ಜಿಲ್ಲೆಗಳ ಸಭೆ

ವಿವಿಧ ಜಿಲ್ಲೆಗಳ ಸಭೆ

ಹುಬ್ಬಳ್ಳಿಯಲ್ಲಿ ನಡೆಯುವ ಭಾರತ ಗೆಲ್ಲಿಸಿ ಸಮಾವೇಶದ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡದ ಅಕ್ಕಪಕ್ಕದ ಮತ್ತು ಉತ್ತರ ಕರ್ನಾಟಕ ಇತರ ಜಿಲ್ಲೆಗಳಲ್ಲಿ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತಿದೆ.

ಪ್ರಹ್ಲಾದ್ ಜೋಶಿ ಪ್ರತಿಷ್ಠೆ

ಪ್ರಹ್ಲಾದ್ ಜೋಶಿ ಪ್ರತಿಷ್ಠೆ

ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಧಾರವಾಡದವರಾಗಿದ್ದು ತಮ್ಮ ತವರು ಜಿಲ್ಲೆಯಲ್ಲಿ ನಡೆಯುವ ಸಮಾವೇಶವನ್ನು ಯಶಸ್ವಿಯಾಗಿಸಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಇದು ಅವರಿಗೆ ಪ್ರತಿಷ್ಠೆಯ ಪ್ರಶ್ನೆಯೂ ಆಗಿದೆ.

ಬಿಜೆಪಿಗೆ ಶಕ್ತಿ ಬೇಕು

ಬಿಜೆಪಿಗೆ ಶಕ್ತಿ ಬೇಕು

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಧಾರವಾಡ ಜಿಲ್ಲೆಯಲ್ಲಿ ಸೋತು ಸುಣ್ಣವಾಗಿದೆ. ಏಳು ಕ್ಷೇತ್ರಗಳ ಪೈಕಿ 2 ರಲ್ಲಿ ಮಾತ್ರ ಬಿಜೆಪಿ ಶಾಸಕರು ಜಯಗಳಿಸಿದ್ದಾರೆ. ಆದ್ದರಿಂದ ಹುಬ್ಬಳ್ಳಿಯಲ್ಲಿ ನಡೆಯಲಿರುವ ಮೋದಿ ಸಮಾವೇಶ ಬಿಜೆಪಿಗೆ ಹೊಸ ಶಕ್ತಿ ತುಂಬಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+