ರಾಜ್ಯಾಧ್ಯಕ್ಷ ಸ್ಥಾನ ಕೊಟ್ರೆ ನಿಭಾಯಿಸುವೆ: ಯಡಿಯೂರಪ್ಪ
ಹುಬ್ಬಳ್ಳಿ, ಡಿ. 13: ಡೆಲ್ಲಿ ಬಿಟ್ಟು ಹಳ್ಳಿಗಳಲ್ಲಿ ಸುತ್ತಾಡತೊಡಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿದರೆ ನಿಭಾಯಿಸಲು ಸಿದ್ಧ ಎಂದು
ನಾಮಪತ್ರ ಹಿಂಪಡೆಯಲು ಯತ್ನಾಳ್ ಅವರಿಗೆ ಸೂಚಿಸಿದ್ದೆ. ಬುದ್ಧಿವಾದಕ್ಕೆ ಬೆಲೆ ಕೊಡದೆ ಇದ್ದ ಕಾರಣ ಯತ್ನಾಳ್ ಅವರು ಪಕ್ಷದಿಂದ ಉಚ್ಚಾಟನೆಗೊಳ್ಳಬೇಕಾಯಿತು. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗಬೇಕು ಎಂದು ಬ್ಯಾಟಿಂಗ್ ಮಾಡಿದ ಬಿಜೆಪಿ ನಾಯಕರ ಪೈಕಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಓಪನಿಂಗ್ ಬ್ಯಾಟ್ಸ್ ಮನ್ ಆಗಿದ್ದರು. [ಯಡಿಯೂರಪ್ಪಗೆ ನ್ಯಾಯ ಸಿಗಬೇಕು!]
ಆದರೆ, ಈಗ ಪಕ್ಷದಿಂದಲೇ ಉಚ್ಚಾಟನೆಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯತ್ನಾಳ್ ಉಚ್ಚಾಟನೆಗೂ, ರಾಜ್ಯಾಧ್ಯಕ್ಷ ಸ್ಥಾನಕ್ಕೂ ಸಂಬಂಧವಿಲ್ಲ, ಹೈಕಮಾಂಡ್ ಬಯಸಿದರೆ ಯಾವುದೇ ಹುದ್ದೆ ನಿಭಾಯಿಸಲು ಸಿದ್ಧ ಎಂದಿದ್ದಾರೆ.

'ನಾನು ಈಗಾಗಲೇ ರಾಜ್ಯದ ಪಕ್ಷ ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಹೈಕಮಾಂಡ್ ರಾಜ್ಯಾಧ್ಯಕ್ಷ ಹುದ್ದೆ ನೀಡಿದರೆ ನಿಭಾಯಿಸಲು ಸಿದ್ಧ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟ್ರ ರಾಜಕಾರಣಕ್ಕಿಂತ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಒಲವು ಹೊಂದಿದ್ದೇನೆ. ಪಕ್ಷದ ವರಿಷ್ಠರು ಅವಕಾಶ ಕೊಟ್ಟರೆ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸುತ್ತೇನೆ ಎಂದರು.
ಇತ್ತೀಚೆಗೆ ಬಿಎಸ್ ಯಡಿಯೂರಪ್ಪ ಅವರ ಮೇಲಿದ್ದ ಆರೋಪಗಳು ಹೈಕೋರ್ಟ್‌ನಲ್ಲಿ ಖುಲಾಸೆಯಾಗಿವೆ. ನಂತರ ಸಂಪೂರ್ಣವಾಗಿ ಸಕ್ರಿಯಗೊಂಡಿರುವ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಬಲವರ್ಧನೆಗೊಳಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಪ್ರಹ್ಲಾದ್ ಜೋಷಿಯವರ ಅವಧಿ ಮುಗಿಯಲಿದ್ದು, ಯಡಿಯೂರಪ್ಪ ಬಿಟ್ಟರೆ ಮಿಕ್ಕವರು ರೇಸಿನಲ್ಲಿ ಇನ್ನೂ ನಿಂತಿಲ್ಲ. ಸದ್ಯಕ್ಕೆ ವಿಧಾನಪರಿಷತ್ ಚುನಾವಣೆ ಪ್ರಚಾರದಲ್ಲಿ ಎಲ್ಲರೂ ನಿರತರಗಿದ್ದಾರೆ. [ಯಡಿಯೂರಪ್ಪಗೆ ರಿಲೀಫ್ ನೀಡಿದ 5 ಪ್ರಕರಣಗಳು]
ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ BSY-BRIGADE ಆನ್ ಲೈನ್ ಪಿಟೀಷನ್ ಹಾಕಿರುವುದನ್ನು ಇಲ್ಲಿ ಸ್ಮರಿಸಬಹುದು. (ಒನ್ ಇಂಡಿಯಾ ಸುದ್ದಿ)












Click it and Unblock the Notifications