ಧಾರವಾಡ ಕಟ್ಟಡ ದುರಂತ : ಅವಶೇಷದಡಿ 12 ಜನರ ಸಾವು-ಬದುಕಿನ ಹೋರಾಟ
ಧಾರವಾಡ, ಮಾರ್ಚ್ 21 : ಧಾರವಾಡದಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಇನ್ನೂ 12 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ನಾಲ್ವರನ್ನು ಪತ್ತೆ ಹಚ್ಚಲಾಗಿದ್ದು ಕುಡಿಯಲು ನೀರು ಕೇಳುತ್ತಿದ್ದಾರೆ.
ಧಾರವಾಡದ ಹೊಸ ಬಸ್ ನಿಲ್ದಾಣದ ಸಮೀಪ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಕುಸಿದುಬಿದ್ದಿತ್ತು. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಬುಧವಾರ 5 ಶವಗಳನ್ನು ಹೊರತೆಗೆಯಲಾಗಿದೆ.
ಕಟ್ಟಡದಲ್ಲಿದ್ದ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ವಿಧ್ಯಾರ್ಥಿಗಳಿದ್ದರು. ಅವಶೇಷಗಳಡಿ ಇನ್ನೂ 12 ಜನರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ನಾಲ್ವರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ಸಂಪರ್ಕಿಸಿದ್ದು, ಕುಡಿಯಲು ನೀರು ಕೇಳುತ್ತಿದ್ದಾರೆ.
ಪೊಲೀಸ್ ಆಯುಕ್ತರು ಸ್ಥಾಪಿಸಿರುವ ಸಹಾಯವಾಣಿ ಕೇಂದ್ರದಲ್ಲಿ 20 ಜನರು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಾಗಿದೆ. ಧಾರವಾಡ ತಾಲೂಕಿನ ಹೊಲತಿಕೋಟಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಅವಶೇಷಗಳಡಿ ಸಿಲುಕಿದ್ದಾರೆ.
|
ಗೃಹ ಸಚಿವರ ಟ್ವೀಟ್
ಧಾರವಾಡ ಕಟ್ಟಡ ದುರಂತದ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಸಿಲುಕಿದ್ದಾರೆ
ಕಟ್ಟಡದಲ್ಲಿದ್ದ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ವಿಧ್ಯಾರ್ಥಿಗಳಿದ್ದರು. ಅವರು ಅವಶೇಷಗಳಡಿ ಸಿಲುಕಿದ್ದಾರೆ ಇವರಲ್ಲಿ ನಾಲ್ವರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. 9 ವಿದ್ಯಾರ್ಥಿಗಳು ಇರಬಹುದು ಎಂದು ಶಂಕಿಸಲಾಗಿದೆ.

ಪರಿಹಾರ ವಿತರಣೆ
ಧಾರವಾಡದಲ್ಲಿ ಕುಸಿತಗೊಂಡಿರುವ ನಿರ್ಮಾಣ ಹಂತದ ವಾಣಿಜ್ಯ ಸಂಕೀರ್ಣದ ನೀಲನಕ್ಷೆ ಆಧರಿಸಿ ಪರಿಹಾರ ಹಾಗೂ ರಕ್ಷಣಾಕಾರ್ಯ ನಡೆಯುತ್ತಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ತುಷಾರ ಗಿರಿನಾಥ ಹೇಳಿದ್ದಾರೆ. ಘಟನೆಯಿಂದ ಬಹಳಷ್ಟು ಅಪಾಯ ಉಂಟಾಗಿದೆ ಎಂದು ಹೇಳಿದ್ದಾರೆ.

55 ಜನರ ರಕ್ಷಣೆ
ಕಟ್ಟಡದ ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವ ಕಾರ್ಯಾಚರಣೆ ವೇಳೆ 5 ಶವಗಳು ಪತ್ತೆಯಾಗಿವೆ. 55 ಜನರನ್ನು ರಕ್ಷಣೆ ಮಾಡಲಾಗಿದೆ. ರಾಜ್ಯದ ಎಸ್‌ಡಿಆರ್‌ಎಫ್ ಹಾಗೂ ಕೇಂದ್ರದ ಎನ್‌ಡಿಆರ್‌ಎಫ್ ತಂಡ ವೈಜ್ಞಾನಿಕವಾಗಿ ಕಾರ್ಯಾಚರಣೆಯನ್ನು ನಡೆಸುತ್ತಿದೆ.












Click it and Unblock the Notifications