Student Bus Pass: ಸುಲಭವಾಗಿ ಬಸ್ ಪಾಸ್ ಪಡೆಯಬೇಕೆ?-ಇಲ್ಲಿದೆ ಸೂಕ್ತ ಮಾರ್ಗಗಳು
Student Bus Pass: ಸಾರಿಗೆ ಇಲಾಖೆಯೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲವಾಗಲೆಂದು ಉತ್ತಮ ಯೋಜನೆಗಳನ್ನು ಜಾರಿ ಮಾಡುತ್ತಲೇ ಬಂದಿದೆ. ಹಾಗೆಯೇ ಇದೀಗ ಈ ಭಾಗದ ವಿದ್ಯಾರ್ಥಿಗಳಿಗೆ ಸುಲಭವಾಗಿ ಬಸ್ ಪಾಸ್ ಪಡೆಯಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.
2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದಿಂದ ಕರ್ನಾಟಕ-ಒನ್ ಹಾಗೂ ಗ್ರಾಮ-ಒನ್ ಕೇಂದ್ರಗಳ ಮುಖಾಂತರ ವಿದ್ಯಾರ್ಥಿಗಳಿಗೆ ಬಸ್ ಪಾಸ್‌ಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ ಅವರು ಸಿ.ಬಿ.ಟಿ ಹುಬ್ಬಳ್ಳಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪಾಸ್ ವಿತರಣೆ ವ್ಯವಸ್ಥೆಯ ಕುರಿತು ಪರಿಶೀಲಿಸಿ ಸೂಕ್ತ ಸಲಹೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ ಓರ್ವ ವಿದ್ಯಾರ್ಥಿಯ ಬಸ್ ಪಾಸನ್ನು ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ವಿತರಣೆ ಮಾಡಿದರು. ಈ ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ ಅವರಿಗೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.
ಬಳಿಕ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ ಮತ್ತು ಹುಬ್ಬಳ್ಳಿ ಗ್ರಾಮಾಂತರ ವಿಭಾಗಗಳಿಗೆ ಭೇಟಿ ನೀಡಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ಕಛೇರಿಯಲ್ಲಿ ಸಭೆ ನಡೆಸಿದರು. ನಂತರ ಸಿ.ಬಿ.ಟಿ. ಬಹುಮಹಡಿ ಕಟ್ಟಡದ ವಾಣಿಜ್ಯ ಮಳಿಗೆಗಳನ್ನು, ಬಸ್ ನಿಲ್ದಾಣದ ಸ್ವಚ್ಛತೆಯನ್ನು ಪರಿಶೀಲನೆ ಮಾಡಿದರು.
ಪ್ರಸ್ತುತ ಮಳೆಗಾಲ ಪ್ರಾರಂಭ ಆಗುತ್ತಿದ್ದು, ವಾಹನಗಳ ಮೇಲ್ಛಾವಣಿ ಸೋರದಂತೆ ಕ್ರಮ ಕೈಗೊಳ್ಳಲು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಸಾರಿಗೆ ಕಾರ್ಯಾಚರಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು. ನಂತರ ಸಿ.ಬಿ.ಟಿ.-ಹುಬ್ಬಳ್ಳಿಯಿಂದ ಹೊಸೂರ ಕ್ರಾಸ್‌ವರೆಗೆ ಬಿಆರ್‌ಟಿಎಸ್ ಬಸ್‌ನಲ್ಲಿ ಪ್ರಯಾಣಿಸಿದರು.
ಭಾರೀ ಮಳೆ: ರಾಜ್ಯಾದ್ಯಂತ ಮುಂಗಾರು ಚುರುಕು ಪಡೆದಿದ್ದು, ಇದರಿಂದ ಅನ್ನದಾತರು ಸಂತಸಗೊಂಡಿದ್ದರೆ, ಮತ್ತೊಂದೆಡೆ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿ ಭೀತಿ ಹುಟ್ಟಿಸಿದ್ದಾನೆ. ಹಾಗೆಯೇ ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯ ಹಲವೆಡೆ ಸುರಿದ ಭಾರೀ ಮಳೆಯಿಂದ ಅನಾಹುತಗಳು ಸೃಷ್ಟಿಯಾಗಿವೆ.
ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ನಗರದಲ್ಲಿ ನಿನ್ನೆ ಮತ್ತು ಇಂದು ಧಾರಾಕಾರ ಮಳೆ ಸುರಿದಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಎವಿಕೆ ರಸ್ತೆ ಸೇರಿದಂತೆ ಹಲವೆಡೆ ನೀರು ನಿಂತಿದ್ದು, ಜನರಿಗೆ ತೊಂದರೆ ಆಯಿತು. ಮಧ್ಯಾಹ್ನ ಶುರುವಾದ ಮಳೆಯು ಸುಮಾರು ಒಂದೂವರೆ ಗಂಟೆಗಳ ಕಾಳ ಸುರಿಯಿತು. ಇನ್ನು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಸಿಟಿ ಮಂದಿಗೆ ಕೂಲ್ ಕೂಲ್ ವಾತಾವರಣ ಇತ್ತು. ಗ್ರಾಮೀಣ ಪ್ರದೇಶದಲ್ಲಿಯೂ ವರುಣ ಆರ್ಭಟಿಸಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಸುಮಾರು ಒಂದೂವರೆ ಗಂಟೆಗಳ ಕಾಲ ಧಾರಾಕಾರ ಸುರಿಯಿತಲ್ಲದೇ, ಶಾಲೆ ಬಿಡುವ ವೇಳೆಯಲ್ಲಿ ಮಳೆ ಬಂದಿದ್ದರಿಂದ ವಿದ್ಯಾರ್ಥಿಗಳು ಮಳೆಯಲ್ಲಿ ತೊಯ್ದುಕೊಂಡು ಮನೆಗೆ ಹೋಗುವಂತಾಯಿತು. ಕೆಲ ಬಡಾವಣೆಗಳಲ್ಲಿ ನೀರು ನಿಂತು ಜನರು ಪರದಾಡಿದ ಘಟನೆಗಳು ನಡೆದಿವೆ.
ಕಳೆದ ಒಂದು ವಾರ ಬಿಡುವು ನೀಡಿದ್ದ ವರುಣ ಮತ್ತೆ ಆರ್ಭಟಿಸಿದ್ದು, ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಸಜ್ಜಾಗಿದ್ದಾರೆ. ಜಗಳೂರು ತಾಲೂಕಿನ ಹಲವೆಡೆಯೂ ಮಳೆಯಾಗಿದ್ದು, ಬಿಳಿಚೋಡು ಹೋಬಳಿ ವ್ಯಾಪ್ತಿಯ ಪಲ್ಲಾಗಟ್ಟೆ, ಸೊಕ್ಕೆ ಹೋಬಳಿ ಮತ್ತು ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಮಳೆರಾಯ ಆರ್ಭಟಿಸಿದ್ದಾರೆ.












Click it and Unblock the Notifications