ಎರಡು ದಿನದಲ್ಲಿ ಉಪ ಚುನಾವಣಾ ಕಲಿಗಳು ಅಂತಿಮ: ಬಿಜೆಪಿ ರಾಜ್ಯಾಧ್ಯಕ್ಷ

ಧಾರವಾಡ, ಅಕ್ಟೋಬರ್ 8: ಕರ್ನಾಟಕದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಭಾರತೀಯ ಜನತಾ ಪಕ್ಷದ ಕೇಂದ್ರ ನಾಯಕರು ಇನ್ನೆರಡು ದಿನಗಳಲ್ಲಿ ಹೆಸರುಗಳನ್ನು ಅಂತಿಮ ಮಾಡಿ ಕಳಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಧಾರವಾಡದಲ್ಲಿ ತಿಳಿಸಿದ್ದಾರೆ.

ನಗರದಲ್ಲಿಇಂದು ಪಶ್ಚಿಮ ಪದವೀಧರರ ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದ ವೇಳೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಉಪ ಚುನಾವಣೆ ನಡೆಯುವ ಶಿರಾ, ರಾಜರಾಜೇಶ್ವರಿನಗರ ಕ್ಷೇತ್ರಗಳಲ್ಲಿ ನಮಗೆ ಒಳ್ಳೆಯ ಸ್ಪಂದನೆ ಇದೆ. ಶಿರಾದಲ್ಲಿ ಕಾಂಗ್ರೆಸ್, ಜೆಡಿಎಸ್ ಮತದಾರರು ಬಿಜೆಪಿಯತ್ತ ಬರುತ್ತಿದ್ದು, ಹೀಗಾಗಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

By-Election BJP Candidates Final In Two Days: BJP President Nalin Kumar Kateel

ರಾಜ್ಯ ಬಿಜೆಪಿ ಕೋರ್ ಕಮೀಟಿಯಲ್ಲಿ ಚರ್ಚಿಸಿ ಹೆಸರು ಫೈನಲ್ ಮಾಡಿ ಅಭ್ಯರ್ಥಿಗಳ ಹೆಸರುಗಳನ್ನು ಈಗಾಗಲೇ ಹೈಕಮಾಂಡ್ ಗೆ ಕಳುಹಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಿದೆ ಎಂದು ಮಾಹಿತಿ ನೀಡಿದರು.

ವಿಧಾನ ಪರಿಷತ್ ಚುನಾವಣೆಗೂ ನಾವು ಸಂಪೂರ್ಣ ತಯಾರಿ ಮಾಡಿಕೊಂಡಿದ್ದೇವೆ. ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತದಾರರೇ ಇದ್ದಾರೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+