ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಂದಗೋಳ ಉಪ ಚುನಾವಣೆ, ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ

|
Google Oneindia Kannada News

ಧಾರವಾಡ, ಮೇ 16 : ಕುಂದಗೋಳ ವಿಧಾನಸಭೆ ಉಪ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯ ಮೇ 17ರ ಸಂಜೆ 6 ಗಂಟೆಗೆ ಅಂತ್ಯವಾಗಲಿವೆ. ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ 06 ಗಂಟೆಗೆ ಅಂತ್ಯಗೊಳ್ಳಲಿದೆ. ಈ ಅವಧಿಯ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿರುವ ವಿವಿಧ ಕ್ಷೇತ್ರಗಳ ರಾಜಕೀಯ ಕಾರ್ಯಕರ್ತರು, ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದಿಂದ ನಿರ್ಗಮಿಸುವಂತೆ ಚುನಾವಣಾಧಿಕಾರಿ ವಿ.ಪ್ರಸನ್ನ ಸೂಚನೆ ನೀಡಿದ್ದಾರೆ.

ಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲ

ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ ಅಂತ್ಯಗೊಳ್ಳಲಿದೆ. ಈ ಅವಧಿಯ ನಂತರ ವಿವಿಧೆಡೆಗಳಿಂದ ಆಗಮಿಸಿರುವ ರಾಜಕೀಯ ಕಾರ್ಯಕರ್ತರು, ಕ್ಷೇತ್ರದ ಮತದಾರರಲ್ಲದವರು ಕುಂದಗೋಳ ಕ್ಷೇತ್ರದಲ್ಲಿ ಇರುವಂತಿಲ್ಲ.

ಕುಂದಗೋಳ ಉಪ ಚುನಾವಣೆಗೆ ಆಯೋಗ ಸಿದ್ಧ, 214 ಮತಗಟ್ಟೆ ಸ್ಥಾಪನೆಕುಂದಗೋಳ ಉಪ ಚುನಾವಣೆಗೆ ಆಯೋಗ ಸಿದ್ಧ, 214 ಮತಗಟ್ಟೆ ಸ್ಥಾಪನೆ

Dharwad

ಕೂಡಲೇ ಅಂತಹವರು ಮತ ಕ್ಷೇತ್ರದಿಂದ ನಿರ್ಗಮಿಸಬೇಕು. ಬೇರೆ-ಬೇರೆ ಕ್ಷೇತ್ರದಿಂದ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ರಾಜಕೀಯ ವ್ಯಕ್ತಿಗಳು ಕ್ಷೇತ್ರದ ವಿವಿಧ ಲಾಡ್ಜ್, ಫಾರ್ಮ್‍ಹೌಸ್, ಹೋಟೆಲ್ ಮತ್ತು ಇತರ ಸ್ಥಳಗಳಲ್ಲಿ ತಂಗಿರುವ ಸಾಧ್ಯತೆಗಳಿದ್ದು, ಅಂತಹವರು ಕೂಡಲೆ ಅಲ್ಲಿಂದ ನಿರ್ಗಮಿಸಬೇಕು ಎಂದು ಸೂಚನೆ ನೀಡಲಾಗಿದೆ.

ಕುಂದಗೋಳ : ಡಿ.ಕೆ.ಶಿವಕುಮಾರ್ ತಂತ್ರದಿಂದ ಬಿಜೆಪಿಗೆ ನಡುಕಕುಂದಗೋಳ : ಡಿ.ಕೆ.ಶಿವಕುಮಾರ್ ತಂತ್ರದಿಂದ ಬಿಜೆಪಿಗೆ ನಡುಕ

ಏಜೆಂಟರಿಗೆ ಸೂಚನೆ : ಯಾವುದೇ ಪಕ್ಷ, ಅಭ್ಯರ್ಥಿಗಳು, ಏಜೆಂಟರು ಅಥವಾ ಅಭ್ಯರ್ಥಿಗಳ ಪರವಾಗಿ ಮೇ.19ರಂದು ಮತದಾನ ದಿನದಂದು ಮತದಾರರಿಗೆ ಮತಗಟ್ಟೆಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು ವಾಹನದ ವ್ಯವಸ್ಥೆಯನ್ನು ಮಾಡುವಂತಿಲ್ಲ.

ತಿಂಡಿ ಅಥವಾ ಊಟದ ವ್ಯವಸ್ಥೆ ಮಾಡಬಾರದು. ಮತಗಟ್ಟೆ ಏಜೆಂಟರುಗಳು ನಿಗದಿತ ಸಮಯದೊಳಗೆ ಮತಗಟ್ಟೆಗಳಿಗೆ ಹಾಜರಾಗಬೇಕು. ಬೆಳಗ್ಗೆ 6 ಗಂಟೆಗೆ ಮತಗಟ್ಟೆಗಳಲ್ಲಿ ಮತಗಟ್ಟೆ ಸಿಬ್ಬಂದಿಗಳು ಅಣಕು ಮತದಾನ ನಡೆಸುವರು, ಈ ಸಂದರ್ಭದಲ್ಲಿ ಸಂಬಂಧಪಟ್ಟ ಏಜೆಂಟರು ಹಾಜರಿರಬೇಕು ಎಂದು ತಿಳಿಸಲಾಗಿದೆ.

English summary
Election campaign for Dharwad district Kundgol by elections ends tomorrow (May 17) evening. Voting will be held on May 19, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X