• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿನಯ್ ಕುಲಕರ್ಣಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ

By ಧಾರವಾಡ ಪ್ರತಿನಿಧಿ
|

ಧಾರವಾಡ, ನವೆಂಬರ್ 6: ಧಾರವಾಡ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿಯವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿ ಧಾರವಾಡದ 2ನೇ ಸೆಷನ್ಸ್​ ಕೋರ್ಟ್ ಆದೇಶ ಹೊರಡಿಸಿದೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!

ಗುರುವಾರ (ನ.5) ಬೆಳಿಗ್ಗೆ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದಿತ್ತು. ಸಂಜೆ ವೇಳೆಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆ ವೇಳೆ ವಿಚಾರಣೆ ನಡೆಸಿದ್ದ ಕೋರ್ಟ್ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು.

ಶುಕ್ರವಾರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆ ಮತ್ತೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು.

ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ವಿನಯ್ ಕುಲಕರ್ಣಿಯವರನ್ನು ಕಸ್ಟಡಿಗೆ ನೀಡಿ ಆದೇಶಿಸಿದೆ.

English summary
The court has ordered the CBI to detain former minister Vinay Kulkarni for three days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X