ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿನಯ್ ಕುಲಕರ್ಣಿ ಜಾಮೀನಿಗೆ ಸುಪ್ರೀಂನಲ್ಲಿ ಸಿಬಿಐ ಆಕ್ಷೇಪ

|
Google Oneindia Kannada News

ಧಾರವಾಡ, ಜುಲೈ 26; ಬಿಜೆಪಿ ನಾಯಕ, ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಸಹ ಸಿಬಿಐ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಆಕ್ಷೇಪ ವ್ಯಕ್ತಪಡಿಸಿದೆ.

ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದೆ. ಆದ್ದರಿಂದ ಅವರು ಜಾಮೀನು ಪಡೆಯಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ನೀಡಬಾರದು ಎಂದು ಸಿಬಿಐ ವಾದ ಮಂಡಿಸಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರನ ಕಾರು ಅಪಘಾತ: ಇಬ್ಬರು ಸಾವುಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರನ ಕಾರು ಅಪಘಾತ: ಇಬ್ಬರು ಸಾವು

ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರು ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಕೊಲೆಯಾದ ಯೋಗೇಶ್ ಗೌಡ ಪತ್ನಿಗೆ ಈಗಾಗಲೇ ಅವರು ಬೆದರಿಕೆ ಹಾಕಿದ್ದಾರೆ ಎಂದು ಸಿಬಿಐ ಆಕ್ಷೇಪಣೆಯಲ್ಲಿ ಹೇಳಿದೆ.

ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌!ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌!

CBI Opposes For Vinay Kulkarni Bail Plea In SC

ಆರೋಪಿಗೆ ಜಾಮೀನು ನೀಡಿ ಬಿಡುಗಡೆ ಮಾಡಲು ಯಾವುದೇ ಕಾರಣಗಳಿಲ್ಲ ಎಂದು ಸಿಬಿಐ ವಾದ ಮಂಡಿಸಿದೆ. ನ್ಯಾಯಮೂರ್ತಿ ಯು. ಯು. ಲಲಿತ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರ ಸಹ ಮುಂದುವರೆಸಲಿದ್ದಾರೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ!ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ!

2016ರಲ್ಲಿ ನಡೆದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದೆ. ಸದ್ಯ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

ಯೋಗೇಶ್ ಗೌಡರನ್ನು ಜಿಮ್‌ನಲ್ಲಿ ಜೂನ್ 15, 2016ರಂದು ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು.

Recommended Video

ಯಡಿಯೂರಪ್ಪರನ್ನು ಹೊಗಳಿದ ಜೆ ಪಿ ನಡ್ಡಾ: ಹಾಗಾದ್ರೆ ಸಿಎಂ ಸೇಫಾಗ್ತಾರಾ?? | Oneindia Kannada

2019ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಹತ್ಯೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು.

English summary
CBI opposed for former Karnataka minister and Congress leader Vinay Kulkarni bail application in Supreme Court. Congress leader arrested in connection with the 2016 murder case of BJP leader Yogesh Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X