• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಂದೆ ಸಾವಿನ ದುಃಖದಲ್ಲಿ ಪರೀಕ್ಷೆ ಬರೆದ ಹುಡುಗಿಗೆ ಶೇ 76ರಷ್ಟು ಅಂಕ

|

ಧಾರವಾಡ, ಮೇ 06 : ತಂದೆಯ ಸಾವಿನ ದುಃಖದ ನಡುವೆಯೇ ಪರೀಕ್ಷೆ ಬರೆದಿದ್ದ ಹೆಣ್ಣು ಮಗಳ ದಿಟ್ಟತನಕ್ಕೆ ರಾಜ್ಯವೇ ಭೇಷ್ ಎಂದಿತ್ತು. ಎಸ್‌.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಶೇ 76ರಷ್ಟು ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿದ್ದಾಳೆ.

ಸೋಮವಾರ ಸಿಬಿಎಸ್‌ಇಯ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಪುತ್ರಿ ರೂಪಾ ಶಿವಳ್ಳಿ ಅವರು ಶೇ 76ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಸಿ.ಎಸ್.ಶಿವಳ್ಳಿ ಅವರು ನಿಧನರಾದ ಮರು ದಿನ ರೂಪಾ ಪರೀಕ್ಷೆ ಬರೆದಿದ್ದರು.

ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಪರಿಚಯ

ಹುಬ್ಬಳ್ಳಿಯ ಕೆ.ಎಲ್‌.ಇ.ಇಂಗ್ಲಿಷ್ ಶಾಲೆಯ ವಿದ್ಯಾರ್ಥಿನಿ ರೂಪಾ ಅವರು ಚೇತನಾ ಕಾಲೋನಿಯಲ್ಲಿರುವ ಸೇಂಟ್ ಅಂಟೋನಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದರು. ಇಂದು ಫಲಿತಾಂಶ ಪ್ರಕಟವಾಗಿದ್ದು ಪ್ರಥಮ ಶ್ರೇಣಿಯಲ್ಲಿ ರೂಪಾ ಉತ್ತೀರ್ಣರಾಗಿದ್ದಾರೆ.

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ

ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಶಾಸಕ, ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಮಾರ್ಚ್ 22ರಂದು ಹೃದಯಾಘಾತದಿಂದಾಗಿ ನಿಧನಹೊಂದಿದ್ದರು. ಸಂಜೆ ಅವರ ಪಾರ್ಥಿವ ಶರೀರವನ್ನು ಹುಟ್ಟೂರು ಯುರಗುಪ್ಪಿಗೆ ತೆಗೆದುಕೊಂಡು ಹೋಗಲಾಗಿತ್ತು.

ಅಪಘಾತದಲ್ಲಿ ಬಲಗೈ ಕಳೆದುಕೊಂಡಿದ್ದರೂ 600 ಅಂಕ ಪಡೆದ ಶಿವಮೊಗ್ಗದ ನಂದಿನಿ

ತಂದೆಯ ಪಾರ್ಥಿವ ಶರೀರ ರಾತ್ರಿ ಮನೆಯಲ್ಲಿದ್ದೂ, ಇಡೀ ಕುಟುಂಬ ದುಃಖದಲ್ಲಿ ಮುಳಗಿದ್ದರೂ ರೂಪಾ ಅವರು ಮಾ.23ರಂದು ಎಸ್‌.ಎಸ್‌.ಎಲ್‌.ಸಿ.ಪರೀಕ್ಷೆ ಬರೆಯಲು ನಿರ್ಧರಿಸಿದ್ದರು. ಪರೀಕ್ಷೆ ಬರೆದು ಬಳಿ ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಉಪ ಚುನಾವಣೆ ನಡೆಯಲಿದೆ. ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Municipalities minister C.S.Shivalli daughter Roopa Shivalli scored 76 76 percent result in CBSE class 10th. Roopa Shivalli written exam on March 23 next day of his father dismiss. Kundgol constituency Congress MLA and Municipalities minister C.S.Shivalli passed away in a hospital in Hubballi on March 22, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more