Chandrayaan-3: ಧಾರವಾಡ ಕಲಾವಿದನ ಕೈಯಲ್ಲಿ ಅರಳಿದ ಮಿನಿ ಗಗನನೌಕೆ
ಧಾರವಾಡ, ಜುಲೈ 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂದು ಮಧ್ಯಾಹ್ನ 2:35ಕ್ಕೆ ಗಗನನೌಕೆಯ ಪ್ರಯಾಣ ಚಂದ್ರನೆಡೆಗೆ ಆರಂಭವಾಗಲಿದೆ. ಚಂದ್ರಯಾನ-3 ಸಿದ್ಧತೆಗಳು ಸಂಪೂರ್ಣಗೊಂಡಿದ್ದು, ಸಂಪೂರ್ಣ ಭಾರತವೇ ಕುತೂಹಲದಿಂದ ಕಾಯುತ್ತಿದೆ.
ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3ಕ್ಕೆ ಧಾರವಾಡದ ಕಲಾವಿದ ಮಂಜುನಾಥ ಹಿರೇಮಠ ಅವರು ವಿಶೇಷವಾಗಿ ಶುಭ ಕೋರಿದ್ದಾರೆ. ಎಲ್‌ಎಂವಿ ಪೈಪ್‌ಗಳ ಸಹಾಯದಿಂದ ಮಿನಿ ಉಪಗ್ರಹ ಸಿದ್ಧಪಡಿಸಿರುವ ಕಲಾವಿದ ಹಿರೇಮಠ, ಈ ಬಾರಿ ಯಾವುದೇ ವಿಘ್ನಗಳು ಉಂಟಾಗದಂತೆ ಯಶಸ್ವಿಯಾಗಿ ಉಪಗ್ರಹ ಉಡಾವಣೆಯಾಗಲಿ ಎಂದು ವಿಘ್ನೇಶ್ವರನಿಗೆ ಪೂಜೆ ಸಹ ಸಲ್ಲಿಸಿದ್ದಾರೆ.

ಚಂದ್ರಯಾನ-2 ಸಂದರ್ಭದಲ್ಲಿ ರೋವರ್ ಲ್ಯಾಂಡಿಂಗ್ ಸಮಸ್ಯೆಯುಂಟಾಗಿತ್ತು. ಹೀಗಾಗಿ ಈ ಬಾರಿ ಯಾವುದೇ ತೊಂದರೆಯಾಗದೆ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಕಲಾವಿದ ಮಂಜುನಾಥ ಹಿರೇಮಠ ಅವರು ವಿಘ್ನೇಶ್ವರನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಜುನಾಥ ಹಿರೇಮಠ ಅವರ ಕೈಚಳಕದಲ್ಲಿ ಚಂದ್ರಯಾನ-3 ಗಗನನೌಕೆ ಅದ್ಭುತವಾಗಿ ಮೂಡಿ ಬಂದಿದ್ದು, ನೋಡಿದವರು ವಾವ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಹಿಂದೆ ಕೂಡ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆಯ ಬಹು ನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರ ಆರಂಭಿಸಿದಾಗ ಮಂಜುನಾಥ ಹಿರೇಮಠ ವಿಶೇಷ ಕಲಾಕೃತಿಯೊಂದನ್ನು ರಚಿಸಿದ್ದರು. ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ನಿರುಪಯುಕ್ತವಾದ ಥರ್ಮಕೋಲ್ ಹಾಗೂ ಫ್ಲೈವುಡ್ ಪೀಸ್‌ಗಳಿಂದ 3X2 ಅಳತೆಯ ವಂದೇ ಭಾರತ್ ರೈಲು ನಿರ್ಮಿಸಿದ್ದರೆ. ಅಲ್ಲದೇ ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರುವ ಕಲಾಕೃತಿಯನ್ನೂ ಕೂಡ ರಚಿಸಿ, ಧಾರವಾಡ ಬೆಂಗಳೂರು ಜಂಕ್ಷನ್ ಬೋರ್ಡ್ ಹಾಕಿ ಎಲ್ಲರ ಗಮನ ಸೆಳೆದಿದ್ದರು.












Click it and Unblock the Notifications