ಧಾರವಾಡ; ಕವಿ ಡಾ. ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ

ಧಾರವಾಡ, ಫೆಬ್ರವರಿ 15; ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೋವಿಡ್ ಸೋಂಕು ತಗುಲಿದ ಬಳಿಕ ಜನವರಿ 14ರಿಂದ ಅವರು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

93 ವರ್ಷದ ಡಾ. ಚೆನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಧಾರವವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸರ್ಕಾರ ಚಿಕಿತ್ಸಾ ವೆಚ್ಚ ಭರಿಸುತ್ತಿದೆ.

ಆಸ್ಪತ್ರೆಯ ಸೋಮವಾರದ ಹೆಲ್ತ್ ಬುಲೆಟಿನ್ ಪ್ರಕಾರ ಚೆನ್ನವೀರ ಕಣವಿ ಅವರ ಶ್ವಾಸಕೋಶದ ಸೋಂಕು ಕಡಿಮೆಯಾಗಿಲ್ಲ. ಚಿಕಿತ್ಸೆ ನೀಡುತ್ತಿದ್ದರೂ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ. ರಕ್ತದೊತ್ತಡ ಸಹ ಕಡಿಮೆಯಾಗುತ್ತಿದ್ದು, ನಿಯಂತ್ರಣಕ್ಕೆ ತರಲು ಪ್ರಯತ್ನ ನಡೆಯುತ್ತಿದೆ ಎಂದು ಬುಲೆಟಿನ್ ಹೇಳಿದೆ.

Chennaveera Kanavi Health Critical Says Health Bulletin

ಫೆಬ್ರವರಿ 13ರ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಡಾ. ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ಅವರು ಶೀಘ್ರವಾಗಿ ಗುಣಮುಖರಾಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು.

ಒಂದು ತಿಂಗಳಿನಿಂದ ಚೆನ್ನವೀರ ಕಣವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡುತ್ತದೆ. ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲು ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿಗಳ ಭೇಟಿ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಡಾ. ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. "ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸ್ವಲ್ಪಮಟ್ಟಿನ ಚೇತರಿಕೆ ಕಂಡು ಬಂದಿದೆ, ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ. ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು" ಎಂದು ಹೇಳಿದ್ದರು.

"ಕಳೆದ ಒಂದು ತಿಂಗಳ ಹಿಂದೆ ನ್ಯುಮೋನಿಯಾ ಖಾಯಿಲೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆರ್‌ಟಿಪಿಸಿಆರ್ ತಪಾಸಣೆಯಿಂದ ಕೋವಿಡ್ ಪಾಸಿಟಿವ್ ಧೃಡಪಟ್ಟಿತ್ತು. ನಂತರ ಕೋವಿಡ್ ನೆಗೆಟಿವ್ ಆಗಿದೆ. ಮುಂದಿನ 3-4 ದಿನಗಳಲ್ಲಿ ನ್ಯುಮೋನಿಯಾ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಭರವಸೆಯಿದೆ" ಎಂದು ತಿಳಿಸಿದ್ದರು.

"ಹಿರಿಯರಾದ ಕಣವಿ ಅವರು ಬಹಳಷ್ಟು ಗಟ್ಟಿತನದಿಂದ ಚಿಕಿತ್ಸೆಗೆ ಸ್ಪಂದಿಸುತ್ತ, ಹೋರಾಟ ನಡೆಸುತ್ತಿದ್ದಾರೆ.ಆರೋಗ್ಯ ಚೇತರಿಕೆ ಬಗ್ಗೆ ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರಳ, ಸಜ್ಜನಿಕೆಗೆ ಹೆಸರಾಗಿರುವ ಕಣವಿ ಅವರ ಚಿಂತನೆಗಳಿಂದ ನಾಡಿಗೆ ಮತ್ತೆ ಪ್ರೇರಣೆ ದೊರೆಯುವಂತಾಗಲಿ ಎಂಬ ಆಶಯ, ಭರವಸೆ ಇದೆ. ಅವರ ಕುಟುಂಬದೊಂದಿಗೆ ತಮಗೆ ದೀರ್ಘ ಕಾಲದ ಆತ್ಮೀಯ ಒಡನಾಟ ಇದೆ. ಸರ್ಕಾರದ ವೆಚ್ಚ, ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ" ಎಂದು ಹೇಳಿದ್ದರು.

ಭಾವಜೀವಿ ಎಂಬ ಖ್ಯಾತಿ; ಡಾ. ಚೆನ್ನವೀರ ಕಣವಿ ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಜನಿಸಿದರು. ಭಾವ ಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದಿರುವ ಅವರು ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಡಾ. ಚೆನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ1949ರಲ್ಲಿ ಬಿಡುಗಡೆಗೊಂಡಿತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ರಚನೆ ಮಾಡಿದ್ದಾರೆ.

ಹಾಸನದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಡಾ. ಚೆನ್ನವೀರ ಕಣವಿ. ಹಂಪಿ ವಿಶ್ವವಿದ್ಯಾಲಯ ನಾಡೋಜ ಪಶಸ್ತಿಯನ್ನು ಅವರಿಗೆ ನೀಡಿ ಗೌರವಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+