ಹುಬ್ಬಳ್ಳಿ: ಮೃತರ ಕುಟುಂಬಕ್ಕೆ 2ಲಕ್ಷ ಪರಿಹಾರ ಘೋಷಿಸಿದ ಸಿದ್ದು

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಫೆಬ್ರವರಿ, 9: ಹುಬ್ಬಳ್ಳಿ ರೈಲ್ವೆ ಕಟ್ಟಡ ಕುಸಿತ ದುರಂತದಲ್ಲಿ ಮಡಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಮೃತರ ಕುಟುಂಬದವರಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.

ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, 'ರೈಲ್ವೆ ಇಲಾಖೆ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಕಾನೂನು ಪ್ರಕಾರ ಮೃತರ ಕುಟುಂಬಸ್ಥರಿಗೆ ನೌಕರಿ ನೀಡಲಾಗುತ್ತಿದೆ. ಸಿಬ್ಬಂದಿಯಲ್ಲದವರಿಗೆ ಪರಿಹಾರ ಮಾತ್ರ ನೀಡಲಾಗುತ್ತಿತ್ತು. ಆದರೆ ರೈಲ್ವೆ ಸಿಬ್ಬಂದಿಯಲ್ಲದವರ ಕುಟುಂಬದವರಿಗೂ ಉದ್ಯೋಗ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. [ಚಿತ್ರಗಳು : ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕಟ್ಟಡ ಕುಸಿತ]

Siddaramaiah

ಘಟನಾ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಕೇಂದ್ರ ರಸಗೊಬ್ಬರ ಸಚಿವ ಅನಂತ್ ಕುಮಾರ್, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ವಾಸ್ತವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯೂ ಹಲವಾರು ಹಗರಣಗಳ ಗೂಡಾಗಿರುವುದರಿಂದ ಗಾಯಾಳುಗಳನ್ನು ಹುಬ್ಬಳ್ಳಿ ನೈಋತ್ಯ ರೈಲ್ವೆ ಕೇಂದ್ರ ಕಚೇರಿಯ ಸುಸಜ್ಜಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಮರಣೋತ್ತರ ಪರೀಕ್ಷೆಗಾಗಿ ಮಾತ್ರ ಕಿಮ್ಸ್ ಆಸ್ಪತ್ರೆ ಬಳಸಿಕೊಳ್ಳಲಾಗಿದೆ.[ಅವ್ಯವಸ್ಥೆಯ ಗೂಡು ಹುಬ್ಬಳ್ಳಿ ರೈಲು ನಿಲ್ದಾಣ]

ನಗರ ಪೊಲೀಸರ ಮೇಲೆ ಕಿಡಿಕಾರಿದ ಸಾರ್ವಜನಿಕರು

ರೈಲ್ವೆ ಭದ್ರಾ ಪಡೆಯ ಪೊಲೀಸರು ಕಾರ್ಯಾಚರಣೆಯಲ್ಲಿ ನಿರತವಾಗಿರುವುದರಿಂದ ಹುಬ್ಬಳ್ಳಿ-ಧಾರವಾಡ ಪೊಲೀಸರು ಹೆಚ್ಚಿನ ಶ್ರಮ ವಹಿಸಿಲ್ಲ. ಈ ಸಂದರ್ಭದಲ್ಲಿ ಎದುರಾದ ಜನಜಂಗುಳಿಯನ್ನು ನಿಯಂತ್ರಿಸಲು ಪ್ರಯತ್ನಿಸಿಲ್ಲ. ಇದರಿಂದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸಬೇಕಾಯಿತು ಎಂದು ಸಾರ್ವಜನಿಕರು ದೂರಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Minister Siddaramaiah visits Hubballi on Tuesday, February. Siddaramaigh announced 2 lakh compensation to deceased family. Parcel office building of Hubballi central railway station in Karnataka collapses on Monday, 8 people trapped in the debris.
Please Wait while comments are loading...