ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ.12ರಿಂದ ರಾಷ್ಟ್ರೀಯ ಯುವಜನೋತ್ಸವ: ಲೋಗೋ ಹಾಗೂ ಮ್ಯಾಸ್ಕಾಟ್ ಬಿಡುಗಡೆ ಮಾಡಿದ ಸಿಎಂ

|
Google Oneindia Kannada News

ಧಾರವಾಡ ಜನವರಿ 7: ಜನವರಿ 12ರಿಂದ ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಹಾಗೂ ಮ್ಯಾಸ್ಕಾಟ್ ಅನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು. ಇಂದು ತಮ್ಮ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಜ. 12ರಿಂದ ಐದು ದಿನ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಇಡೀ ಧಾರವಾಡ ನಗರವನ್ನು ಸುಂದರಗೊಳಿಸುವತ್ತ ಜಿಲ್ಲಾಡಳಿತದ ಚಿತ್ತ ಹರಿಸಿದೆ.

ಯುವ ಸಮ್ಮೇಳನಕ್ಕೆ ಧಾರವಾಡದ ಉದ್ಯಾನವನ, ಕೆರೆಗಳನ್ನು ಶೃಂಗರಿಸಲಾಗುವುದು ಎನ್ನಲಾಗುತ್ತಿದೆ. ಈ ಹಿಂದೆ ಧಾರವಾಡದಲ್ಲಿ ನಡೆದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲೂ ಇದೇ ರೀತಿ ನಗರವನ್ನು ಶೃಂಗರಿಸಲಾಗಿತ್ತು. ಇದೀಗ ನಾಲ್ಕು ವರ್ಷಗಳ ನಂತರ ರಾಷ್ಟ್ರೀಯ ಯುವ ಸಮ್ಮೇಳನಕ್ಕೆ ಬೇರೆ ಬೇರೆ ರಾಜ್ಯಗಳ ಅಂದಾಜು 7500 ಯುವ ಕಲಾವಿದರು ಆಗಮಿಸುತ್ತಿದ್ದಾರೆ. ಅತಿಥಿಗಳು, ಗಣ್ಯಮಾನ್ಯರು ಧಾರವಾಡದ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಧಾರವಾಡ ನಗರವನ್ನು ಸ್ವಚ್ಛಗೊಳಿಸಿ ಸುಂದರಗೊಳಿಸುವ ಅನಿವಾರ‍್ಯತೆಯೂ ಇದೆ.

ಧಾರವಾಡ: ಯುವಜನೋತ್ಸವಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಅಕ್ಷಯ್‌ ಕುಮಾರ್‌ಗೆ ಆಹ್ವಾನ ಕೊಟ್ಟ ಜೋಶಿಧಾರವಾಡ: ಯುವಜನೋತ್ಸವಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಅಕ್ಷಯ್‌ ಕುಮಾರ್‌ಗೆ ಆಹ್ವಾನ ಕೊಟ್ಟ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮ್ಮೇಳನವನ್ನು ಹುಬ್ಬಳ್ಳಿಯಲ್ಲಿ ಉದ್ಘಾಟನೆ ಮಾಡಿದರೂ ಧಾರವಾಡದ ಪ್ರಮುಖ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ‍್ಯಕ್ರಮಗಳು ನಡೆಯುತ್ತಿವೆ. ಹೀಗಾಗಿ ಮೊದಲಿಗೆ ಧಾರವಾಡದ ಕರ್ನಾಟಕ ಕಾಲೇಜು, ಕರ್ನಾಟಕ ವಿವಿ, ಕೃಷಿ ವಿವಿಗೆ ಸಂಪರ್ಕ ಕಲ್ಪಿಸುವ ಒಟ್ಟು 12 ರಸ್ತೆಗಳ ಸುಧಾರಣೆ ಕಾರ್ಯ ಬರದಿಂದ ನಡೆದಿದೆ. ಜತೆಗೆ ಗಟಾರುಗಳ ಸ್ವಚ್ಛತೆ, ಕಸ ನಿರ್ವಹಣೆ ಕಾರ್ಯ ಶುರು ಮಾಡಲಾಗಿದೆ. ಮಹಾನಗರ ಪಾಲಿಕೆಯ 100 ಸಿಬ್ಬಂದಿ ಬಳಸಿಕೊಂಡು ಕಸ ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

CM Basavaraj Bommai unveils the logo and mascot of National Youth Festival to be held in Dharwad from Jan 12

ಯುವ ಸಮ್ಮೇಳನದ ಹಿನ್ನೆಲೆಯಲ್ಲಿ ಧಾರವಾಡ-ಹುಬ್ಬಳ್ಳಿ ನಗರಗಳ ಚಹರೆ ಬದಲಿಸಲು ಕೆಲವು ಕಾರ್ಯಗಳನ್ನು ಮಾಡುತ್ತಿದ್ದೇವೆ. ಮುಖ್ಯ ರಸ್ತೆ, ಪ್ರವಾಸಿ ಸ್ಥಳಗಳ ವೈಭವೀಕರಣ, ರಸ್ತೆ, ಉದ್ಯಾನವನ, ಕೆರೆ ಹಾಗೂ ಸಾಂಸ್ಕೃತಿಕ ಸ್ಥಳಗಳನ್ನು ಶೃಂಗರಿಸಲಾಗುತ್ತಿದೆ. ಒಟ್ಟಾರೆ ಹು-ಧಾ ಅವಳಿ ನಗರದಲ್ಲಿ ಒಂದು ವಾರ ಹಬ್ಬದ ವಾತಾವರಣ ಮೂಡುವಂತೆ ಕೆಲಸ ಮಾಡಲಾಗುತ್ತಿದೆ. ಆಗಮಿಸುವ ಪ್ರತಿನಿಧಿಗಳಿಗೆ ಯೋಗಾ ಮ್ಯಾಟ್‌, ಧಾರವಾಡ ಪೇಢೆ, ರಾಷ್ಟ್ರಧ್ವಜವಿರುವ ಪ್ರೇಮ್‌ ಕೊಡುವ ಮೂಲಕ ಧಾರವಾಡದ ಯುವ ಸಮ್ಮೇಳನದ ನೆನಪು ಸದಾ ಇರುವಂತೆ ನೋಡಿಕೊಳ್ಳಲಾಗುವುದು.

ಲೋಗೋ ವಿಶೇಷತೆ ಏನು?

ರಾಷ್ಟ್ರೀಯ ಯುವಜನೋತ್ಸವದ ಲೋಗೋ ಭಾರತದ ರಾಷ್ಟ್ರೀಯ ಪುಷ್ಪವಾಗಿರುವ ತಾವರೆಯಿಂದ ಪ್ರೇರೇಪಿತವಾಗಿದೆ. ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆಯ ನಡುವೆಯೂ ಇರುವ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ, ವಿದೇಶಾಂಗ ವ್ಯವಹಾರದಲ್ಲಿ ಹಾಗೂ ಸೇನಾಬಲದಲ್ಲಿ ಭಾರತದ ಉನ್ನತಿಯನ್ನು ಬಿಂಬಿಸುವ ಜೊತೆಗೆ, ಜಿ20 ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಸಹ ಅಭಿವೃಕ್ತಪಡಿಸುತ್ತದೆ.

ಚಂಪಿ ಚಿಕ್ಕ ಎಂಬ ಮ್ಯಾಸ್ಕಾಟ್

ಬೆಂಗಳೂರಿನ ಇನ್ಬಂ ಅವರು ರೂಪಿಸಿದ ಚಂಪಿ ಮ್ಯಾಸ್ಕಟ್ ಆಯ್ಕೆಯಾಗಿದ್ದು, ಅವರಿಗೂ 50 ಸಾವಿರ ರೂ. ಗಳ ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸವನ್ನು ಹೊಂದಿದ್ದು, ಕರ್ನಾಟಕದಲ್ಲಿ ಅತಿ ಹೆಚ್ಚಿರುವ ಆನೆಗಳ ಸಂಖ್ಯೆಯಯನ್ನು ಪ್ರತಿನಿಧಿಸುತ್ತದೆ. ಜೊತೆಗೆ ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿಯ ಜೊತೆಗೆ ಕ್ರೀಡೆ, ಸ್ಟಾರ್ಟಪ್, ನಾವೀನ್ಯತೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ.

English summary
CM Basavaraja Bommai today released the logo and mascot of the National Youth Festival to be held in Dharwad from January 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X