ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಐಟಿ ಬಗ್ಗೆ ಸಿದ್ದು ಪತ್ರ, ಸೆ.23ರಂದು ಹುಬ್ಬಳ್ಳಿ-ಧಾರವಾಡ ಬಂದ್

|
Google Oneindia Kannada News

ಧಾರವಾಡ, ಸೆಪ್ಟೆಂಬರ್ 21 : ಭಾರತೀಯ ತಂತ್ರಜ್ಞಾನ ಸಂಸ್ಥೆಯನ್ನು ರಾಯಚೂರಿಗೆ ಸ್ಥಳಾಂತರ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದು ಹುಬ್ಬಳ್ಳಿ-ಧಾರವಾಡ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

'ರಾಯಚೂರಿಗೆ ಐಐಟಿ ಸ್ಥಳಾಂತರ ಮಾಡುವುವಂತೆ ಬರೆದಿರುವ ಪತ್ರವನ್ನು ವಾಪಸ್ ಪಡೆಯಬೇಕು' ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಸೆ.23ರಂದು ಹುಬ್ಬಳ್ಳಿ-ಧಾರವಾಡ ಬಂದ್ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. [ಐಐಟಿ ರಾಯಚೂರಿಗೆ ಸಿದ್ದರಾಮಯ್ಯ ಪತ್ರ]

iit

ಸೋಮವಾರ ಧಾರವಾಡದ ಆಲೂರು ವೆಂಕಟರಾವ್ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ತಕ್ಷಣ ಪತ್ರವನ್ನು ಮುಖ್ಯಮಂತ್ರಿಗಳು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಲಾಯಿತು. [ಅಸಲಿಗೆ, ಕರ್ನಾಟಕಕ್ಕೆ ಐಐಟಿ ಅಗತ್ಯವಿದೆಯಾ?]

'ಗೊಂದಲ ಮೂಡಿಸಬೇಡಿ' : 'ಐಐಟಿ ನಿರ್ಮಾಣದ ಕುರಿತು ಜನರಲ್ಲಿ ಗೊಂದಲ ಮೂಡಿಸಬೇಡಿ. ಐಐಟಿಯನ್ನು ರಾಯಚೂರಿಗೆ ಸ್ಥಳಾಂತರ ಮಾಡುವುದು ಬೇಡ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. [ರಾಯಚೂರಿಗೆ ಐಐಟಿ ಬೇಕೆಂದ್ರು ಖರ್ಗೆ]

ಅಂದಹಾಗೆ ಕರ್ನಾಟಕ ಸರ್ಕಾರ ಹುಬ್ಬಳ್ಳಿ-ಧಾರವಾಡ, ರಾಯಚೂರು, ಮೈಸೂರು ಜಿಲ್ಲೆಗಳಲ್ಲಿ ಐಐಟಿ ಸ್ಥಾಪನೆ ಮಾಡಬಹುದು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿ ಆರ್‌. ಸುಬ್ರಮಣ್ಯಂ ನೇತೃತ್ವದ ಸಮಿತಿ ಧಾರವಾಡದಲ್ಲಿ ಐಐಟಿ ಸ್ಥಾಪಿಸುವಂತೆ ಶಿಫಾರಸು ಮಾಡಿತ್ತು. ಇದಕ್ಕೆ ಕೆಲವು ದಿನಗಳ ಹಿಂದೆ ಒಪ್ಪಿಗೆ ಸಿಕ್ಕಿತ್ತು.

raichur

ಸಂಸದರು ಮನವಿ ಮಾಡಿದ್ದರು : ಐಐಟಿಯನ್ನು ರಾಯಚೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಕೆಲವು ತಿಂಗಳ ಹಿಂದೆ ಸಂಸದರ ನಿಯೋಗ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಐಐಟಿ ರಾಯಚೂರಿನಲ್ಲಿಯೇ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿದ್ದರು.

English summary
CM Siddaramaiah has appealed the Smriti Irani to reconsider the decision on locate the proposed Indian Institute of Technology (IIT) at Raichur. Hubballi-Dharwad West MLA Arvind Bellad condemned this and Hubli-Dharwad bandh called on September 23, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X