ಮಹಾನಗರ ಪಾಲಿಕೆ ಚುನಾವಣೆ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮಹತ್ವದ ಸಭೆ

ಧಾರವಾಡ, ಆಗಸ್ಟ್ 17; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 82 ವಾರ್ಡ್‌ಗಳಿಗೆ ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯನ್ನು ಆರಂಭಿಸಿದ್ದು, ಸರಣಿ ಸಭೆಗಳನ್ನು ನಡೆಸುತ್ತಿವೆ.

ಹುಬ್ಬಳ್ಳಿ- ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಾನಗರ ಪಾಲಿಕೆಯ ಚುನಾವಣೆ ಕುರಿತು ಪಕ್ಷದ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಮಂಗಳವಾರ ಸಭೆ ನಡೆಯಿತು. ವಾರ್ಡ್ ಪುನರ್ ವಿಂಗಡನೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಸಭೆಯಲ್ಲಿ ಮಾಜಿ ಸಚಿವ ಆರ್. ವಿ. ದೇಶಪಾಂಡೆ, ತನ್ವೀರ್ ಸೇಠ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವ ನಾರಾಯಣ, ಹುಬ್ಬಳ್ಳಿ ನಗರ ಜಿಲ್ಲಾ ಅಧ್ಯಕ್ಷ ಅಲ್ತಾಪ್ ಹುಳ್ಳೂರ, ಹುಬ್ಬಳ್ಳಿ ಗ್ರಾಮೀಣ ಭಾಗದ ಜಿಲ್ಲಾಧ್ಯಕ್ಷ ಅನೀಲ ಪಾಟೀಲ ಮುಂತಾದವರು ಪಾಲ್ಗೊಂಡಿದ್ದರು.

Congress Meeting On Hubli Dharwad Municipal Corporation Elections

82 ವಾರ್ಡ್‌ಗಳಾಗಿವೆ; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 67 ವಾರ್ಡ್‌ಗಳಿತ್ತು. ಈಗ ವಾರ್ಡ್‌ಗಳ ಪುನರ್ ವಿಂಗಡನೆ ಮಾಡಲಾಗಿದೆ. ಇದಕ್ಕೆ ಹಲವಾರು ಆಕ್ಷೇಪಗಳು ಬಂದು ವಿವಾದ ನ್ಯಾಯಾಲಯ ಮೆಟ್ಟಿಲೇರಿದ ಕಾರಣ ಸುಮಾರು 2 ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. ಈಗ ಪ್ರತಿನಿಧಿಗಳ ಆಯ್ಕೆಗೆ ಕಾಲ ಕೂಡಿ ಬಂದಿದೆ.

ರಾಜ್ಯ ಚುನಾವಣಾ ಆಯೋಗ ಈಗ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ ಮಾಡಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ನೀತಿ ಸಂಹಿತೆ ಜಾರಿಗೆ ಬಂದಿದೆ. ಆಗಸ್ಟ್ 23ರ ತನಕ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.

82 ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಣಕ್ಕಿಳಿಸುವ ಸವಾಲು ಪಕ್ಷಗಳ ಮುಂದಿದೆ. ಪಾಲಿಕೆ ಸದಸ್ಯರಾಗಿದ್ದವರಿಗೆ ಮೀಸಲಾತಿ ಕಾರಣದಿಂದ ಹಲವು ವಾರ್ಡ್ ಕೈತಪ್ಪಿದೆ. ಅಲ್ಲಿಗೆ ಹೊಸಬರನ್ನು ಕಣಕ್ಕಿಳಿಸಬೇಕು. ಹಳಬರಿಗೆ ಬೇರೆ ವಾರ್ಡ್‌ಗಳಲ್ಲಿ ಅವಕಾಶ ನೀಡುವ ಸವಾಲು ಇದೆ.

ಕಾಂಗ್ರೆಸ್ ಪಕ್ಷ ಮಹಾನಗರ ಪಾಲಿಕೆ ಚುನಾವಣೆಗಾಗಿ ಹಲವು ಸಭೆಗಳನ್ನು ನಡೆಸಿದೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆಗಳನ್ನು ನಡೆಸಿದೆ. ಒಂದು ವಾರ್ಡ್‌ಗೆ 4 ರಿಂದ 5 ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ಸಿಗಲಿದೆ? ಎಂದು ಕಾದು ನೋಡಬೇಕಿದೆ. ವಾರ್ಡ್‌ವಾರು ಮೀಸಲಾತಿ ಪಟ್ಟಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ಚುನಾವಣೆ ಸಿದ್ಧತೆಯನ್ನು ನಡೆಸುತ್ತಿದೆ.

ಬಿಜೆಪಿ ಸಿದ್ಧತೆಯೂ ಜೋರು; ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ತಯಾರಿ ಜೋರಾಗಿಯೇ ನಡೆದಿದೆ. ಬೂತ್ ಕಮಿಟಿ, ಪೇಜ್ ಪ್ರಮುಖ್, ಪಂಚರತ್ನ ಸಮಿತಿ, ಶಕ್ತಿ ಕೇಂದ್ರ ಹೀಗೆ ಅನೇಕ ಸದಸ್ಯರನ್ನು ಪಕ್ಷ ನೇಮಕ ಮಾಡಿದೆ. ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಚುನಾವಣೆ ಉಸ್ತುವಾರಿಗಳಾಗಿ ನೇಮಕವಾಗಿದ್ದಾರೆ.

ಜೆಡಿಎಸ್ ಪಕ್ಷ ಸಭೆ ಸಭೆಗಳನ್ನು ನಡೆಸಿದೆ. ಎಲ್ಲಾ 82 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ ಎಂದು ಘೋಷಣೆ ಮಾಡಿದೆ. ಪಕ್ಷದಲ್ಲಿ ಟಿಕೆಟ್‌ಗಾಗಿ ಪೈಪೋಟಿಗಿಂತ ಸ್ಪರ್ಧಿಸುವವರಿಗಾಗಿ ಎದುರು ನೋಡುವ ಸ್ಥಿತಿ ಇದೆ.

ಆಗಸ್ಟ್ 16ರಂದು ಚುನಾವಣಾಧಿಕಾರಿಗಳಾದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚುನಾವಣಾ ಅಧಿಸೂಚನೆ ಪ್ರಕಟಿಸಿದ್ದಾರೆ. 82 ವಾರ್ಡ್‌ಗಳಲ್ಲಿ ಮತದಾನಕ್ಕೆ 837 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 8,11,537 ಮತದಾರರು ಇದ್ದಾರೆ. ಐದು ವಾರ್ಡ್‌ಗಳಿಗೆ ಒಂದರಂತೆ ನಾಮಪತ್ರ ಸ್ವೀಕಾರ ಮಾಡಲು 16 ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಸೆಪ್ಟೆಂಬರ್ 3ರಂದು ಬೆಳಗಾವಿ (58 ವಾರ್ಡ್), ಹುಬ್ಬಳ್ಳಿ-ಮಹಾನಗರ ಪಾಲಿಕೆ (82 ವಾರ್ಡ್) ಮತ್ತು ಕಲಬುರಗಿ (55 ವಾರ್ಡ್‌) ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದೆ. ಸೆಪ್ಟೆಂಬರ್ 6ರಂದು ಮತ ಎಣಿಕೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+