ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಂದಗೋಳ ಉಪ ಚುನಾವಣೆ : ಬಿಜೆಪಿಗೆ ಶಾಕ್‌ ಕೊಟ್ಟ ಡಿಕೆಶಿ

|
Google Oneindia Kannada News

ಧಾರವಾಡ, ಮೇ 10 : ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ಹೊತ್ತಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಮೇ 19ರಂದು ಉಪ ಚುನಾವಣೆಗೆ ಮತದಾನ ನಡೆಯಲಿದೆ.

ಶುಕ್ರವಾರ ಧಾರವಾಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಬಸವರಾಜ ಅಬರಗೊಂಡ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದರು. ಡಿ.ಕೆ.ಶಿವಕುಮಾರ್ ಅವರು ಬಸವರಾಜ ಅವರ ಜೊತೆ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನಿಸಿದ್ದರು.

ಕುಂದಗೋಳ : ಡಿ.ಕೆ.ಶಿವಕುಮಾರ್ ತಂತ್ರದಿಂದ ಬಿಜೆಪಿಗೆ ನಡುಕಕುಂದಗೋಳ : ಡಿ.ಕೆ.ಶಿವಕುಮಾರ್ ತಂತ್ರದಿಂದ ಬಿಜೆಪಿಗೆ ನಡುಕ

ಬಸವರಾಜ ಅಬರಗೊಂಡ ಅವರು ಸಾಕಷ್ಟು ಪ್ರಭಾವ ಹೊಂದಿರುವ ಬಿಜೆಪಿ ನಾಯಕರಾಗಿದ್ದರು. ಅವರ ಜೊತೆ ಹಲವಾರು ಬೆಂಬಲಿಗರು ಸಹ ಕಾಂಗ್ರೆಸ್ ಸೇರಿದ್ದು, ಉಪ ಚುನಾವಣೆಗೆ 9 ದಿನಗಳು ಹಾಕಿ ಇರುವಾಗ ಬಿಜೆಪಿಗೆ ಹಿನ್ನಡೆ ಉಂಟಾಗಿದೆ.

ಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲಕುಂದಗೋಳ ಉಪ ಚುನಾವಣೆ : ಪಕ್ಷಗಳ ಬಲಾಬಲ

Kundgol by election

ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ಎಸ್‌.ಐ.ಚಿಕ್ಕನಗೌಡ, ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ಅವರು ಕಣದಲ್ಲಿದ್ದಾರೆ.

ಕುಂದಗೋಳ ಉಪ ಚುನಾವಣೆ : ಅನುಕಂಪದ ನಿರೀಕ್ಷೆಯಲ್ಲಿ ಬಿಜೆಪಿ, ಕಾಂಗ್ರೆಸ್ಕುಂದಗೋಳ ಉಪ ಚುನಾವಣೆ : ಅನುಕಂಪದ ನಿರೀಕ್ಷೆಯಲ್ಲಿ ಬಿಜೆಪಿ, ಕಾಂಗ್ರೆಸ್

ಡಿ.ಕೆ.ಶಿವಕುಮಾರ್ ಅವರನ್ನು ಕುಂದಗೋಳ ಚುನಾವಣೆ ಉಸ್ತುವಾರಿಯಾಗಿ ನೇಮಿಸಿದಾಗಲೇ ಬಿಜೆಪಿ ಆತಂಕಗೊಂಡಿತ್ತು. ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿರುವ ಡಿ.ಕೆ.ಶಿವಕುಮಾರ್ ಕುಂದಗೋಳ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿಸುತ್ತಿದ್ದಾರೆ.

ಪ್ರತಿದಿನ ಕಾರ್ಯಕರ್ತರ ಸಭೆ ನಡೆಸುತ್ತಿರುವ ಡಿ.ಕೆ.ಶಿವಕುಮಾರ್ ಅವರು ಸ್ಥಳೀಯ ಬಿಜೆಪಿ ಕಾರ್ಯಕರ್ತರ ಮೇಲೆ ಕಣ್ಣಿಟ್ಟಿದ್ದಾರೆ. ಉಪ ಚುನಾವಣೆ ಗೆಲ್ಲಲು ತಂತ್ರಗಳನ್ನು ರೂಪಿಸಿ, ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸೂಚನೆಗಳನ್ನು ನೀಡುತ್ತಿದ್ದಾರೆ.

ಕುಂದಗೋಳ ಉಪ ಚುನಾವಣೆಯಲ್ಲಿ ಕುಸುಮಾ ಶಿವಳ್ಳಿ ಅವರನ್ನು ಗೆಲ್ಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಪಣ ತೊಟ್ಟಿದ್ದಾರೆ. ಕ್ಷೇತ್ರದ ವಿವಿಧ ಭಾಗಗಳಲ್ಲಿ ಅವರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ ಅವರು 2008ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಕಣಕ್ಕಿಳಿದು ಸೋತಿದ್ದರು. 2018ರ ಚುನಾವಣೆಯಲ್ಲಿ 634 ಮತಗಳ ಅಂತರದಿಂದ ಸೋತಿದ್ದರು.

English summary
Big shock for BJP in Kundgol by election. Dharwad milk union former president Basavaraj Abaragonda joined Congress in the presence of Minister D.K.Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X