ಮೋದಿ ನಾಯಕತ್ವಕ್ಕೆ ಹಿಂದುಳಿದ ವರ್ಗದವರಿಂದ ಪ್ರಾಧಾನ್ಯತೆ: ಪ್ರಲ್ಹಾದ್ ಜೋಶಿ ವಿಶ್ವಾಸ
ಧಾರವಾಡ, ಮೇ. 06: ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಭಾನುವಾರ ಹೇಳಿದ್ದಾರೆ. ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸುನ ಪ್ರಚಾರ ನಡೆಸಿದ ಪ್ರಲ್ಹಾದ್ ಜೋಶಿ ಜೆ.ಎಸ್.ಎಸ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಈ ಬಾರಿ ರಾಜ್ಯದ ಹಿಂದುಳಿದ ವರ್ಗದವರು ನಂಬುವ ಸ್ಥಿತಿಯಲಿಲ್ಲ. ಏಕೆಂದರೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಸಿಎಂ ಮಾಡಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈಗಾಗಲೇ ಡಿ.ಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜ್ಯದ ಹಿಂದುಳಿದ ವರ್ಗದವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ದೇಶದಾದ್ಯಂತ ಹಿಂದುಳಿದ ವರ್ಗದವರು ಮನ್ನಣೆ ನೀಡಿದ್ದಾರೆ. ಹಿಂದುಳುದ ವರ್ಗಗಳ ಮೇಲೆ ಮೋದಿ ಅವರು ಕಾಳಜಿ ಹಿಂದಿದ್ದು ಹಲವು ಯೋಜನೆಗಳನ್ನ ಹಿಂದುಳಿದ ವರ್ಗದವರ ಅಭಿವೃದ್ದಿಗೆ ನೀಡಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಹಿಂದುಳಿದ ವರ್ಗದರು ಬಿಜೆಪಿ ಬೆಂಬಲಿಸುತ್ತಿದ್ದಾರೆ ಎಂಸಿದ್ದಾರೆ.
ಸಿದ್ದರಾಮಯ್ಯ ಅವರ ಅಹಿಂದ ರಾಜಕಾರಣ ಈ ಬಾರಿಯ ಚುನಾವಣೆಯಲ್ಲಿ ಫಲಿಸುವುದಿಲ್ಲ. ಏಕೆಂದರೆ ಅಹಿಂದ ವರ್ಗದವರಿಗೆ ಸಿದ್ದರಾಮಯ್ಯ ಅವರು ಸಿಎಂ ಆಗಿ ಮಾಡಿದ್ದೇನು ಇಲ್ಲ. ನೈಜವಾಗಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ದಿಗೆ ಯೋಜನೆಗಳನ್ನ ಹಾಕಿ ಕೆಲಸ ಮಾಡಿದ್ದು ಬಿಜೆಪಿ ಸರ್ಕಾರ. ಸಿದ್ದರಾಮಯ್ಯ ಅವರನ್ನ ಈ ಬಾರಿ ಕಾಂಗ್ರೆಸ್ ಸಿಎಂ ಮಾಡಲ್ಲ ಅನ್ನೋದು ಹಿಂದುಳಿದ ವರ್ಗದವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬುದು ಬಿಜೆಪಿಯ ಗುರಿಯಾಗಿದೆ. ಎಲ್ಲ ಸಮುದಾಯದವರನ್ನು ಒಟ್ಟಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪಕ್ಷ ಬಿಜೆಪಿ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಪ್ರಲ್ಹಾದ್ ಜೋಶಿ ರಾಜ್ಯದ ಮತದಾರರಲ್ಲಿ ಮನವಿ ಮಾಡಿದ್ದಾರೆ.












Click it and Unblock the Notifications