ಚಿಕ್ಕಮಗಳೂರು, ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ: ಶನಿವಾರ ಶಾಲಾ ಕಾಲೇಜುಗಳಿಗೆ ರಜೆ
ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಶೀತಗಾಳಿ ಬೀಸುತ್ತಿರುವದರಿಂದ ಈಗಾಗಲೇ ಜುಲೈ 25, 26 ರಂದು ಎರಡು ದಿನ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ನೀಡಿದ ರಜೆಯನ್ನು ನಾಳೆ ಜುಲೈ 27, 2024 ರವರೆಗೆ ಮುಂದುವರೆಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ಶೀತಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.
ಚಿಕ್ಕಮಗಳೂರಿನಲ್ಲೂ ರಜೆ
ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ-ಮಳೆ ಆಗುತ್ತಿದ್ದು, ಜಿಲ್ಲೇಯ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ರಜೆ ಇರುವುದಿಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.












Click it and Unblock the Notifications