• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರವಾಡ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ: 66 ವಿದ್ಯಾರ್ಥಿಗಳಿಗೆ ಸೋಂಕು

|
Google Oneindia Kannada News

ಧಾರವಾಡ, ನವೆಂಬರ್ 25: ಅವಳಿನಗರದಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಮತ್ತೆ ಹೆಚ್ಚಾಗಿದೆ. ರಾಜ್ಯದ ಧಾರವಾಡ ಜಿಲ್ಲೆಯ ಎಸ್‌ಡಿಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಇದರಿಂದಾಗಿ ಎರಡು ಹಾಸ್ಟೆಲ್‌ಗಳನ್ನು ಸೀಲ್ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಹಾಜರಾಗಿದ್ದರಿಂದ ಕೊರೊನಾ ವೈರಸ್ ಹರಡುವಿಕೆಗೆ ಕಾರಣವಾಗಿದೆ. ಇದರಿಂದ ಪಾಸಿಟಿವ್ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 400 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ..

ಕಾಲೇಜಿಗೆ ದಾಖಲಾಗುವ ಹೆಚ್ಚಿನ ವಿದ್ಯಾರ್ಥಿಗಳು ಬೇರೆ ರಾಜ್ಯಗಳಿಂದ ಬಂದವರು. ಕೊರೊನಾ ಸೋಂಕಿಗೆ ಒಳಗಾದ ಎಲ್ಲ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳು. ಎಸ್‌ಡಿಎಂ ಕಾಲೇಜಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ 40 ವೈದ್ಯಕೀಯ ವಿದ್ಯಾರ್ಥಿಗಳು ಈ ಹಿಂದೆ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು. ನಂತರ, ಇತರ ಕೆಲವು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ, ಅವರಿಗೂ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ನಂತರ ಸೋಂಕಿತ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ ಈಗ 66 ಕ್ಕೆ ಏರಿಕೆಯಾಗಿದೆ. ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲು ವೈದ್ಯಕೀಯ ಕಾಲೇಜು ನಿರ್ಧರಿಸಿದೆ. ಈವರೆಗೆ 300 ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, 66 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಕೊರೊನಾ ಸೋಂಕಿಗೆ ಒಳಗಾದ ಎಲ್ಲಾ ವಿದ್ಯಾರ್ಥಿಗಳು ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ತೆಗೆದುಕೊಂಡಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿದ್ದಾರೆ. ಸೋಂಕಿನ ಕಾರಣ ಅವರು ಈಗ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪೊಲೀಸರು ಆವರಣವನ್ನು ಸುತ್ತುವರಿದು ಬ್ಯಾರಿಕೇಡ್ ಹಾಕುವ ಮೂಲಕ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಹಾಸ್ಟೆಲ್‌ನಲ್ಲಿ ಆಸ್ಪತ್ರೆ ಸಿಬ್ಬಂದಿಯಲ್ಲದೆ ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಶವಂತ ಮಾದಿನಕರ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಹಾಸ್ಟೆಲ್ ಶುಚಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Corona blast at Dharwad Medical College: 66 students infected

ಇದಕ್ಕೂ ಮುನ್ನ ರಾಜಸ್ಥಾನದ ಉದಯಪುರದ ಶಾಲೆಯೊಂದರಲ್ಲಿ 11 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ತೆಲಂಗಾಣದಲ್ಲೂ ಶಾಲೆಯೊಂದರಲ್ಲಿ 28 ವಿದ್ಯಾರ್ಥಿನಿಯರು ಕೊರೊನಾಗೆ ಬಲಿಯಾಗಿದ್ದಾರೆ. ಅಷ್ಟೇ ಅಲ್ಲ, ಒಡಿಶಾದಲ್ಲಿಯೂ ಕೊರೋನಾ ಮಕ್ಕಳ ನಡುವೆ ವೇಗವಾಗಿ ಹರಡುತ್ತಿದೆ. 53 ಶಾಲಾ ವಿದ್ಯಾರ್ಥಿಗಳು ಮತ್ತು 22 ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅವಳಿನಗರದಲ್ಲಿ ಸುಮಾರು 9 ವಲಯ ವ್ಯಾಪ್ತಿಯ 20 ವಾರ್ಡ್‍ಗಳ 42 ಪ್ರದೇಶಗಳಲ್ಲಿ 1365 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಇದೇ ರೀತಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ.

   ಕರ್ನಾಟಕದ ಮೇಲೆ ಎಸಿಬಿ ಬಿಗಿ ಕಾರ್ಯಾಚರಣೆ : 60 ಸ್ಥಳಗಳಲ್ಲಿ 400ಕ್ಕೂ ಹೆಚ್ಚು ಸರಗಳ್ಳರಿಂದ ಶೋಧ | Oneindia Kannada

   ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಮೊದಲ ವರ್ಷದ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿಗೆ ಒಳಗಾದ ವಿದ್ಯಾರ್ಥಿಗಳಲ್ಲಿ ಬಹುತೇಕರು ಹೊರರಾಜ್ಯದವರು. ಅದೃಷ್ಟವಶಾತ್ ಕೊರೊನ ಎಂದು ಬಹುಬೇಗ ಪತ್ತೆಹಚ್ಚಲಾಗಿದ್ದು ಸೂಕ್ತವಾಗಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

   English summary
   66 students of SDM College of Medical Sciences, Dharwad, Karnataka have been found to be corona positive.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X