ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಗುಂಡಿಕ್ಕಿ : ಬಿದರಿ

|
Google Oneindia Kannada News

Shankar bidari
ಹುಬ್ಬಳ್ಳಿ, ನ.22 : "ಭ್ರಷ್ಟ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಹತ್ಯೆ ಮಾಡಬೇಕು" ಎಂದು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾ ಇಂತಹ ಹೇಳಿಕೆ ಕೊಟ್ಟಿದ್ದಾರೆ.

ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ ಬಿದರಿ, ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಚಾರದಲ್ಲಿ ತೊಡಗುವ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಹತ್ಯೆ ಮಾಡಬೇಕು ಎಂದು ಹೇಳಿದರು. ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ನೀಡಿರುವ ಈ ಹೇಳಿಕೆ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ.

ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಬೇಕು, ಭ್ರಷ್ಟಾಚಾರ ತೊಲಗಬೇಕು ಎಂದು ಹೇಳಿದ ಶಂಕರ ಬಿದರಿ, ಭ್ರಷ್ಟಾಚಾರ ಮಾಡಿ ಕೋಟಿ ಕೋಟಿ ಹಣ ಸಂಪಾದನೆ ಮಾಡುವ ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಹತ್ಯೆ ಮಾಡಬೇಕು. ಸದ್ಯ ಅವರಿಗೆ ಸರಿಯಾದ ಶಿಕ್ಷೆ ಆಗುತ್ತಿಲ್ಲ ಎಂದು ಅವರು ಹೇಳಿಕೆ ನೀಡಿದರು. (ಶಂಕರ ಬಿದರಿ ಹೇಳಿಕೆಗೆ ಭಾರೀ ವಿರೋಧ, ಯಾರು ಏನು ಹೇಳಿದರು)

ಬಿದರಿ ಸಮರ್ಥನೆ : ತಮ್ಮ ಹೇಳಿಕೆ ಬಗ್ಗೆ ಸಮರ್ಥನೆ ನೀಡಿರುವ ಶಂಕರ ಬಿದರಿ, ಪ್ರಪಂಚದ ವಿವಿಧ ದೇಶಗಳಲ್ಲಿ ತಪ್ಪಿತಸ್ಥರನ್ನು ವಿವಿಧ ರೀತಿಯಲ್ಲಿ ಶಿಕ್ಷೆಗೆ ಗುರಿಪಡಿಸುತ್ತಾರೆ. ಅಂತೆಯೇ ನಮ್ಮ ದೇಶದಲ್ಲಿ ಅವರನ್ನು ಸಾರ್ವಜನಿಕವಾಗಿ ಶಿಕ್ಷಿಸಬೇಕು ಎಂದು ಹೇಳಿದ್ದೇನೆ. ನ್ಯಾಯಾಂಗದ ಮೂಲಕ ತಪ್ಪಿತಸ್ಥರೆಂದು ಸಾಬೀತಾದವರಿಗೆ ಮಾತ್ರ ಶಿಕ್ಷೆಯಾಗಬೇಕು ಎಂದು ಹೇಳಿದ್ದೇನೆ ಎಂದು ಸಮರ್ಥನೆ ನೀಡಿದ್ದಾರೆ.

ಹತಾಶೆಯ ಮಾತು : ಶಂಕರ ಬಿದರಿಅವರ ಮಾತಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಸುರೇಶ್ ಕುಮಾರ್, ಇದು ಹತಾಶೆಯ ಮಾತು ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಭ್ರಷ್ಟಾಚಾರ ತಡೆಗಟ್ಟಲು ಅನೇಕ ಕಾನೂನುಗಳಿವೆ, ಅವರನ್ನು ಗುಂಡಿಕ್ಕಿ ಹತ್ಯೆ ಮಾಡಬೇಕು ಎಂಬುದು ಹತಾಶೆಯ ಹೇಳಿಕೆ ಎಂದು ಹೇಳಿದ್ದಾರೆ.

English summary
Shoot corrupt Netas and Babus to clean the system #Karnataka Ex-DGP Shankar Bidari pours anger in Hubli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X