Get Updates
Get notified of breaking news, exclusive insights, and must-see stories!

ಧಾರವಾಡ: ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢ; 182ಕ್ಕೆ ಏರಿಕೆ

ಧಾರವಾಡ, ನವೆಂಬರ್ 26: ಧಾರವಾಡ ಎಸ್‌ಡಿಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಶುಕ್ರವಾರ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮುಂಚಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

ನ.17ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ತಿಳಿಸಿದ್ದಾರೆ.

ಗುರುವಾರ (ನ.25) ಸಂಜೆಯವರೆಗೆ ಮತ್ತೆ ಎಸ್‌ಡಿಎಂ ಆವರಣದ 690 ಜನರನ್ನು ಆರ್‌ಟಿ- ಪಿಸಿಆರ್ ಹಾಗೂ ಆರ್ಎಟಿ ತಪಾಸಣೆಗೆ ಒಳಪಡಿಸಲಾಗಿದೆ. ಕಿಮ್ಸ್, ಡಿಮ್ಹಾನ್ಸ್ ಹಾಗೂ ಎಸ್‌ಡಿಎಂನ ಕೋವಿಡ್ ಪ್ರಯೋಗಾಲಯಗಳಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗಿದೆ. 116 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಗುರುವಾರ ಮಧ್ಯರಾತ್ರಿಯ ನಂತರ ಈ ವರದಿಗಳು ಲಭ್ಯವಾಗಿದ್ದು, ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವುದರಿಂದ ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ.

Dharwad: Covid-19 Cases in SDM Medical College Rise To 182

ಪಾಲಕರ ತಪಾಸಣೆಗೂ ಸೂಚನೆ
ನ.17ರಂದು ಎಸ್‌ಡಿಎಂ ಆಸ್ಪತ್ರೆ ಬಳಿಯ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಕೆಲವು ಪಾಲಕರೂ ಕೂಡ ಭಾಗವಹಿಸಿದ್ದರೆಂದು ತಿಳಿದು ಬಂದಿದೆ. ಅಂತಹ ವ್ಯಕ್ತಿಗಳೂ ಕೂಡ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಇದುವರೆಗೆ ಎಸ್‌ಡಿಎಂ ಆವರಣದಿಂದ ಹೊರಗೆ ಎಲ್ಲಿಯೂ ಪ್ರಕರಣಗಳೂ ವರದಿಯಾಗಿಲ್ಲ.

ಹುಬ್ಬಳ್ಳಿ- ಧಾರವಾಡ ಅವಳಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ. ಸ್ವ್ಯಾಬ್, ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಈ ಮುನ್ನೆಚ್ಚರಿಕೆಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Dharwad: Covid-19 Cases in SDM Medical College Rise To 182


ಎಸ್‌ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು
ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಎಲ್ಲ 400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಗಂಟಲು ದ್ರವ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಎರಡು ಹಾಸ್ಟೆಲ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಸೋಂಕಿತರು ಎರಡು ಡೋಸ್ ಲಸಿಕೆ ಪಡೆದಿರುವುದರಿಂದ ತೀವ್ರತರ ರೋಗ ಲಕ್ಷಣಗಳು ಕಂಡು ಬಂದಿಲ್ಲ, ಔಷಧೋಪಚಾರ, ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಹೇಳಿದ್ದಾರೆ.

Dharwad: Covid-19 Cases in SDM Medical College Rise To 182

ಎಸ್‌ಡಿಎಂ ವೈದ್ಯಕೀಯ ಕಾಲೇಜು ಆವರಣಕ್ಕೆ ಭೇಟಿ ನೀಡಿ, ಹಾಸ್ಟೆಲ್ ಸೀಲ್‌ಡೌನ್ ಪ್ರದೇಶ ಪರಿಶೀಲಿಸಿ, ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನ.17ರಂದು ಕಾಲೇಜಿನ ಆವರಣದ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಹಲವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪರ್ಕಿತರ ತಪಾಸಣೆಗೆ ಸೂಚನೆ
ಎಸ್‌ಡಿಎಂ ಕಾಲೇಜಿನ ಅವರಣದ ಕಲಾಕ್ಷೇತ್ರದಲ್ಲಿ ಕಳೆದ ನ.17ರಂದು ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ವ್ಯಕ್ತಿಗಳ ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ತಪಾಸಣೆಗೆ ಒಳಪಟ್ಟು ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಕೈ ಬಿಡುವುದು ಉತ್ತಮ, ಅನಿವಾರ್ಯವಿದ್ದರೆ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಸುರಕ್ಷಿತ ಅಂತರದ ನಿಯಮಗಳನ್ನು ಪಾಲಿಸಿ, ಜನಸಂದಣಿಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ರತ್ನಮಾಲಾ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು.

Recommended Video

      New Zealand ವಿರುದ್ಧದ ಪಂದ್ಯದಲ್ಲಿ Pakistan ಬಗ್ಗೆ ಕೂಗು | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+