ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್19: ಟೆಲಿ ಕನ್ಸಲ್ಟೇಷನ್ ಚಿಕಿತ್ಸೆ ಪಡೆಯುವತ್ತ ಜನರ ಒಲವು!

|
Google Oneindia Kannada News

ಧಾರವಾಡ, ಜುಲೈ 11: ಕೊರೊನಾ ವೈರಸ್ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬ ಆತಂಕವನ್ನು ಕಡಿಮೆ ಮಾಡುವಂತಹ ಪ್ರಯತ್ನಗಳು ಸರ್ಕಾರದಿಂದ ಆರಂಭವಾಗಿದೆ. ಕೋವಿಡ್ ಸೋಂಕು ಇದ್ದರೂ ಕೂಡ ರೋಗ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣವುಳ್ಳ ಜನರಿಗೆ ತಮ್ಮ ಮನೆಗಳಲ್ಲಿಯೇ ಟೆಲಿ ಕನ್ಸಲ್ಟೇಶನ್ ಮೂಲಕ ಚಿಕಿತ್ಸೆ ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಇದರಿಂದಾಗಿ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದ್ದು, ಜನರ ಆತಂಕವೂ ಸೋಂಕಿನ ಬಗ್ಗೆ ತಗ್ಗಲಿಗೆ ಎಂದು ತಜ್ಞರು ಅಂದಾಜಿಸಿದ್ದಾರೆ.

ತಮ್ಮ ಮನೆಯಲ್ಲಿಯೇ ಪ್ರತ್ಯೇಕವಾಗಿ ಇದ್ದು ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಿದ ಎರಡನೇ ದಿನ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮತ್ತ 5 ಜನರು ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ.

ಭಾರತ-ಚೀನಾ ಪಾಲುದಾರರಾಗಬೇಕೇ ಹೊರತು ಪ್ರತಿಸ್ಪರ್ಧಿಗಳಲ್ಲ: ಚೀನಾಭಾರತ-ಚೀನಾ ಪಾಲುದಾರರಾಗಬೇಕೇ ಹೊರತು ಪ್ರತಿಸ್ಪರ್ಧಿಗಳಲ್ಲ: ಚೀನಾ

ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ರಹಿತರು ಮನೆಗಳಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಸರ್ಕಾರ ನಿಯಮಗಳನ್ನು ರೂಪಿಸಿದೆ.

Covid-19 Infected 17 People Have Been Treated Home Isolation In Dharwad District

ಜಿಲ್ಲೆಯಲ್ಲಿ ಈ ಅವಕಾಶ ಜಾರಿಗೊಳಿಸಿದ ನಂತರ ಎರಡು ದಿನಗಳಲ್ಲಿ 17 ಜನರನ್ನು ಹೋಂ ಐಸೋಲೇಷನ್ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಕೋವಿಡ್ ದೃಢಪಟ್ಟ ನಂತರ ವೈದ್ಯರ ತಂಡವು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಂಡು ಶಿಫಾರಸ್ಸು ಮಾಡುತ್ತದೆ. ಅದನ್ನು ಆಧರಿಸಿ ಕ್ರಮ ಜರುಗಿಸಲಾಗುತ್ತದೆ.

ಭಾರತದಲ್ಲಿ ಕೊವಿಡ್‌ನಿಂದ ಮೃತಪಡುವವರ ಪ್ರಮಾಣ ಶೇ.2.72ಕ್ಕೆ ಇಳಿಕೆಭಾರತದಲ್ಲಿ ಕೊವಿಡ್‌ನಿಂದ ಮೃತಪಡುವವರ ಪ್ರಮಾಣ ಶೇ.2.72ಕ್ಕೆ ಇಳಿಕೆ

ಸಾರ್ವಜನಿಕರು ಕೋವಿಡ್ ಬಗ್ಗೆ ಆತಂಕಕ್ಕೆ ಈಡಾಗಬಾರದು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ, ಪದೇ ಪದೇ ಕೈತೊಳೆಯುವದು ಮತ್ತಿತರ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಸೋಂಕಿನಿಂದ ದೂರ ಇರಬಹುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

English summary
On the second day, which allowed them to be individually treated at home by tele-consultation, five other people in the city of Hubli, Dharwad, volunteered to have this type of treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X