• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರವಾಡ; ಮಾಸ್ಕ್ ಹಾಕದವರಿಂದ 66,500 ರೂ. ದಂಡ ಸಂಗ್ರಹ

|
Google Oneindia Kannada News

ಧಾರವಾಡ, ಮಾರ್ಚ್ 19: ಕೋವಿಡ್ ಎರಡನೇ ಅಲೆಯ ಸಂಭವ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮನವಿ ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾರ ಮಹಾನಗರ ಪಾಲಿಕೆ ಮಾಸ್ಕ್‌ ಧರಿಸದ, ಸಾಮಾಜಿಕ ಅಂತರ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು ಗುರುವಾರ 71,300 ರೂ. ದಂಡವನ್ನು ಸಂಗ್ರಹ ಮಾಡಿದ್ದಾರೆ. ಪಾಲಿಕೆಯ 12 ವಲಯ ಕಚೇರಿ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಧಾರವಾಡ; ಜಾತ್ರೆ, ಉರುಸ್ ರದ್ದು. ಮಾಸ್ಕ್ ಧರಿಸದಿದ್ದರೆ ದಂಡ ಧಾರವಾಡ; ಜಾತ್ರೆ, ಉರುಸ್ ರದ್ದು. ಮಾಸ್ಕ್ ಧರಿಸದಿದ್ದರೆ ದಂಡ

ಮಾಸ್ಕ್ ಇಲ್ಲದೇ ಸಂಚಾರ ನಡೆಸುತ್ತಿದ್ದ 266 ಜನರಿಂದ 66,500 ರೂ. ದಂಡವನ್ನು ಸಂಗ್ರಹ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದ 24ರಿಂದ ಜನರಿಂದ 4,800 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ಧಾರವಾಡ; 74 ಕೇಂದ್ರಗಳಲ್ಲಿ ಲಸಿಕೆ ಲಭ್ಯ ಧಾರವಾಡ; 74 ಕೇಂದ್ರಗಳಲ್ಲಿ ಲಸಿಕೆ ಲಭ್ಯ

500 ಜನಕ್ಕೆ ಸೀಮಿತ; ಧಾರವಾಡ ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ, ಭಕ್ತಾದಿಗಳ ಆರೋಗ್ಯ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಧಾರವಾಡ ಜಿಲ್ಲೆಯಲ್ಲಿರುವ ಮುಜರಾಯಿ ಹಾಗೂ ಮುಜರಾಯಿಯೇತರ ದೇವಾಲಯಗಳಲ್ಲಿ 500ಕ್ಕಿಂತ ಹೆಚ್ಚಿನ ಸಾರ್ವಜನಿಕರು, ಭಕ್ತಾದಿಗಳು ದೇವರ ದರ್ಶನಕ್ಕೆ ಸೇರುವುದು, ಧಾರ್ಮಿಕ ಆಚರಣೆ ಮಾಡುವುದು ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಕೋವಿಡ್ ಬಗ್ಗೆ ಪತ್ರ ಲೇಖನ ಸ್ಪರ್ಧೆ; ಬಹುಮಾನ 25,000 ರೂ. ಕೋವಿಡ್ ಬಗ್ಗೆ ಪತ್ರ ಲೇಖನ ಸ್ಪರ್ಧೆ; ಬಹುಮಾನ 25,000 ರೂ.

ಆಯಾ ದೇವಾಲಯದ ದೈನಂದಿನ ಪೂಜಾ ಕಾರ್ಯಗಳನ್ನು ಅರ್ಚಕರು, ಪುರೋಹಿತರು ಹಾಗೂ ದೇವಾಲಯಕ್ಕೆ ಸಂಬಂಧಿಸಿದವರು ಮಾತ್ರ ಕೋವಿಡ್-19 ಮುಂಜಾಗೃತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಮಾರ್ಚ್ 18ರ ವರದಿಯಂತೆ ಧಾರವಾಡದಲ್ಲಿ 18 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 22,545. ಸಕ್ರಿಯ ಪ್ರಕರಣಗಳು 102.

   ಮಹಾರಾಷ್ಟ್ರದಿಂದ ಜಿಲ್ಲೆ ಸಂಪರ್ಕಿಸುವ ಎಲ್ಲಾ ಮಾರ್ಗದಲ್ಲಿ ಚೆಕ್‌ ಪೋಸ್ಟ್‌ ನಿರ್ಮಾಣ- ಜಿಲ್ಲಾಧಿಕಾರಿ ಪಿ ಸುನೀಲ್‌ ಕುಮಾರ್ ಮಾಹಿತಿ | Oneindia Kannada
   English summary
   Hubballi Dharwad city corporation collected 71,300 Rs fine from people for not wearing mask and not following social distance.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X