Cabinet: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಅಪ್ಡೇಟ್‌ ಕೊಟ್ಟ ಡಿ.ಕೆ ಶಿವಕುಮಾರ್‌!

ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ಮತ್ತು ಪುನರ್‌ ರಚನೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಮಾತನಾಡಿದ್ದಾರೆ. ಕಳೆದ ಆರು ತಿಂಗಳಿನಿಂದಲೂ ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಅಥವಾ ವಿಸ್ತರಣೆಯ ಬಗ್ಗೆ ಚರ್ಚೆಗಳು ನಡೆದಿವೆ. ಇದೀಗ ಕಾಂಗ್ರೆಸ್‌ ಹೈಕಮಾಂಡ್ ಭೇಟಿ ಮಾಡಲು ಹೋಗುತ್ತಿರುವ ಡಿ.ಕೆ ಶಿವಕುಮಾರ್‌ ಅವರು ಈ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನ ಪ್ರಭಾವಿ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಪದೇ ಪದೇ ಕಾಂಗ್ರೆಸ್‌ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದು ಹಲವು ಚರ್ಚೆಗಳಿಗೆ ಕಾರಣವಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ನಿರಂತರ ಬೆಲೆ ಏರಿಕೆಯನ್ನು ಮಾಡುತ್ತಿದ್ದು. ಜನ ಹೈರಾಣಾಗಿದ್ದಾರೆ. ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬಿದ್ದಿವೆ. ಈ ರೀತಿ ಇರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ದೆಹಲಿ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ.

D K Shivakumar Given Update on Reorganization of Cabinet

ಇನ್ನು ಯಾವ ಕಾರಣಕ್ಕಾಗಿ ತಾವು ದೆಹಲಿಗೆ ಹೋಗುತ್ತಿದ್ದೇನೆ ಹಾಗೂ ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಇಲ್ಲವೇ ವಿಸ್ತರಣೆ ಆಗಲಿದೆಯೇ ಎನ್ನುವ ಬಗ್ಗೆಯೂ ಅವರು ಅಪ್ಡೇಟ್‌ ಕೊಟ್ಟಿದ್ದಾರೆ. ಅದೇನು ಎನ್ನುವ ವಿವರ ನೋಡೋಣ.

Take a Poll

ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟನೆ ವಿಚಾರ ಹಾಗೂ ಕರ್ನಾಟಕದಲ್ಲಿ ಸಂಪುಟ ಪುನರ್‌ ರಚನೆಯ ಬಗ್ಗೆ ಡಿ.ಕೆ ಶಿವಕುಮಾರ್‌ ಅವರು ಹುಬ್ಬಳ್ಳಿಯ ಏರ್‌ಪೋರ್ಟ್‌ನಲ್ಲಿ ಮಾತನಾಡಿದ್ದಾರೆ. ಸಂಸತ್ತಿನ ಅಧಿವೇಶನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಲಿನ ಸಮಸ್ಯೆ ಇರುವುದರಿಂದ ಕರ್ನಾಟಕ ಭವನದ ಉದ್ಘಾಟನೆ ತಡವಾಗಿದೆ. ಇನ್ನು ಕರ್ನಾಟಕದಲ್ಲಿ ನಾಲ್ಕು ವಿಧಾನಪರಿಷತ್‌ ಸದಸ್ಯರ ಸ್ಥಾನ ಖಾಲಿ ಇದೆ ಈ ವಿಚಾರವಾಗಿ ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಲಾಗುವುದು. ಇದನ್ನು ಬಹಳಷ್ಟು ದಿನಗಳ ಕಾಲ ಖಾಲಿ ಇರಿಸಿಕೊಂಡು ಕೂರುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ.

ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಬಗ್ಗೆ ಏನಂದ್ರು: ಇನ್ನು ಡಿ.ಕೆ ಶಿವಕುಮಾರ್‌ ಅವರು ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆಯ ಬಗ್ಗೆ ಮಾತನಾಡಿದ್ದಾರೆ. ಸದ್ಯಕ್ಕೆ ಯಾವುದೇ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಇಲ್ಲ. ಕೆಲವು ಮಾಧ್ಯಮಗಳಲ್ಲಿ ಯಾರೋ ಸುಳ್ಳು ಮಾಹಿತಿ ನೀಡಿದ್ದಾರೆ. ಈ ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದಾಗಿದೆ. ಇದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್‌ಗೆ ?

ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್‌ಗೆ ಸೇರಲಿದ್ದಾರೆಯೇ ಎನ್ನುವ ಬಗ್ಗೆಯೂ ಡಿ.ಕೆ ಶಿವಕುಮಾರ್‌ ಅವರು ಕ್ಲಾರಿಟಿ ಕೊಟ್ಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್‌ಗೆ ಬರಲಿದ್ದಾರೆ ಎನ್ನುವುದು ಶುದ್ಧ ಸುಳ್ಳು. ನಮಗ್ಯಾಕೆ ಅವರ ಪಾರ್ಟಿ ವಿಚಾರ, ಅವರಾಯ್ತು ಅವರ ಪಾರ್ಟಿ ಉಂಟು ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+